ಆರ್ ವಿ ರಮ್ಯಾ ಭಾರತಿ 
ದೇಶ

ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆಯಾಗಿದ್ರೂ ಪ್ರೆಸ್ ಮೀಟ್ ನಲ್ಲಿ ಪೊಲೀಸರ 'ಲಲ್ಲೆ': Video ವೈರಲ್, ಜನಾಕ್ರೋಶ!

ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡುವ ಮುನ್ನಾ ಪೊಲೀಸ್ ಮಹಾನಿರ್ದೇಶಕ (ಪಶ್ಚಿಮ ವಲಯ) ಆರ್ ವಿ ರಮ್ಯಾ ಭಾರತಿ, ಇತರ ಅಧಿಕಾರಿಗಳೊಂದಿಗೆ ನಗುತ್ತಾ ಇರುವ ವಿಡಿಯೋ ಇದಾಗಿದೆ.

ಚೆನ್ನೈ: ಕೊಯಮತ್ತೂರಿನಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆಯಾಗಿದ್ರು, ಪ್ರೆಸ್ ಮೀಟ್ ನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಲಲ್ಲೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಜನಾಕ್ರೋಶ ವ್ಯಕ್ತವಾಗುತ್ತಿದೆ.

ಹೌದು. ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡುವ ಮುನ್ನಾ ಪೊಲೀಸ್ ಮಹಾನಿರ್ದೇಶಕ (ಪಶ್ಚಿಮ ವಲಯ) ಆರ್ ವಿ ರಮ್ಯಾ ಭಾರತಿ, ಇತರ ಅಧಿಕಾರಿಗಳೊಂದಿಗೆ ನಗುತ್ತಾ ಇರುವ ವಿಡಿಯೋ ಇದಾಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆರ್ ವಿ ರಮ್ಯಾ ಭಾರತಿ ವಿರುದ್ಧ ಆನ್‌ಲೈನ್‌ನಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣವನ್ನು ಹೇಳುವಾಗ ಪೊಲೀಸರು ಗಂಭೀರವಾಗಿರಲಿಲ್ಲ ಎಂದು ಹಲವಾರು ನೆಟ್ಟಿಗರು ಆರೋಪಿಸಿದ್ದಾರೆ.

ಪೊಲೀಸರ ನಡವಳಿಕೆ ಮತ್ತು ಸಮಯವನ್ನು ಅನೇಕ ನೆಟ್ಟಿಗರು ಪ್ರಶ್ನಿಸಿದ್ದಾರೆ. ಈ ವೀಡಿಯೊ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ಒಳಗೊಂಡ ಪ್ರಕರಣಗಳನ್ನು ನಿರ್ವಹಿಸುವಾಗ ಪೊಲೀಸರ ಸೂಕ್ಷ್ಮತೆ ಮತ್ತು ವೃತ್ತಿಪರತೆಯ ಬಗ್ಗೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಇದು ನಿಜವಾದ ಭಾರತೀಯ ಪೊಲೀಸ್, ನಾವು ಸಿನಿಮಾಗಳಲ್ಲಿ ನೋಡುವುದು ಕೇವಲ ಕಾದಂಬರಿಯಿಂದಲೇ ಎಂದು ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಇಂತಹ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ವಿಜಯ್ ಅವರನ್ನು ಮತ್ತೊಬ್ಬರು ಒತ್ತಾಯಿಸಿದ್ದಾರೆ.

ಕೊಯಮತ್ತೂರಿನ ಸುಲೂರು ಬಳಿ 10 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ತಮಿಳುನಾಡಿನಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ವಿಜಯ್ ಭರವಸೆ ನೀಡಿದ್ದಾರೆ. ಈ ಮಧ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಗುಲ್ಮಾರ್ಗ್: ಕೈಕೊಟ್ಟ ವಿಶ್ವದ 2ನೇ ಅತಿ ಎತ್ತರದ ಕೇಬಲ್ ಕಾರ್; ಆಕಾಶದಲ್ಲೇ ಸಿಲುಕಿದ 300 ಪ್ರವಾಸಿಗರು! Video ನೋಡಿ

ಮೇಕೆದಾಟು ಯೋಜನೆಗೆ ವಿಜಯ್ ಅಡ್ಡಗಾಲು: ಕಾನೂನು ಕ್ರಮ ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ತಮಿಳುನಾಡು ಸಿಎಂ ಸೂಚನೆ

ಶತಾವಧಾನಿ ಆರ್. ಗಣೇಶ್, ಅಂಕೇ ಗೌಡ, ಸುಶೀಲಮ್ಮಗೆ ಪದ್ಮ ಪ್ರಶಸ್ತಿ ಪ್ರದಾನ

ಕಾರ್ಮಿಕರಿಗೆ ಕನಿಷ್ಠ ವೇತನ ಪರಿಷ್ಕರಣೆ: ಹೋಟೆಲ್ ಗಳಲ್ಲಿ ಊಟ, ತಿಂಡಿ ಬೆಲೆಗಳಲ್ಲಿ ದುಪ್ಪಟ್ಟು ಹೆಚ್ಚಳದ ವಾರ್ನಿಂಗ್!

SCROLL FOR NEXT