ಪಂಜಾಬ್‌ನ ಸರಾಯ್ ಬಂಜಾರ ರೈಲು ನಿಲ್ದಾಣದ ಸಮೀಪ ಶುಕ್ರವಾರ 'ಕರ್ಮಭೂಮಿ ಎಕ್ಸ್‌ಪ್ರೆಸ್' ರೈಲಿನ ನಾಲ್ಕು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಯಿತು. ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ಇನ್ನೂ ವರದಿಯಾಗಿಲ್ಲ.
ಲಭ್ಯವಿರುವ ಮಾಹಿತಿಯ ಪ್ರಕಾರ, ಅಮೃತಸರ ಮತ್ತು ಹೊಸ ಜಲ್ಪೈಗುರಿ ನಡುವೆ ಸಂಚರಿಸುವ 12508 ಸಂಖ್ಯೆಯ 'ಕರ್ಮಭೂಮಿ ಎಕ್ಸ್‌ಪ್ರೆಸ್' ರೈಲಿನ, ಎಂಜಿನ್‌ನಿಂದ ಐದನೇ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಮೂಲಗಳ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಬೆಂಕಿಗೆ ನಿಖರವಾದ ಕಾರಣವೇನು ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.
ಘಟನಾ ಸ್ಥಳದ ದೃಶ್ಯಗಳಲ್ಲಿ, ರೈಲಿನ ಹಲವು ಬೋಗಿಗಳಿಂದ ಬೆಂಕಿ ಮತ್ತು ದಟ್ಟ ಹೊಗೆ ಬರುತ್ತಿರುವುದು ಕಂಡುಬಂದಿದೆ.
ರೈಲ್ವೆ ಅಧಿಕಾರಿಗಳು ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಭಾಯಿಸುವ ಕಾರ್ಯದಲ್ಲಿ ತೊಡಗಿದ್ದಾರೆ.