ಶರದ್ ಪವಾರ್, ಪ್ರಧಾನಿ ಮೋದಿ 
ದೇಶ

ಸುಪ್ರಿಯಾ ಸುಳೆ ದೇಶ ನೋಡ್ಕೋತಾರೆ, ನೀವು ವಿಶ್ರಾಂತಿ ಪಡೆಯಿರಿ: ಶರದ್ ಪವಾರ್ ಗೆ ಪ್ರಧಾನಿ ಮೋದಿ ಕಿವಿಮಾತು

ನೀವು ಚಿಂತಿಸಬೇಡಿ. ಸುಪ್ರಿಯಾ ಸುಳೆ ದೇಶದ ಜವಾಬ್ದಾರಿ ನೋಡಿಕೊಳ್ಳುತ್ತಾರೆ, ನೀವು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಎಂದಿದ್ದಾರೆ. ಪ್ರಧಾನಿ ಮೋದಿ ಮಾತು ಇದೀಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಮುಂಬಯಿ: ಹಿರಿಯ ರಾಜಕಾರಣಿ ಶರದ್ ಪವಾರ್ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಹೊರಬಿದ್ದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಶರದ್ ಪವಾರ್ ಗೆ ಮೋದಿ ಸಲಹೆ ನೀಡಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಗೆ ಕರೆ ಮಾಡಿ ಮಾತನಾಡಿರುವ ಪ್ರಧಾನಿ ಮೋದಿ, ನೀವು ಚಿಂತಿಸಬೇಡಿ. ಸುಪ್ರಿಯಾ ಸುಳೆ ದೇಶದ ಜವಾಬ್ದಾರಿ ನೋಡಿಕೊಳ್ಳುತ್ತಾರೆ, ನೀವು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಎಂದಿದ್ದಾರೆ. ಪ್ರಧಾನಿ ಮೋದಿ ಮಾತು ಇದೀಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಹಾಗೂ ಎನ್‌ಸಿಪಿ (ಶರದ್‌ಚಂದ್ರ ಪವಾರ್) ಬಣದ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿದ್ದಾರೆ. ಪವಾರ್ ಅವರ ಆಪ್ತ ಸ್ನೇಹಿತ ವಿಠ್ಠಲ್ ಮಣಿಯಾರ್ ನೀಡಿರುವ ಮಾಹಿತಿಯ ಪ್ರಕಾರ, ಮೋದಿ ಅವರು ಪವಾರ್‌ಗೆ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಅಲ್ಲದೆ, ಅವರ ಪುತ್ರಿ ಸುಪ್ರಿಯಾ ಸುಳೆ ಮತ್ತು ತಾವು ದೇಶದ ಜವಾಬ್ದಾರಿಯನ್ನು ನೋಡಿಕೊಳ್ಳುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಪ್ರಧಾನಿ ಮೋದಿ ಅವರು ಶರದ್ ಪವಾರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ, ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಯಾವುದರ ಬಗ್ಗೆಯೂ ಚಿಂತಿಸಬೇಡಿ. ಸುಪ್ರಿಯಾ ಸುಳೆ ಈಗ ಎಲ್ಲ ಜವಾಬ್ದಾರಿಗಳನ್ನು ನಿಭಾಯಿಸಲು ಸಿದ್ಧರಾಗಿದ್ದಾರೆ. ನಾವೆಲ್ಲರೂ ಒಟ್ಟಾಗಿ ದೇಶವನ್ನು ನೋಡಿಕೊಳ್ಳುತ್ತೇವೆ. ನೀವು ವಿಶ್ರಾಂತಿ ಪಡೆಯಿರಿ, ನನ್ನನ್ನು ಆಶೀರ್ವದಿಸಿ ಎಂದು ಮೋದಿ ಹೇಳಿದ್ದಾರೆ ಎನ್ನಲಾಗಿದೆ. ಪ್ರಧಾನಿಯವರ ಕಾಳಜಿಗೆ ಶರದ್ ಪವಾರ್ ಧನ್ಯವಾದ ತಿಳಿಸಿದ್ದಾರೆ ಎಂದು ಮಣಿಯಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

85 ವರ್ಷದ ಶರದ್ ಪವಾರ್ ಅವರಿಗೆ ಕೆಮ್ಮು ಮತ್ತು ಎದೆನೋವಿನ ಸಮಸ್ಯೆ ಕಾಣಿಸಿಕೊಂಡಿತ್ತು. ಮಹಾರಾಷ್ಟ್ರದ ಬರಪೀಡಿತ ಪ್ರದೇಶಗಳ ಪ್ರವಾಸದಲ್ಲಿದ್ದ ಅವರು ಅಸ್ವಸ್ಥತೆಯ ಕಾರಣದಿಂದ ಪ್ರವಾಸವನ್ನು ಮೊಟಕುಗೊಳಿಸಿದ್ದರು. ಬಳಿಕ ನವೆಂಬರ್ 2ರಂದು ಪುಣೆಯ ರೂಬಿ ಹಾಲ್ ಕ್ಲಿನಿಕ್‌ಗೆ ದಾಖಲಿಸಲಾಗಿತ್ತು. ವೈದ್ಯರು ಅವರನ್ನು ಪರೀಕ್ಷೆಗೆ ಒಳಪಡಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯಕೀಯ ನಿಗಾದಲ್ಲಿ ಇರಿಸಿದ್ದರು. ಅವರ ಆರೋಗ್ಯದ ಪ್ರಮುಖ ಸೂಚಕಗಳು ಸ್ಥಿರವಾಗಿವೆ ಎಂದು ಪುತ್ರಿ ಸುಪ್ರಿಯಾ ಸುಳೆ ಕೂಡ ಮಾಹಿತಿ ನೀಡಿದ್ದರು.

ಶರದ್ ಪವಾರ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ನವೆಂಬರ್ 4ರಂದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅಲ್ಲಿಂದ ಅವರು ಮುಂಬೈನ ತಮ್ಮ ನಿವಾಸಕ್ಕೆ ತೆರಳಿದ್ದು, ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಾಮಾನ್ಯ ಜನತೆಗೆ ಬರೆ: ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ಬಸ್ ದರ ಹೆಚ್ಚಳ; ನೂತನ ದರ ಇಂದು ಮಧ್ಯರಾತ್ರಿ ಜಾರಿ

India vs New Zealand, 1st ODI: ಮತ್ತೊಂದು ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ!

ಯುಪಿ ಚುನಾವಣೆಗೂ ಮುನ್ನ, ಯೋಗಿ ಸರ್ಕಾರ ಬಂಪರ್ ಗಿಫ್ಟ್; ದೀಪಾವಳಿ, ಹೋಳಿಗೆ ಉಚಿತ ಎಲ್‌ಪಿಜಿ ಸಿಲಿಂಡರ್ ಘೋಷಣೆ!

ಜಮೀನು ವಿವಾದ, ಭೀಕರ ಹತ್ಯೆ; ಸೊಸೆಯ ಶಿರಚ್ಛೇದ, ಗಂಡನ ಸಹೋದರರಿಂದಲೇ ಕ್ರೂರ ಕೃತ್ಯ!

'ಅವರಿಗೂ ಯುದ್ಧ ಬೇಡ': ಅಮೆರಿಕ ಮಧ್ಯಂತರ ಚುನಾವಣೆ ಫಲಿತಾಂಶ ಕುರಿತು ಇರಾನ್ ಪ್ರತಿಕ್ರಿಯೆ