ಸಾಂದರ್ಭಿಕ ಚಿತ್ರ 
ದೇಶ

ರಾಂಚಿ: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಸೇನಾ ಯೋಧನ ಬಂಧನ!

23 ವರ್ಷದ ಯುವತಿ ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಲಾಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಂಚಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 38 ವರ್ಷದ ಸೇನಾ ಯೋಧನನ್ನು ಜಾರ್ಖಂಡ್ ಜಿಲ್ಲೆಯ ರಾಂಚಿಯಲ್ಲಿ ಬಂಧಿಸಲಾಗಿದೆ.

23 ವರ್ಷದ ಯುವತಿ ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಲಾಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಆರೋಪಿ ಸೇನಾ ಯೋಧನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸಂತ್ರಸ್ತೆಯ ಹೇಳಿಕೆ ಮತ್ತು ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಲಾಲ್‌ಪುರ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ರೂಪೇಶ್ ಕುಮಾರ್ ಹೇಳಿದ್ದಾರೆ.

ಆರೋಪಿ ಯೋಧ ಹರಿಯಾಣ ಮೂಲದವರಾಗಿದ್ದು, ರಾಂಚಿಯ ನಾಮ್‌ಕುಮ್ ನೆರೆಹೊರೆಯಲ್ಲಿ ನಿಯೋಜಿಸಲಾಗಿತ್ತು ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆನೇಕಲ್‌: ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆಶಿ ಶಂಕುಸ್ಥಾಪನೆ!

10 ದಿನಗಳಲ್ಲಿ ಇಂಧನ ದರ 5 ರೂಪಾಯಿ ಏರಿಕೆ: 'ಕಂತುಗಳಲ್ಲಿ ಸಾರ್ವಜನಿಕರ ಹಣ ಲೂಟಿ': ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಹಂಪಿಯಲ್ಲಿ ಪ್ರಾಚೀನ ಕಾಲದ ಒಳಚರಂಡಿ ವ್ಯವಸ್ಥೆ, ಆಳ್ವಾರ್ ಪ್ರತಿಮೆ ಪತ್ತೆ ಹಚ್ಚಿದ ASI

ಅಪರೂಪದ ನಿದರ್ಶನ: ಚಾಲಕನಿಗೆ 1 ವರ್ಷದ ಜೈಲು ಶಿಕ್ಷೆಯನ್ನು ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್!

‘Rozgar Mela’: 51 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

SCROLL FOR NEXT