ತಮಿಳುನಾಡು ಸಿಎಂ ವಿಜಯ್ 
ದೇಶ

ಕಾಲೇಜು ವಿದ್ಯಾರ್ಥಿಗಳಿಗೆ ದೀಪಾವಳಿ ಗಿಫ್ಟ್: ಉಚಿತ ಲ್ಯಾಪ್‌ಟಾಪ್ ವಿತರಿಸಲು ತಮಿಳುನಾಡು CM ವಿಜಯ್ ಆದೇಶ

ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು, ಮುಖ್ಯಮಂತ್ರಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗುವುದು.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಕಾಲೇಜು ವಿದ್ಯಾರ್ಥಿಗಳಿಗೆ ದೀಪಾವಳಿ ಬಂಪರ್ ಗಿಫ್ಟ್ ನೀಡಿದ್ದು, 'ವೆಟ್ರಿ ಲ್ಯಾಪ್‌ಟಾಪ್ ಯೋಜನೆ'(Vetri Laptop Scheme) ಜಾರಿಗೊಳಿಸಲು ಶನಿವಾರ ಆದೇಶಿಸಿದ್ದಾರೆ. ಈ ಉಪಕ್ರಮಕ್ಕಾಗಿ ರಾಜ್ಯ ಸರ್ಕಾರವು ₹2,000 ಕೋಟಿ ಅನುದಾನ ಮೀಸಲಿಟ್ಟಿದೆ ಎಂದು ಸಿಎಂ ತಿಳಿಸಿದ್ದಾರೆ.

2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾದ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು, ಮುಖ್ಯಮಂತ್ರಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗುವುದು.

'ವೆಟ್ರಿ' (Vetri) ಎಂದರೆ 'ಜಯ' ಅಥವಾ 'ಗೆಲುವು' ಎಂದರ್ಥ. ಟಿವಿಕೆ (TVK) ನೇತೃತ್ವದ ಸರ್ಕಾರದ ಉಪಕ್ರಮಗಳಿಗೆ — ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯೂ ಸೇರಿದಂತೆ ಹಲವು ಯೋಜನೆಗಳಿಗೆ 'ವೆಟ್ರಿ' ಎಂಬ ಹೆಸರನ್ನು ಸೇರಿಸಲಾಗುತ್ತಿದೆ.

ಕಲೆ, ವಿಜ್ಞಾನ, ಎಂಜಿನಿಯರಿಂಗ್, ವೈದ್ಯಕೀಯ, ಪಶುವೈದ್ಯಕೀಯ ವಿಜ್ಞಾನ, ಕೃಷಿ, ಮೀನುಗಾರಿಕೆ ಮತ್ತು ಕಾನೂನು ಸೇರಿದಂತೆ ವಿವಿಧ ಕೋರ್ಸ್‌ಗಳಲ್ಲಿ, ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಕಾಲೇಜುಗಳಲ್ಲಿ (2026-27ನೇ ಸಾಲಿನಲ್ಲಿ) ವ್ಯಾಸಂಗ ಮಾಡುತ್ತಿರುವ ಪದವಿ (UG) ಹಾಗೂ ಡಿಪ್ಲೊಮಾ (ಪಾಲಿಟೆಕ್ನಿಕ್, ಐಟಿಐ) ಕೋರ್ಸ್‌ಗಳ ಮೊದಲ ಮತ್ತು ಎರಡನೇ ವರ್ಷದ ವಿದ್ಯಾರ್ಥಿಗಳಿಗೆ ಈ ಉಚಿತ ಲ್ಯಾಪ್‌ಟಾಪ್ ವಿತರಿಸುವಂತೆ ಸಿಎಂ ಆದೇಶಿಸಿದ್ದಾರೆ.

ಜೊತೆಗೆ, 2025-26ನೇ ಶೈಕ್ಷಣಿಕ ವರ್ಷದಲ್ಲಿ ಈ ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯವಾಗದ, ಪ್ರಸ್ತುತ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸ್‌ಗಳ ಮೂರನೇ ಮತ್ತು ನಾಲ್ಕನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಶೇಷ ಲ್ಯಾಪ್‌ಟಾಪ್

ಎಂಜಿನಿಯರಿಂಗ್ ವಿದ್ಯಾರ್ಥಿಗಳ ತಾಂತ್ರಿಕ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಇಂಟೆಲ್ ಕೋರ್ ಐ5 ಪ್ರೊಸೆಸರ್ ಅಥವಾ ಅದಕ್ಕೆ ಸಮಾನ ಸಾಮರ್ಥ್ಯದ ಪ್ರೊಸೆಸರ್ ಹೊಂದಿರುವ ಲ್ಯಾಪ್‌ಟಾಪ್‌ಗಳನ್ನು ವಿತರಿಸಲು ಸರ್ಕಾರ ನಿರ್ಧರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇಶದ ಜನತೆಗೆ ಪ್ರಧಾನಿಯಿಂದ ದೀಪಾವಳಿ ಹಬ್ಬದ ಶುಭಾಶಯ: ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಸಂಪ್ರದಾಯದ ಬಗ್ಗೆ ಹೇಳಿದ್ದಿಷ್ಟು...

KPSC ಶುದ್ಧೀಕರಣವಾಗುವರೆಗೂ ಆಯೋಗದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಮುಂದೂಡಿ: HD ಕುಮಾರಸ್ವಾಮಿ

2028ರ ಅಧ್ಯಕ್ಷೀಯ ಚುನಾವಣೆ ಮೇಲೆ ಕಣ್ಣಿಟ್ಟಿರುವ ಜೆಡಿ ವ್ಯಾನ್ಸ್ ಟ್ರಂಪ್‌ರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ!

'ಕುಮಾರಸ್ವಾಮಿ ತ್ಯಾಪೆ ಗಿರಾಕಿ, ಇವರಿಗೆ ಅಧಿಕಾರ ಬಿಟ್ಟುಕೊಡಲು ಬಿಜೆಪಿಯಲ್ಲಿ CM ಆಗುವಂತಹ ಗಂಡಸರು ಇಲ್ವಾ'?

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಬೇಡಿಕೆಗೆ ಕೋರ್ಟ್ ಅಸ್ತು; ಆದರೆ ಷರತ್ತುಗಳು ಅನ್ವಯ!