ಅಮಿತ್ ಶಾ 
ದೇಶ

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಐದು ಗಡಿ ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಬಿಕಾನೇರ್‌: ಅಂತರಾಷ್ಟ್ರೀಯ ಗಡಿಗಳಿಂದ 15 ಕಿ.ಮೀ. ವ್ಯಾಪ್ತಿಯಲ್ಲಿ ಅಕ್ರಮ ನಿರ್ಮಾಣಗಳ ವಿರುದ್ಧ ಶೂನ್ಯ ಸಹಿಷ್ಣುತಾ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು, ಹಲವು ವರ್ಷಗಳಿಂದ ನಿರ್ಮಾಣವಾಗಿರುವ ಎಲ್ಲಾ ಕಟ್ಟಡಗಳನ್ನು ಕೆಡವಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೂಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಸ್ಥಾನದ ಬಿಕಾನೇರ್‌ನಲ್ಲಿ ಮಂಗಳವಾರ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಮಿತ್ ಶಾ, ಭಾರತ-ಪಾಕಿಸ್ತಾನ ಗಡಿಯಲ್ಲಿರುವ ರಾಜಸ್ಥಾನದ ಗಡಿ ಜಿಲ್ಲೆಗಳಿಗೆ ಸಂಬಂಧಿಸಿದ ಭದ್ರತಾ ಸಂಬಂಧಿತ ಸಮಸ್ಯೆಗಳ ಕುರಿತು ಚರ್ಚಿಸಿದರು.

ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಐದು ಗಡಿ ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಅಪರಾಧಗಳು ಮತ್ತು ಮಾದಕವಸ್ತು ಪಿಡುಗಿನ ಮೂಲಗಳು, ಮಾದರಿಗಳು ಮತ್ತು ಜಾಲಗಳ ಬಗ್ಗೆ ಆಳವಾದ ಅಧ್ಯಯನವನ್ನು ಕೈಗೊಳ್ಳಲು ಹಾಗೂ ಈ ಸಮಸ್ಯೆಗಳು ಮತ್ತೆ ಉದ್ಭವಿಸದಂತೆ ಶಾಶ್ವತ ಪರಿಹಾರಗಳನ್ನು ಕಂಡುಕೊಳ್ಳಲು ಗಡಿ ಜಿಲ್ಲೆಗಳಿಗೆ ನಿರ್ದೇಶಿಸಲಾಗಿದೆ ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಗಡಿ ಪ್ರದೇಶಗಳಲ್ಲಿನ ಬ್ಯಾಂಕಿಂಗ್ ವಹಿವಾಟುಗಳ ಕಾನೂನು ಮತ್ತು ಆರ್ಥಿಕ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು, ದೊಡ್ಡ ವ್ಯಾಪಾರ ಸಂಸ್ಥೆಗಳನ್ನು ಪರಿಶೀಲಿಸಲು, ಅವುಗಳ ಹಣಕಾಸಿನ ಮೂಲಗಳನ್ನು ಪರಿಶೀಲಿಸಲು, ಮ್ಯೂಲ್ ಖಾತೆಗಳು ಮತ್ತು ಸುಳ್ಳು ಕಂಪನಿಗಳನ್ನು ಪತ್ತೆಹಚ್ಚಲು, ನಕಲಿ ಆಧಾರ್ ಕಾರ್ಡ್‌ಗಳನ್ನು ಗುರುತಿಸಲು ಮತ್ತು ಗಡಿಯಾಚೆಗಿನ ಕಳ್ಳಸಾಗಣೆಯನ್ನು ನಿಯಂತ್ರಿಸಲು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ಹೆಚ್ಚಿನ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!