ತಮಿಳುನಾಡು ಸಿಎಂ ವಿಜಯ್ 
ದೇಶ

ಲೈಂಗಿಕ ಅಪರಾಧಗಳನ್ನು ಹತ್ತಿಕ್ಕುವಂತೆ ಪೊಲೀಸರಿಗೆ ತಮಿಳುನಾಡು ಸಿಎಂ ವಿಜಯ್ ಖಡಕ್ ಸೂಚನೆ

ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಪರಿಶೀಲಿಸಿದ ವಿಜಯ್, ಘೋರ ಅಪರಾಧಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಸೋಮವಾರ ಲೈಂಗಿಕ ಅಪರಾಧಗಳಲ್ಲಿ ಭಾಗಿಯಾಗಿರುವವರ ವಿರುದ್ಧ ತಕ್ಷಣ ಪ್ರಕರಣಗಳನ್ನು ದಾಖಲಿಸಿ, ತ್ವರಿತವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ಖಾತರಿಪಡಿಸಿಕೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

ಕೊಯಮತ್ತೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಕ್ರೂರ ಹತ್ಯೆಯ ನಂತರ, ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಪರಿಶೀಲಿಸಿದ ವಿಜಯ್, ಘೋರ ಅಪರಾಧಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಇದೇ ವೇಳೆ ಪರಿಶೀಲನಾ ಸಭೆಯಲ್ಲಿ, ವಿಚಾರಣೆಯನ್ನು ತ್ವರಿತಗೊಳಿಸಲು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಜಾಗೃತಿಯನ್ನು ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿ, ಅಟಾರ್ನಿ ಜನರಲ್‌ಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಂ. ಸಾಯಿಕುಮಾರ್, ಗೃಹ ಕಾರ್ಯದರ್ಶಿ ಕೆ. ಮಣಿವಾಸನ್, ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್, ಸಮಾಜ ಕಲ್ಯಾಣ ಮತ್ತು ಮಹಿಳಾ ಹಕ್ಕುಗಳ ಇಲಾಖೆಯ ಕಾರ್ಯದರ್ಶಿ ಮರಿಯಂ ಪಲ್ಲವಿ ಬಲದೇವ್, ಪೊಲೀಸ್ ಮಹಾನಿರ್ದೇಶಕ ಸಂದೀಪ್ ರಾಯ್ ರಾಥೋಡ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ