ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ANI
ದೇಶ

2029 ರವರೆಗೆ Wait and watch: ರಾಹುಲ್ ಗಾಂಧಿ ಪ್ರಧಾನಿ ಆಗುವುದು ಖಚಿತ- ಕೆ.ಸಿ.ವೇಣುಗೋಪಾಲ್

ಅಮಿತ್ ಶಾ ಅವರೇ, ಸ್ವಲ್ಪ ಸಮಯ ಕಾಯಿರಿ. ನಮ್ಮ ಮಾತನ್ನು ನೆನಪಿಟ್ಟುಕೊಳ್ಳಿ. ರಾಹುಲ್ ಗಾಂಧಿ ಭಾರತದ ಪ್ರಧಾನಿಯಾಗಲಿದ್ದಾರೆ. 2029ರವರೆಗೆ ಕಾಯಿರಿ. ದೇಶದ ಜನರು ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2029ರಲ್ಲಿ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ರಾಹುಲ್ ಗಾಂಧಿ ಅವರು ಅಣಕು ಸಂಸತ್ತಿನಲ್ಲಿ ಮಾತ್ರ ಪ್ರಧಾನಿಯಾಗಬಹುದು ಎಂಬ ಅಮಿತ್ ಶಾ ಹೇಳಿಕೆ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 2029ರವರೆಗೆ ಕಾಯುವಂತೆ ಸವಾಲು ಹಾಕಿದ್ದಾರೆ. ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಮುಂದೆ ಏನಾಗಲಿದೆ ಎಂಬುದನ್ನು ಅವರೇ ಯೋಚಿಸಲಿ ಎಂದು ಹೇಳಿದ್ದಾರೆ.

ಅಮಿತ್ ಶಾ ಅವರೇ, ಸ್ವಲ್ಪ ಸಮಯ ಕಾಯಿರಿ. ನಮ್ಮ ಮಾತನ್ನು ನೆನಪಿಟ್ಟುಕೊಳ್ಳಿ. ರಾಹುಲ್ ಗಾಂಧಿ ಭಾರತದ ಪ್ರಧಾನಿಯಾಗಲಿದ್ದಾರೆ. 2029ರವರೆಗೆ ಕಾಯಿರಿ. ದೇಶದ ಜನರು ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಿದ್ದಾರೆ.

ಆದರೆ, ಅವರ ಹೋರಾಟ ಕೇವಲ ಪ್ರಧಾನಿ ಹುದ್ದೆಗಾಗಿ ಅಲ್ಲ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸುವುದು, ಸಾಮಾನ್ಯ ಜನರ ಮತದಾನದ ಹಕ್ಕುಗಳನ್ನು ರಕ್ಷಿಸುವುದು ಮತ್ತು ಸಂವಿಧಾನವನ್ನು ಎತ್ತಿಹಿಡಿಯುವುದೇ ಇಂಡಿಯಾ ಮೈತ್ರಿಕೂಟದ ಪ್ರಮುಖ ಉದ್ದೇಶ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಿಕೂಟ ಬೃಹತ್ ಪ್ರತಿಭಟನೆ ನಡೆಸಿತ್ತು. ಎಸ್‌ಐಆರ್ ಪ್ರಕ್ರಿಯೆಯನ್ನು ಹಿಂಪಡೆಯಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಮೈತ್ರಿಕೂಟದ ನಾಯಕರು ಆಗ್ರಹಿಸಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಮತಗಳ್ಳತನದ ಆರೋಪವನ್ನೂ ಮಾಡಿದ್ದ ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪಕ್ಷಗಳು, ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

AI ಬರಹ, ನಕಲಿ ಲೇಖಕರು: ಕೊಯಮತ್ತೂರಿನ ಗ್ರಂಥಾಲಯದಲ್ಲಿ ನಕಲಿ ಪುಸ್ತಕಗಳ ಜಾಲ! ಸಾಹಿತ್ಯ ಲೋಕವನ್ನು ಬೆಚ್ಚಿಬೀಳಿಸಿದ ಪೆರಿಯಾರ್ ಅರಿವುಳಗಂ ಗ್ರಂಥಾಲಯ ಹಗರಣ

SBI ಬ್ಯಾಂಕ್‌ಗೆ ₹12,668 ಕೋಟಿ ಸಾಲ ಬಾಕಿ: ಮಾಜಿ ವೀಡಿಯೊಕಾನ್ ಮುಖ್ಯಸ್ಥ ವೇಣುಗೋಪಾಲ್ ಧೂತ್ ದಿವಾಳಿ ಎಂದ NCLT

OBC ಮೀಸಲಾತಿ ಕುರಿತು ಸುಪ್ರೀಂ ಮಹತ್ವದ ತೀರ್ಪು: ಕೇವಲ ವೇತನವಷ್ಟೇ ಮಾನದಂಡವಲ್ಲ ಎಂದ ಸರ್ವೋಚ್ಚ ನ್ಯಾಯಾಲಯ

India vs New Zealand, 2nd ODI: ಭಾರತದ ಬೌಲರ್‌ಗಳ ಮುಂದೆ ಮಂಡಿಯೂರಿದ ನ್ಯೂಜಿಲೆಂಡ್ ಬ್ಯಾಟರ್‌ಗಳು; 134 ರನ್‌ಗಳಿಗೆ ಆಲೌಟ್!

'ತುರ್ತು ಪರಿಸ್ಥಿತಿಯ ಅತಿರೇಕದ ಘಟನೆಗಳಿಗೆ ಸಂಜಯ್ ಮಾತ್ರ ಕಾರಣರಲ್ಲ': ಅತ್ತೆ ಇಂದಿರಾ ಮೇಲೆ ಸಾಕಷ್ಟು ಒತ್ತಡವಿತ್ತು; ಸೋನಿಯಾ ಗಾಂಧಿ