ಸಂಗ್ರಹ ಚಿತ್ರ 
ದೇಶ

CUET-UG 2026 ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ: ಹೊಸ ದಿನಾಂಕ ಪ್ರಕಟ

ಬಕ್ರೀದ್ ಹಬ್ಬದ ಹಿನ್ನೆಲೆ ಮೇ 28ರಂದು ನಡೆಯಬೇಕಿದ್ದ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಇದೀಗ ಹೊಸ ದಿನಾಂಕಗಳನ್ನು ಘೋಷಿಸಲಾಗಿದೆ.

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ತನ್ನ ಪ್ರಮುಖ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳಾದ NEET UG ಮತ್ತು CUET UG 2026 ರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಬಕ್ರೀದ್ ಹಬ್ಬದ ಹಿನ್ನೆಲೆ ಮೇ 28ರಂದು ನಡೆಯಬೇಕಿದ್ದ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಇದೀಗ ಹೊಸ ದಿನಾಂಕಗಳನ್ನು ಘೋಷಿಸಲಾಗಿದೆ.

ಎನ್‌ಟಿಎ ಪ್ರಕಟಿಸಿರುವ ಮಾಹಿತಿಯ ಪ್ರಕಾರ, ಮುಂದೂಡಲಾದ ಪರೀಕ್ಷೆಗಳು ಮೇ 31, ಜೂನ್ 6 ಮತ್ತು ಜೂನ್ 7ರಂದು ನಡೆಯಲಿವೆ.

ಮೇ 31ರಂದು ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಅಧಿಕೃತ ವೆಬ್‌ಸೈಟ್ (cuet.nta.nic.in) ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.

ಜೂನ್ 6 ಮತ್ತು 7ರಂದು ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದು ಸಂಸ್ಥೆ ಹೇಳಿದೆ. ಅಭ್ಯರ್ಥಿಗಳು ನಿಯಮಿತವಾಗಿ ಅಧಿಕೃತ ವೆಬ್‌ಸೈಟ್ ಪರಿಶೀಲಿಸುತ್ತಿರಬೇಕು ಎಂದೂ ಸಲಹೆ ನೀಡಿದೆ.

ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET-UG) ಅನ್ನು 2022ರಲ್ಲಿ ದೇಶದ ಕೇಂದ್ರ, ರಾಜ್ಯ ಹಾಗೂ ಕೆಲವು ಖಾಸಗಿ ವಿಶ್ವವಿದ್ಯಾಲಯಗಳ ಪದವಿ ಪ್ರವೇಶ ಪ್ರಕ್ರಿಯೆಯನ್ನು ಏಕರೂಪಗೊಳಿಸುವ ಉದ್ದೇಶದಿಂದ ಪರಿಚಯಿಸಲಾಯಿತು.

ಈ ಪರೀಕ್ಷೆಯ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಲು ಒಂದೇ ವೇದಿಕೆ ಒದಗಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಓಮನ್ ಕರಾವಳಿಯಲ್ಲಿ 11 ಭಾರತೀಯರಿದ್ದ ಹಡಗಿನ ಮೇಲೆ ದಾಳಿಗೆ ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!