ಭದ್ರತಾ ಪಡೆಗಳು 
ದೇಶ

ಜಮ್ಮು-ಕಾಶ್ಮೀರ: ರಜೋರಿಯಲ್ಲಿ ಎನ್ ಕೌಂಟರ್; ಮೂವರು ಭಯೋತ್ಪಾದಕರಿಗಾಗಿ ಭಾರಿ ಶೋಧ ಕಾರ್ಯಾಚರಣೆ!

ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, 'ಆಪ್ ಶೇರುವಾಲಿ' ಹೆಸರಿನಲ್ಲಿ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಸೇನೆ ಹಳಿದೆ.

ರಜೋರಿ: ಜಮ್ಮು ಮತ್ತು ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಈ ಪ್ರದೇಶದಲ್ಲಿ ಎರಡರಿಂದ ಮೂವರು ಭಯೋತ್ಪಾದಕರು ಅಡಗಿರುವ ಬಗ್ಗೆ ಸುಳಿವು ಸಿಕ್ಕಿದೆ ಎನ್ನಲಾಗಿದೆ. ಈ ಕುರಿತು ವೈಟ್ ನೈಟ್ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದೆ.

"ಇಂದು ಬೆಳಿಗ್ಗೆ 11.30 ರ ಸುಮಾರಿಗೆ ಪೊಲೀಸರು ಮತ್ತು ಸಿಆರ್‌ಪಿಎಫ್ ಜೊತೆಗೆ ನಡೆಸಿದ ಗುಪ್ತಚರ ಆಧಾರಿತ ಜಂಟಿ ಕಾರ್ಯಾಚರಣೆ ವೇಳೆ ರಜೋರಿಯ ಗಂಭೀರ್ ಮುಘ್ಲಾನ್ ನಲ್ಲಿ ಭಯೋತ್ಪಾದಕರೊಂದಿಗೆ ಸಂಪರ್ಕ ಸಾಧಿಸಲಾಯಿತು. ಬಳಿಕ ಭದ್ರತಾ ಪಡೆಗಳು ಗುಂಡಿನ ಚಕಮಕಿ ನಡೆಸಿವೆ.

ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, 'ಆಪ್ ಶೇರುವಾಲಿ' ಹೆಸರಿನಲ್ಲಿ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಹೇಳಿದೆ. ಡೋರಿಮಲ್-ಗಂಭೀರ್ ಮೊಘಲಾ ಬೆಲ್ಟ್‌ನಲ್ಲಿ ಶಂಕಿತ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಸಿಕ್ಕ ನಂತರ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು, ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಜಂಟಿ ತಂಡ ಪ್ರದೇಶವನ್ನು ಸುತ್ತುವರೆದು ವ್ಯಾಪಕ ಶೋಧ ನಡೆಸಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದ್ದು, ಕೊನೆಯ ಬಾರಿಗೆ ವರದಿಗಳು ಬಂದಾಗ ಕಾರ್ಯಾಚರಣೆ ಮುಂದುವರೆದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!