ದೆಹಲಿಯ ಶಾಂತಿವನದಲ್ಲಿ ಕಾಂಗ್ರೆಸ್ ನಾಯಕರಿಂದ ಪುಷ್ಪನಮನ  
ದೇಶ

ಮಾಜಿ ಪ್ರಧಾನಿ ಜವಹರಲಾಲ್ ನೆಹರೂ 62ನೇ ಪುಣ್ಯತಿಥಿ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿ ಹಲವರಿಂದ ಸ್ಮರಣೆ

ಪ್ರೀತಿಯಿಂದ “ಚಾಚಾ ನೆಹರೂ” ಎಂದು ಕರೆಯಲ್ಪಡುವ ಜವಹರಲಾಲ್ ನೆಹರೂ ಅವರು ಭಾರತದ ಮೊದಲ ಪ್ರಧಾನಮಂತ್ರಿಯಾಗಿದ್ದರು.

ಜವಹರಲಾಲ್ ನೆಹರೂ ಅವರ 62ನೇ ಪುಣ್ಯತಿಥಿಯ ಅಂಗವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬುಧವಾರ ಮಾಜಿ ಪ್ರಧಾನಮಂತ್ರಿಗೆ ಗೌರವ ನಮನ ಸಲ್ಲಿಸಿದರು. ಅವರು ಎಕ್ಸ್ ನಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಗೌರವ ನಮನಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರೀತಿಯಿಂದ “ಚಾಚಾ ನೆಹರೂ” ಎಂದು ಕರೆಯಲ್ಪಡುವ ಜವಹರಲಾಲ್ ನೆಹರೂ ಅವರು ಭಾರತದ ಮೊದಲ ಪ್ರಧಾನಮಂತ್ರಿಯಾಗಿದ್ದರು. ಅವರು ಸ್ವತಂತ್ರ ಭಾರತದ ಪ್ರಧಾನಮಂತ್ರಿಯಾಗಿ 1947ರ ಆಗಸ್ಟ್ 15ರಿಂದ 1964ರ ಮೇ 27ರವರೆಗೆ ಸೇವೆ ಸಲ್ಲಿಸಿದರು. 1964ರ ಮೇ 27ರಂದು ಅವರು 74ನೇ ವಯಸ್ಸಿನಲ್ಲಿ ನಿಧನರಾದರು.

1964ರ ಮೇ 27ರಂದು ನಿಧನರಾಗುವವರೆಗೆ ದೇಶದ ನಾಯಕತ್ವವನ್ನು ವಹಿಸಿಕೊಂಡಿದ್ದ ಜವಹರಲಾಲ್ ನೆಹರೂ ಅವರ ಅವಿರತ ಅಧಿಕಾರಾವಧಿ 6,130 ದಿನಗಳಾಗಿತ್ತು. ಇದೇ ವೇಳೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಳೆದ ಜುಲೈನಲ್ಲಿ 4,078 ದಿನಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿ, ಸತತ ಅವಧಿಯಲ್ಲಿ ಭಾರತದ ಎರಡನೇ ಅತಿ ದೀರ್ಘಾವಧಿ ಸೇವೆ ಸಲ್ಲಿಸಿದ ಪ್ರಧಾನಮಂತ್ರಿಯಾಗಿ ಇಂದಿರಾ ಗಾಂಧಿ ಅವರನ್ನು ಹಿಂದಿಕ್ಕಿದರು. ನರೇಂದ್ರ ಮೋದಿ ಮತ್ತು ಜವಹರಲಾಲ್ ನೆಹರೂ ಇಬ್ಬರೂ ತಮ್ಮ ತಮ್ಮ ಪಕ್ಷಗಳನ್ನು ಸತತ ಮೂರು ಲೋಕಸಭೆ ಚುನಾವಣೆಯಲ್ಲಿ ಗೆಲುವಿನತ್ತ ಮುನ್ನಡೆಸಿದ್ದರು.

ಹಿರಿಯ ಕಾಂಗ್ರೆಸ್ ನಾಯಕರು, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ದೆಹಲಿಯ ಶಾಂತಿವನ ಸ್ಮಾರಕದಲ್ಲಿ ಜವಹರಲಾಲ್ ನೆಹರೂ ಅವರಿಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಕೆ ಸಿ ವೇಣುಗೋಪಾಲ್ ಮತ್ತು ಬಿ ಕೆ ಹರಿಪ್ರಸಾದ್ ಕೂಡ ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ನಡೆದ ಸ್ಮರಣಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಇದರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿ ಹಾಗೂ ವಿಧಾನಸೌಧದ ಸಮೀಪ ನಡೆದ ಸ್ಮರಣಾ ಕಾರ್ಯಕ್ರಮಗಳು ಸೇರಿದ್ದವು.

1889ರ ನವೆಂಬರ್ 14ರಂದು ಅಲಹಾಬಾದ್‌ನಲ್ಲಿ ಜನಿಸಿದ ಜವಹರಲಾಲ್ ಅವರು ಪ್ರಾಥಮಿಕ ಶಿಕ್ಷಣವನ್ನು ಮನೆಯಲ್ಲಿ ಪಡೆದ ಬಳಿಕ ಉನ್ನತ ಶಿಕ್ಷಣಕ್ಕಾಗಿ ಇಂಗ್ಲೆಂಡ್‌ಗೆ ತೆರಳಿದರು. ಅವರು ಹ್ಯಾರೋ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ನಂತರ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ನೈಸರ್ಗಿಕ ವಿಜ್ಞಾನ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿದರು. ಬಳಿಕ ಲಂಡನ್‌ನ ಇನರ್ ಟೆಂಪಲ್‌ನಲ್ಲಿ ಬ್ಯಾರಿಸ್ಟರ್ ಪದವಿಯನ್ನು ಪಡೆದರು.

1912ರಲ್ಲಿ ಭಾರತಕ್ಕೆ ಮರಳಿದ ನಂತರ ಜವಹರಲಾಲ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು. 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ ಬಳಿಕ ಅವರು ದೇಶದ ಮೊದಲ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ, 1964ರ ಮೇ 27ರಂದು ನಿಧನರಾಗುವವರೆಗೆ 16 ವರ್ಷಕ್ಕೂ ಹೆಚ್ಚು ಕಾಲ ಹುದ್ದೆಯಲ್ಲಿ ಮುಂದುವರಿದರು.

ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಣ ಜವಹರಲಾಲ್ ನೆಹರೂ ಅವರನ್ನು ಪ್ರೀತಿಯಿಂದ “ಚಾಚಾ ನೆಹರೂ” ಎಂದು ಕರೆಯಲಾಗುತ್ತಿತ್ತು. ಅವರ ಜನ್ಮದಿನವಾದ ನವೆಂಬರ್ 14ನ್ನು ಭಾರತದಲ್ಲಿ ಪ್ರತಿವರ್ಷ ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT