ಕುನ್ವರ್ ವಿಜಯ್ ಪ್ರತಾಪ್ ಸಿಂಗ್ 
ದೇಶ

ಪಂಜಾಬ್ ಚುನಾವಣೆ: AAP ಶಾಸಕ ಸ್ಥಾನಕ್ಕೆ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ರಾಜೀನಾಮೆ; ಎರಡು ದಿನಗಳಲ್ಲಿ ಪಕ್ಷ ತೊರೆದ 3ನೇ ಶಾಸಕ!

ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಅವರು, ಪಂಜಾಬ್ ವಿಧಾನಸಭಾ ಸ್ಪೀಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇಲೆ ಈ ಹಿಂದೆ ಪಕ್ಷವು ಅವರನ್ನು ಅಮಾನತುಗೊಳಿಸಿತ್ತು.

ಚಂಡೀಗಢ: 2027ರ ವಿಧಾನಸಭಾ ಚುನಾವಣೆ ಹೊತ್ತಿನಲ್ಲಿಯೇ ಪಂಜಾಬಿನ ಆಡಳಿತಾರೂಢ ಎಎಪಿಯಲ್ಲಿ ಅಸಮಾಧಾನ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಅಮೃತಸರ ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಎಎಪಿ ಶಾಸಕ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಅವರು, ಪಂಜಾಬ್ ವಿಧಾನಸಭಾ ಸ್ಪೀಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇಲೆ ಈ ಹಿಂದೆ ಪಕ್ಷವು ಅವರನ್ನು ಅಮಾನತುಗೊಳಿಸಿತ್ತು.

ಕಳೆದ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಪೊಲೀಸ್ ಸೇವೆಯಿಂದ ನಿವೃತ್ತರಾಗಿ ಎಎಪಿ ಸೇರಿದ ಕುನ್ವರ್ ವಿಜಯ್ ಪ್ರತಾಪ್ ಸಿಂಗ್, ನಂತರ ಅಮೃತಸರ ಉತ್ತರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಪಂಜಾಬ್‌ನಲ್ಲಿ ಎಎಪಿ ಶಾಸಕರು ಸರಣಿಯಾಗಿ ಪಕ್ಷ ತೊರೆಯುತ್ತಿರುವ ಬೆನ್ನಲ್ಲೇ ಈ ರಾಜೀನಾಮೆ ನಡೆದಿದೆ.

ಭಾನುವಾರದಂದು ಪಕ್ಷದ ಇತರ ಇಬ್ಬರು ಶಾಸಕರಾದ ಚೇತನ್ ಸಿಂಗ್ ಜೌರಾಮಾಜ್ರಾ ಮತ್ತು ಹರ್‌ಮೀತ್ ಸಿಂಗ್ ಪಠಾನ್‌ಮಾಜ್ರಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಸಮಾನಾ ಕ್ಷೇತ್ರದ ಶಾಸಕ ಚೇತನ್ ಸಿಂಗ್ ಜೌರಾಮಾಜ್ರಾ ಮತ್ತು ಸನೌರ್ ಕ್ಷೇತ್ರವನ್ನು ಪ್ರತಿನಿಧಿಸುವ ಹರ್‌ಮೀತ್ ಸಿಂಗ್ ಪಠಾನ್‌ಮಾಜ್ರಾ ಅವರು ತಮ್ಮ ರಾಜೀನಾಮೆಯನ್ನು ಘೋಷಿಸಿದ್ದಾರೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗಾಗಿ ಎಎಪಿ ತನ್ನ ಮೊದಲ ಹಂತದ 40 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಮರುದಿನವೇ ಈ ಬೆಳವಣಿಗೆ ನಡೆದಿದೆ.

ವಿಶೇಷವೆಂದರೆ, ಈ ಎರಡೂ ಕ್ಷೇತ್ರಗಳಿಗೆ ಪಕ್ಷವು ಇನ್ನೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಪಂಜಾಬ್‌ನ ಮಾಜಿ ಸಚಿವರಾಗಿರುವ ಜೌರಾಮಾಜ್ರಾ ಅವರು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ನಿರ್ಧಾರವನ್ನು ಪ್ರಕಟಿಸಿದರೆ, ಪಠಾನ್‌ಮಾಜ್ರಾ ಅವರು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ.

ಚಂಡೀಗಢದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜೌರಾಮಾಜ್ರಾ ಪಂಜಾಬ್ ನಲ್ಲಿ ಡ್ರಗ್ ನಿಯಂತ್ರಣ ಸೇರಿದಂತೆ ಹಲವು ವಿಚಾರಗಳಲ್ಲಿ ರಾಜ್ಯ ಸರ್ಕಾರದ ನಿರ್ವಹಣೆಯನ್ನು ಟೀಕಿಸಿದ್ದಾರೆ. ಬೆಳೆಗೆ ಬೆಂಬಲ ಬೆಲೆ ಒದಗಿಸುವಲ್ಲಿ ಭಗವಂತ್ ಮಾನ್ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಮಧ್ಯೆ ಪಠಾನ್ ಮಾಜ್ರಾ, ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಸಾಲವನ್ನು ಟೀಕಿಸಿದ್ದು, ದೆಹಲಿಯ ಎಎಪಿ ನಾಯಕರು ಪಂಜಾಬ್ ಸರ್ಕಾರವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇವರಿಬ್ಬರೂ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಮೊದಲ ದಿನವೇ 1,539 ವಾಹನಗಳಿಗೆ ನಿರ್ಬಂಧ, 68.4 ಲಕ್ಷ ರೂ. ದಂಡ ವಸೂಲಿ..!

ಅಮೆರಿಕದಲ್ಲಿ ಭೀಕರ ವಿಮಾನ ದುರಂತ: ಬೆಂಕಿ ಉಂಡೆಯಂತೆ ಜನನಿಬಿಡ ರಸ್ತೆಗೆ ಅಪ್ಪಳಿಸಿದ ಖಾಸಗಿ ಜೆಟ್; 9 ಮಂದಿ ದುರ್ಮರಣ..!

INDIA bloc's rally:'ಸರಿಯಾಗಿ ನಕಲಿ ಮಾಡಲೂ ಆಗಿಲ್ಲ; ರಾಮಲೀಲಾ ಮೈದಾನದ ಜನಸಾಗರ ತೋರಿಸಲು ಕಾಂಗ್ರೆಸ್ AI ಫೋಟೋ ಬಳಕೆ- ಕಿರಣ್ ರಿಜಿಜು ಲೇವಡಿ

'ಮಾನಸಿಕವಾಗಿ ಬಳಲಿದ್ದೇನೆ, ಆದರೆ ಒತ್ತಡ ನಿಭಾಯಿಸುವ ಶಕ್ತಿ ನನಗಿದೆ': ಕೊನೆಗೂ ಮೌನ ಮುರಿದ ಗೌತಮ್ ಗಂಭೀರ್!

ಟಿ20 ವಿಶ್ವಕಪ್‌ಗೆ ಇನ್ನೂ ಸಮಯವಿದೆ, ಈಗ ಭುವನೇಶ್ವರ್‌ ಕುಮಾರ್‌ ಆಯ್ಕೆ ಯಾಕೆ?; BCCI ಆಯ್ಕೆ ಸಮಿತಿ ನಿರ್ಧಾರಕ್ಕೆ ಇರ್ಫಾನ್ ಪಠಾಣ್ ಕಿಡಿ!