ಕಾಕೋಲಿ ಘೋಷ್ ದಸ್ತಿದಾರ್ 
ದೇಶ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ TMC ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಟಿಎಂಸಿ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಅವರು ನಿನ್ನೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರೊಂದಿಗಿನ ಆಡಳಿತಾತ್ಮಕ ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೋಲ್ಕತ್ತಾ: ಪಕ್ಷದ ನಾಯಕತ್ವದ ಬಗ್ಗೆ ಸಾರ್ವಜನಿಕವಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕೆಲವು ದಿನಗಳ ನಂತರ, ಲೋಕಸಭಾ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಅವರು ಬುಧವಾರ ತೃಣಮೂಲ ಕಾಂಗ್ರೆಸ್‌ನ ಎಲ್ಲಾ ಸಾಂಸ್ಥಿಕ ಹುದ್ದೆಗಳಿಗೆ ರಾಜೀನಾಮೆ ನೀಡಿದರು.

ಬರಾಸತ್ ಕ್ಷೇತ್ರದ ಟಿಎಂಸಿ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಅವರು ನಿನ್ನೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರೊಂದಿಗಿನ ಆಡಳಿತಾತ್ಮಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಭಾಗವಹಿಸದಂತೆ ಟಿಎಂಸಿ ಸೂಚಿಸಿದೆ ಎಂದು ಹೇಳಲಾಗಿದ್ದು, ಇದರ ಬೆನ್ನಲ್ಲೇ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ದಸ್ತಿದಾರ್ ಅವರು ಟಿಎಂಸಿಯ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು ಮತ್ತು ಪಕ್ಷದ "ಬಂಗಾ ಜನನಿ" ಕಾರ್ಯಕ್ರಮದೊಂದಿಗೆ ನಂಟು ಹೊಂದಿದ್ದರು.

ನಾಲ್ಕು ಬಾರಿ ಬರಾಸತ್ ಸಂಸದೆಯಾಗಿರುವ ದಸ್ತಿದಾರ್, ಟಿಎಂಸಿ ರಾಜ್ಯಾಧ್ಯಕ್ಷೆ ಸುಬ್ರತಾ ಬಕ್ಷಿ ಅವರಿಗೆ ಬರೆದ ಪತ್ರದಲ್ಲಿ, ಪಕ್ಷದ ಎಲ್ಲಾ ಸಾಂಸ್ಥಿಕ ಜವಾಬ್ದಾರಿಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಜವಾಬ್ದಾರಿಗಳಲ್ಲಿ ಇನ್ನು ಮುಂದೆ ಮುಂದುವರಿಯಲು ಸಾಧ್ಯವಿಲ್ಲ ಎಂದು ಅವರು ಪಕ್ಷಕ್ಕೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯಲ್ಲಿ ಈಗ ಭಿನ್ನಮತ ಸ್ಫೋಟಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್