ಕಾಕ್ರೋಚ್ ಜನತಾ ಪಕ್ಷ 
ದೇಶ

'ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ': Cockroach Janta Party ವಿರುದ್ಧದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಸಿಜೆಐ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜ್ಯೋತಿರ್ಮಯ ಭಾಗ್ಚಿ ಮತ್ತು ವಿ.ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು, ಈ ಪ್ರಕರಣದಲ್ಲಿ ಅಂತಹ ಗಂಭೀರ ತುರ್ತು ಏನಿಲ್ಲ. ನಾವು ನೋಡುತ್ತೇವೆ ಎಂದು ತಿಳಿಸಿದೆ.

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಅರ್ಜಿಯನ್ನು ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರು ವಿಷಯವನ್ನು ಭಾವನಾತ್ಮಕವಾಗಿ ತೆಗೆದುಕೊಳ್ಳುತ್ತಿರುವಂತೆ ಕಾಣುತ್ತಿದೆ, ಈ ವಿಷಯವನ್ನು 'ತುಂಬಾ ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ' ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ.

ಸಿಜೆಐ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜ್ಯೋತಿರ್ಮಯ ಭಾಗ್ಚಿ ಮತ್ತು ವಿ.ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು, ಈ ಪ್ರಕರಣದಲ್ಲಿ ಅಂತಹ ಗಂಭೀರ ತುರ್ತು ಏನಿಲ್ಲ. ನಾವು ನೋಡುತ್ತೇವೆ ಎಂದು ತಿಳಿಸಿದೆ.

ಇಲ್ಲಿ ಯಾವುದೇ ಗಂಭೀರ ತುರ್ತು ಪರಿಸ್ಥಿತಿ ಕಾಣುತ್ತಿಲ್ಲ. ಈ ಅರ್ಜಿಯನ್ನು ನಂತರ ನೋಡುತ್ತೇವೆ” ಎಂದು ನ್ಯಾಯಾಲಯ ತಿಳಿಸಿದೆ.

ಅರ್ಜಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಬಂಧಿತ ಚಟುವಟಿಕೆಗಳ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಕೋರಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವಕೀಲರು, ನಕಲಿ ವಕೀಲರ ಪದವಿ ಹಾಗೂ ಕೋರ್ಟ್ ಒಳಗಿನ ಮಾತುಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಮೇ 15ರಂದು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸಿಜೆಐ ಸೂರ್ಯ ಕಾಂತ್ ಅವರು ನಿರುದ್ಯೋಗಿಗಳನ್ನು 'ಜಿರಳೆ'ಗಳಿಗೆ ಹೋಲಿಸಿರುವುದು ವಿವಾದಕ್ಕೆ ಕಾರಣವಾಗಿತ್ತು.

ಉದ್ಯೋಗ ಸಿಗದ ಕೆಲವು ಯುವಕರು ‘ಜಿರಳೆಗಳಂತೆ’ ಹೆಚ್ಚುತ್ತಾ, ಸಮಾಜದಲ್ಲಿ ವ್ಯವಸ್ಥೆಯ ಮೇಲೆ ದಾಳಿ ಮಾಡಲು ಆರಂಭಿಸುತ್ತಾರೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಹೇಳಿದ್ದರು.

ಇದರ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ಸಿಜೆಪಿ ಹುಟ್ಟಿಕೊಂಡಿದೆ. ಇದರ ಬೆನ್ನಲ್ಲೇ ಸಿಜೆಐ ತಾವು ನಕಲಿ ಪದವೀಧರರನ್ನು ಉದ್ದೇಶಿಸಿ ಈ ಹೇಳಿಕೆ ನೀಡಿದ್ದು ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ನಡುವೆ ಸಾಮಾಜಿಕ ಮಾಧ್ಯಮಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಖಾತೆ ತೆರೆದ ಕೆಲವೇ ದಿನಗಳಲ್ಲಿ ಲಕ್ಷಾಂತರ ಫಾಲೋವರ್ಸ್ ಆಗಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಗುಪ್ತಚರ ಇಲಾಖೆಯ ಸಲಹೆ ಹಿನ್ನೆಲೆ ಈ ಖಾತೆಯನ್ನು ಬ್ಯಾನ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಡೆಲ್​ ತ್ವಿಷಾ ಶರ್ಮಾ ನಿಗೂಢ ಸಾವು ಪ್ರಕರಣ: CBI ತನಿಖೆಗೆ ಸುಪ್ರೀಂಕೋರ್ಟ್ ಅಸ್ತು, ಸಾಕ್ಷ್ಯ-ಹೇಳಿಕೆಗಳ ಪ್ರಕಟಿಸದಂತೆ ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆ..!

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಬೆಂಗಳೂರು ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ಗಳೇ ಕಾರಣ? ‘Heat island’ ಪರಿಣಾಮ ಕುರಿತು ತಜ್ಞರ ಗಂಭೀರ ಎಚ್ಚರಿಕೆ..!

SIR ಹೆಸರಿನಲ್ಲಿ ಮತದಾರರ ಹೆಸರು ಡಿಲೀಟ್ ಆರೋಪ; war room ಸ್ಥಾಪಿಸಿದ ಕಾಂಗ್ರೆಸ್, ಎಚ್ಚರ ವಹಿಸುವಂತೆ 'ಕೈ' ನಾಯಕರಿಗೆ ಸಿದ್ದು-ಡಿಕೆಶಿ ಸೂಚನೆ

SCROLL FOR NEXT