ಉಮರ್ ಖಾಲಿದ್ TNIE
ದೇಶ

2020 ರ ದೆಹಲಿ ಗಲಭೆ: ಉಮರ್ ಖಾಲಿದ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು! ಷರತ್ತುಗಳೇನು?

ಈ ಪ್ರಕರಣದಲ್ಲಿ ಖಾಲಿದ್‌ಗೆ ತಾತ್ಕಾಲಿಕ ಪರಿಹಾರ ನೀಡಲಾಗಿತ್ತು ಎಂಬುದನ್ನು ಪರಿಗಣಿಸಿದ ನ್ಯಾಯಾಲಯ, ಜೂನ್ 1 ರಿಂದ ಜೂನ್ 3 ರವರೆಗೆ ಮಧ್ಯಂತರ ಜಾಮೀನು ನೀಡಿದೆ.

ನವದೆಹಲಿ: 2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಜೆಎನ್‌ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್‌ಗೆ ದೆಹಲಿ ಹೈಕೋರ್ಟ್ ಗುರುವಾರ ಮಧ್ಯಂತರ ಜಾಮೀನು ನೀಡಿದೆ.

ಈ ಪ್ರಕರಣದಲ್ಲಿ ಖಾಲಿದ್‌ಗೆ ತಾತ್ಕಾಲಿಕ ಪರಿಹಾರ ನೀಡಲಾಗಿತ್ತು ಎಂಬುದನ್ನು ಪರಿಗಣಿಸಿದ ನ್ಯಾಯಾಲಯ, ಜೂನ್ 1 ರಿಂದ ಜೂನ್ 3 ರವರೆಗೆ ಮಧ್ಯಂತರ ಜಾಮೀನು ನೀಡಿದೆ.

ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ಮತ್ತು ಕಳೆದ ತಿಂಗಳು ನಿಧನರಾದ ತನ್ನ ಚಿಕ್ಕಪ್ಪನ 'ಚೆಹಲ್ಲಮ್' ಆಚರಣೆಗೆ ಹಾಜರಾಗಲು ಖಾಲಿದ್ 15 ದಿನಗಳ ಮಧ್ಯಂತರ ಜಾಮೀನು ಕೋರಿದ್ದರು.

ಹಲವು ಷರತ್ತುಗಳೊಂದಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. ಖಾಲಿದ್ ದೆಹಲಿ-ಎನ್‌ಸಿಆರ್ ಪ್ರದೇಶದೊಳಗೆ ಇರಬೇಕು ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿರುವ ವಿಳಾಸದಲ್ಲಿ ಮಾತ್ರ ಇರಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಆಸ್ಪತ್ರೆ ಹೊರತುಪಡಿಸಿ ಬೇರೆಲ್ಲಿಯೂ ಪ್ರಯಾಣಿಸಲು ಅವರಿಗೆ ಅವಕಾಶವಿರುವುದಿಲ್ಲ ಮತ್ತು ಮಧ್ಯಂತರ ಜಾಮೀನು ಅವಧಿಯಲ್ಲಿ ಕೇವಲ ಒಂದು ಮೊಬೈಲ್ ಫೋನ್ ಸಂಖ್ಯೆಯನ್ನು ಮಾತ್ರ ಬಳಸಬೇಕು. ಜಾಮೀನು ಸೀಮಿತ ಸ್ವರೂಪದ್ದಾಗಿದ್ದು, ನ್ಯಾಯಾಲಯ ವಿಧಿಸಿರುವ ಷರತ್ತುಗಳ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನ್ಯಾಯಾಲಯ ಒತ್ತಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್