ಸಾಂದರ್ಭಿಕ ಚಿತ್ರ 
ದೇಶ

ಅಕ್ರಮ ಸಂಬಂಧಕ್ಕೆ ಮೂವರು ಬಲಿ: ಪತ್ನಿ ಕೊಂದು ಪತಿ ಆತ್ಮಹತ್ಯೆ; ಮಹಿಳೆಯ ಪ್ರಿಯಕರನೂ ಸಾವಿಗೆ ಶರಣು!

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮೋಹಿಸಿ, ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ ಮತ್ತು ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆತ್ಮಹತ್ಯೆಗೂ ಮುನ್ನ ಬರೆದ ಪತ್ರದಲ್ಲಿ ಪತಿ ಆರೋಪಿಸಿದ್ದಾರೆ.

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಅಕ್ರಮ ಸಂಬಂಧಕ್ಕೆ ಮೂವರು ಬಲಿಯಾಗಿದ್ದು, 34 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಆಕೆಯನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆಗೆ ಕಾರಣವಾದ ಮಹಿಳೆಯ ಪ್ರಿಯಕರನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಇಂದೋರ್ ನಗರದ ಹಿರಾ ನಗರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಭಾನುವಾರ 28 ವರ್ಷದ ಪತ್ನಿಯನ್ನು ಕತ್ತು ಹಿಸುಕಿ ಕೊಂದು, ಬಳಿಕ ವಿಷ ಸೇವಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪಿತಾಂಪುರದಲ್ಲಿ ವಾಸಿಸುವ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮೋಹಿಸಿ, ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ ಮತ್ತು ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆತ್ಮಹತ್ಯೆಗೂ ಮುನ್ನ ಬರೆದ ಪತ್ರದಲ್ಲಿ ಪತಿ ಆರೋಪಿಸಿದ್ದಾರೆ.

ಆತನಿಂದ ದೂರ ಇರುವಂತೆ ಪದೇ ಪದೇ ಮನವಿ ಮಾಡಿದರೂ ಪತ್ನಿ ಮಾತು ಕೇಳಲಿಲ್ಲ ಮತ್ತು ತನ್ನ ಪ್ರಿಯಕರನನ್ನು ಬಿಡಲು ನಿರಾಕರಿಸಿದಳು ಎಂದು ಡೆತ್ ನೋಟ್ ನಲ್ಲಿ ಹೇಳಲಾಗಿದೆ.

ಭಾನುವಾರ ಈ ದಂಪತಿಗಳ ದಾರುಣ ಸಾವಿನ ಸುದ್ದಿ ಕೇಳಿ ಮೃತ ಮಹಿಳೆಯ ಪ್ರಿಯಕರ ಎಂದು ಹೇಳಲಾದ ವ್ಯಕ್ತಿ ಸಹ ಭಯದಿಂದ ನೆರೆಯ ಖಾಂಡ್ವಾ ಜಿಲ್ಲೆಯ ತನ್ನ ಊರಿಗೆ ಧಾವಿಸಿ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹಿರಾಜ್ ನಗರ ಪೊಲೀಸ್ ಠಾಣೆಯ ಉಸ್ತುವಾರಿ ಸುಶೀಲ್ ಪಟೇಲ್ ಅವರು ಪಿಟಿಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ

ಕದ್ದ ರಾಮ ಮಂದಿರ ದೇಣಿಗೆ ಹಣ ಷೇರುಗಳಲ್ಲಿ ಹೂಡಿಕೆ: 30 ಬ್ಯಾಂಕ್ ಖಾತೆಗಳ ಸ್ಥಗಿತ, ತನಿಖೆಯಿಂದ ಆಘಾತಕಾರಿ ಮಾಹಿತಿ ಬಹಿರಂಗ !

ಅಮೆರಿಕಾ ಅಧ್ಯಕ್ಷನ ಹತ್ಯೆಗೆ Iran ಭಾರೀ ಸಂಚು? Israel ರಹಸ್ಯ ಮಾಹಿತಿ; ಕೊನೆ ಕ್ಷಣದಲ್ಲಿ ವಿಮಾನ ಬದಲಿಸಿ 'Air Force One'ನಲ್ಲೇ ಪ್ರಯಾಣಿಸಿದ Trump..!

ಮಂತ್ರಿಗಿರಿ ರಹಸ್ಯ?: ಸಿಎಂ DK Shivakumar ಭೇಟಿಗೆ ಆಗಮಿಸಿದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ!

ಸಿದ್ದು ಆಶೀರ್ವಾದದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುನ್ನೆಲೆಗೆ..!