ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿ ಕೇವಲ ಅಣಕು ಸಂಸತ್ತಿನಲ್ಲಿ ಮಾತ್ರ ಪ್ರಧಾನಿಯಾಗ್ತಾರೆ! ಸಿಎಂ ಹಿಮಂತ ಬಿಸ್ವಾ ಶರ್ಮಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ 'ಇಂಡಿಯಾ' (INDIA) ಒಕ್ಕೂಟ ಇತ್ತೀಚಿಗೆ ಮಂಡಿಸಿದ ಸಾಂಕೇತಿಕ ಮಹಾಭಿಯೋಗ ನಿರ್ಣಯ ಹಿನ್ನೆಲೆಯಲ್ಲಿ ಅಸ್ಸಾಂ ಸಿಎಂ ಈ ರೀತಿಯ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಣಕು ಸಂಸತ್ತಿನಲ್ಲಿ ಪ್ರಧಾನಿಯಾಗಬಹುದು, ಆದರೆ ನೈಜ ಸಂಸತ್ತಿನಲ್ಲಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಲೇವಡಿ ಮಾಡಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ 'ಇಂಡಿಯಾ' (INDIA) ಒಕ್ಕೂಟ ಇತ್ತೀಚಿಗೆ ಮಂಡಿಸಿದ ಸಾಂಕೇತಿಕ ಮಹಾಭಿಯೋಗ ನಿರ್ಣಯ ಹಿನ್ನೆಲೆಯಲ್ಲಿಅಸ್ಸಾಂ ಸಿಎಂ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಇತ್ತೀಚಿಗೆ ನಡೆಸಿದ ಸಾಂಕೇತಿಕ ದೋಷರೋಪ ಪ್ರಕ್ರಿಯೆ ಮತ್ತು ನಂತರದ Rally ಕುರಿತು ಪ್ರತಿಕ್ರಿಯಿಸಿದ ಶರ್ಮಾ, ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಕಾಂಗ್ರೆಸ್ ಹಲವು ಬಾರಿ ಪ್ರಯತ್ನಿಸಿದರೂ, ಅವು ಯಶಸ್ವಿಯಾಗಲಿಲ್ಲ ಎಂದು ಹೇಳಿದರು.

ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡಲು ಬಯಸಿದ್ದರು ಮತ್ತು ಅದಕ್ಕಾಗಿ ಅನೇಕ ಪ್ರಯತ್ನಗಳನ್ನು ಮಾಡಿದರು. ಆದರೆ ಯಾವುದೇ ಪ್ರಯತ್ನಗಳು ಫಲ ನೀಡದಿದ್ದಾಗ, ಅವರು ಖರ್ಗೆ ಅವರ ನಿವಾಸದ ಆವರಣದಲ್ಲಿ ಒಂದು 'ಅಣಕು ಸಂಸತ್ತು' ಆಯೋಜಿಸಿದರು. ಅಲ್ಲಿ ಅವರು (ರಾಹುಲ್ ಗಾಂಧಿ) ಪ್ರಧಾನಿಯಾದರು. ವಾಸ್ತವವೇನೆಂದರೆ, ಅಣಕು ಸಂಸತ್ತಿನಲ್ಲಿ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ, ಆದರೆ ನಿಜವಾದ ಸಂಸತ್ತಿನಲ್ಲಿ ಮೋದಿ ಜಿ ಪ್ರಧಾನಿಯಾಗಿರುತ್ತಾರೆ ಎಂದು ಶರ್ಮಾ ಹೇಳಿದರು.

ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' ಪ್ರಕ್ರಿಯೆಯು ಬಿಜೆಪಿ ಮತ್ತು 'ಇಂಡಿಯಾ' ಒಕ್ಕೂಟದ ನಡುವೆ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ವಿರೋಧ ಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ಆರೋಪಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹೆಸರಿಗೆ ಮಾತ್ರ ನಿರ್ಬಂಧ, ಅಂಗಡಿಗಳಲ್ಲಿ ಎಲ್ಲ ರೀತಿಯ ಪಟಾಕಿಗಳೂ ಸಿಗುತ್ತಿವೆ’: ಸುಪ್ರೀಂ ಕೋರ್ಟ್ ಕಳವಳ, ಕೇಂದ್ರಕ್ಕೆ ಖಡಕ್ ಸೂಚನೆ

ಚಿರತೆ ಎಂದು ಭಾವಿಸಿ ಚೀತಾಗಳ ಬೇಟೆ; ಇಬ್ಬರು ಬೇಟೆಗಾರ ಸಹೋದರರ ಬಂಧನ, ಡಬಲ್ ಬ್ಯಾರೆಲ್ ಗನ್ ವಶಕ್ಕೆ!

ಗುಂಡು ಪತ್ತೆ, ಪ್ರಾಚೀನ ಬಂದೂಕು: ಚೀತಾ ಬೇಟೆಗಾರರು ಸಿಕ್ಕಿ ಬಿದ್ದಿದ್ದೇ ರೋಚಕ, STF ಹೇಳಿದ್ದೇನು?

ಕಾಂಗ್ರೆಸ್ ಆಕ್ರೋಶಕ್ಕೆ ಮಣಿದ ವಿಜಯೇಂದ್ರ: ಪೋಸ್ಟರ್ ಸಮರ ಬೆನ್ನಲ್ಲೇ 'ಈ ನನ್ನ ಮಕ್ಕಳು' ಹೇಳಿಕೆಗೆ ಕ್ಷಮೆಯಾಚಿಸಿದ ಬಿಜೆಪಿ ರಾಜ್ಯಾಧ್ಯಕ್ಷ

ಮಹಿಳೆಗೆ ಚಾಕು ತೋರಿಸಿ, ಒತ್ತೆಯಾಳಾಗಿಸಿಕೊಂಡು ದರೋಡೆಗೆ ಯತ್ನ; ಮಂಗಳಸೂತ್ರ ಕಿತ್ತುಕೊಂಡ ದುಷ್ಕರ್ಮಿಗೆ 'ಧರ್ಮದೇಟು'! Video