ಜಾರಿ ನಿರ್ದೇಶನಾಲಯ ಅಧಿಕಾರಿಗಳು 
ದೇಶ

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ! Video

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತಿರುವನಂತಪುರದಲ್ಲಿರುವ ಪಿಣರಾಯಿ ವಿಜಯನ್ ಅವರ ಬಾಡಿಗೆ ನಿವಾಸವೂ ಸೇರಿದಂತೆ ಕೇರಳದ ಒಟ್ಟು 10 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿದುಬಂದಿದೆ.

ತಿರುವನಂತಪುರಂ: ಸಿಎಂಆರ್‌ಎಲ್ (Cochin Minerals and Rutile Ltd) ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ED), ಬುಧವಾರ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧೆಡೆ ದಾಳಿ ನಡೆಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತಿರುವನಂತಪುರದಲ್ಲಿರುವ ಪಿಣರಾಯಿ ವಿಜಯನ್ ಅವರ ಬಾಡಿಗೆ ನಿವಾಸವೂ ಸೇರಿದಂತೆ ಕೇರಳದ ಒಟ್ಟು 10 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣವು ಸಿಎಂಆರ್‌ಎಲ್ ಸಂಸ್ಥೆಯಿಂದ ಪಿಣರಾಯಿ ವಿಜಯನ್ ಅವರ ಪುತ್ರಿ T Veena ಮಾಲೀಕತ್ವದ ಎಕ್ಸಾಲಾಜಿಕ್ ಸೊಲ್ಯೂಷನ್ಸ್ (Exalogic Solutions) ಕಂಪನಿಗೆ ನೀಡಲಾಗಿದೆ ಎನ್ನಲಾದ ₹1.72 ಕೋಟಿ ಪಾವತಿಗೆ ಸಂಬಂಧಿಸಿದ್ದಾಗಿದೆ.

2018ರಿಂದ 2019ರ ಅವಧಿಯಲ್ಲಿ ಯಾವುದೇ ಸೇವೆ ಒದಗಿಸದಿದ್ದರೂ ಸಿಎಂಆರ್‌ಎಲ್ ಸಂಸ್ಥೆ ಎಕ್ಸಾಲಾಜಿಕ್ ಸೊಲ್ಯೂಷನ್ಸ್‌ಗೆ ಅಕ್ರಮವಾಗಿ ರೂ.1.72 ಕೋಟಿ ಪಾವತಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದೇ ಆರೋಪಗಳ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿತ್ತು.

ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ED ಕ್ರಮ

ಇಡಿ ದಾಳಿ ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ ಮರುದಿನವೇ ನಡೆದಿವೆ. ಇಡಿ ತನಿಖೆಯನ್ನು ರದ್ದುಗೊಳಿಸುವಂತೆ ಸಿಎಂಆರ್‌ಎಲ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ತಿರಸ್ಕರಿಸಿತ್ತು. ನ್ಯಾಯಾಲಯದ ಈ ನಿರ್ಧಾರದಿಂದ ತನಿಖೆಗೆ ಮತ್ತಷ್ಟು ವೇಗ ಸಿಕ್ಕಿದ್ದು, ಇಡಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದೆ.

2024ರಲ್ಲಿ ಇಡಿ ಪ್ರಕರಣ ದಾಖಲು

ಅಕ್ರಮ ಹಣ ವರ್ಗಾವಣೆ ಆರೋಪಗಳ ಕುರಿತು ತನಿಖೆ ನಡೆಸಲು ಜಾರಿ ನಿರ್ದೇಶನಾಲಯವು 2024ರಲ್ಲಿ ಪಿಎಂಎಲ್‌ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು. ಸಿಎಂಆರ್‌ಎಲ್ ಹಾಗೂ ಎಕ್ಸಾಲಾಜಿಕ್ ಸೊಲ್ಯೂಷನ್ಸ್ ನಡುವಿನ ಹಣಕಾಸು ವ್ಯವಹಾರಗಳ ಬಗ್ಗೆ ಇಡಿ ತನಿಖೆ ಮುಂದುವರಿಸಿದೆ.

ರಾಜಕೀಯ ವಲಯದಲ್ಲಿ ಸಂಚಲನ

ಕೇರಳದ ಪ್ರಮುಖ ರಾಜಕೀಯ ನಾಯಕ ಮತ್ತು ಸಿಪಿಐ(ಎಂ) ಹಿರಿಯ ಮುಖಂಡರಾಗಿರುವ ಪಿಣರಾಯಿ ವಿಜಯನ್ ಅವರ ನಿವಾಸದ ಮೇಲೆ ಇಡಿ ದಾಳಿ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಪ್ರಕರಣದ ತನಿಖೆ ಮುಂದುವರಿದಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಮಹತ್ವದ ಬೆಳವಣಿಗೆಗಳು ಸಂಭವಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!