ಡಬಲ್ ಡೆಕ್ಕರ್ ಬಸ್ ಉರುಳಿ ಬಿದ್ದಿರುವುದು. 
ದೇಶ

ಉನ್ನಾವೋ: ಲಖನೌ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ; 6 ಮಂದಿ ದುರ್ಮರಣ, ಹಲವರಿಗೆ ಗಾಯ..!

ಅತಿವೇಗದಲ್ಲಿ ಸಂಚರಿಸುತ್ತಿದ್ದ ಬಸ್ ಏಕಾಏಕಿ ಒಂದು ಬದಿಗೆ ವಾಲಿ ಎಕ್ಸ್‌ಪ್ರೆಸ್‌ವೇ ವಿಭಜಕಕ್ಕೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ.

ಲಖನೌ: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 19ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಮುಂಜಾನೆ ಲಖನೌ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.

ದೆಹಲಿಯಿಂದ ಗೋರಖ್‌ಪುರಕ್ಕೆ ಪ್ರಯಾಣಿಸುತ್ತಿದ್ದ ಡಬಲ್‌ ಡೆಕ್ಕರ್ ಲಕ್ಸುರಿ ಸ್ಲೀಪರ್ ಬಸ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಬಸ್‌ನ ಗಾಜುಗಳು ಪುಡಿಪುಡಿಯಾಗಿವೆ.

ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಚಾಲಕ ನಿದ್ರೆಗೆ ಜಾರಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಅತಿವೇಗದಲ್ಲಿ ಸಂಚರಿಸುತ್ತಿದ್ದ ಬಸ್ ಏಕಾಏಕಿ ಒಂದು ಬದಿಗೆ ವಾಲಿ ಎಕ್ಸ್‌ಪ್ರೆಸ್‌ವೇ ವಿಭಜಕಕ್ಕೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕೆಲ ಪ್ರಯಾಣಿಕರು ಕಿಟಕಿಯಿಂದ ಹೊರಗೆ ಎಸೆಯಲ್ಪಟ್ಟರೆ, ಇನ್ನೂ ಕೆಲವರು ಬಸ್‌ನ ಆಸನಗಳ ನಡುವೆ ಸಿಲುಕಿಕೊಂಡಿದ್ದಾರೆ.

ಅಪಘಾತದ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬದುಕುಳಿದ ಪ್ರಯಾಣಿಕರ ಕೂಗಾಟ ಕೇಳಿ ಇತರ ವಾಹನ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣವೇ ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇಸ್ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಅಥಾರಿಟಿ (UPEIDA), ಸ್ಥಳೀಯ ಪೊಲೀಸರು ಹಾಗೂ ಜಿಲ್ಲಾಡಳಿತದ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.

ಬಸ್‌ನ ಒಳಗೆ ಸಿಲುಕಿದ್ದವರನ್ನು ಹೊರತೆಗೆದಲು ವಿಶೇಷ ಕಟಿಂಗ್ ಉಪಕರಣಗಳನ್ನು ಬಳಸಲಾಯಿತು. ಸ್ಥಳೀಯರು ಮತ್ತು ಪೊಲೀಸರು ಸೇರಿ ಗಾಯಾಳುಗಳನ್ನು ರಕ್ಷಿಸಿ ಆಂಬುಲೆನ್ಸ್ ಮೂಲಕ ಸಮೀಪದ ಆರೋಗ್ಯ ಕೇಂದ್ರಗಳಿಗೆ ಸಾಗಿಸಿದರು.

ಗಂಭೀರವಾಗಿ ಗಾಯಗೊಂಡ ಕೆಲವರನ್ನು ಲಖನೌನ ಕಿಂಗ್ ಜಾರ್ಜ್ ಮೆಡಿಕಲ್ ಯುನಿವರ್ಸಿಟಿ (KGMU) ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆ ಕಾರ್ಯ ಮುಂದುವರಿದಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ಘಟನಾ ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಬಳಿಕ ಬಸ್ ಅವಶೇಷಗಳು ಹೆದ್ದಾರಿಯಲ್ಲಿ ಬಿದ್ದಿದ್ದ ಪರಿಣಾಮ ಲಖನೌ ಮಾರ್ಗದಲ್ಲಿ ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತ್ತು.

ನಂತರ ಕ್ರೇನ್‌ಗಳ ಸಹಾಯದಿಂದ ಬಸ್ ತೆರವುಗೊಳಿಸಿ ಸಂಚಾರ ಪುನಃ ಆರಂಭಿಸಲಾಯಿತು. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

'ಯಾವ ಕ್ಷಣದಲ್ಲಾದರೂ ಕುಸಿಯಬಹುದು': Kerala Landslide ಕುರಿತು ಮೊದಲೇ ಎಚ್ಚರಿಕೆ ನೀಡಿದ್ದ ಗುತ್ತಿಗೆದಾರರ ವರದಿ

SIR ಕಂಪ್ಯೂಟರೀಕರಣ, ಚಿಕ್ಕಬಳ್ಳಾಪುರ ಅಪರೂಪದ ಸಾಧನೆ, ರಾಜ್ಯದಲ್ಲೇ ಮೊದಲ ಸ್ಥಾನ!

GBA ಚುನಾವಣೆ‌ ನಡೆಸಲು ಡಿಸೆಂಬರ್‌ವರೆಗೆ ಕಾಲಾವಕಾಶ ಕೊಡಿ: ಸುಪ್ರೀಂ ಕೋರ್ಟ್ ಗೆ ಸರ್ಕಾರದ ಅರ್ಜಿ

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ