ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ 
ದೇಶ

ಅಮಾವಾಸ್ಯೆ ರಾತ್ರಿ ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಕಾರಿಗೆ ಬೆಂಕಿ ಹೊತ್ತು 6 ಮಂದಿ ಸಜೀವ ದಹನ!

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಶಾಮ್ಲಿ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಮುಜಾಫರ್‌ನಗರ: ದೀಪಾವಳಿ ಅಮಾವಾಸ್ಯೆ ದಿನದಂದೇ ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬರೊಬ್ಬರಿ 6 ಮಂದಿ ಸಾವನ್ನಪ್ಪಿದ್ದಾರೆ.

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಶಾಮ್ಲಿ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡು ಆರು ಮಂದಿ ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೇಗವಾಗಿ ಬರುತ್ತಿದ್ದ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ವಾಹನವನ್ನು ಆವರಿಸಿದೆ. ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಬೆಂಕಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.

ಘಟನೆ ಕುರಿತು ಮಾಹಿತಿ ಲಭಿಸುತ್ತಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕಾರಿನಲ್ಲಿದ್ದವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಪರೀಕ್ಷಿಸಿದ ವೈದ್ಯರು ಆರು ಮಂದಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಅವರ ಗುರುತು ಪತ್ತೆಹಚ್ಚಿ ಕುಟುಂಬದವರಿಗೆ ಮಾಹಿತಿ ನೀಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಆರಂಭಿಕ ಮಾಹಿತಿ ಪ್ರಕಾರ, ಕಾರಿನಲ್ಲಿದ್ದವರು ಹರಿಯಾಣದ ಹಿಸಾರ್‌ನಿಂದ ಹರಿದ್ವಾರಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚೀನಾ 'Spy' ಜೊತೆಗಿನ ಪ್ರೇಮ ಪ್ರಕರಣ ಒಪ್ಪಿಕೊಂಡ Nvidia ಸಿಇಒ! ಕುಟುಂಬ ಹಾಗೂ ಉದ್ಯೋಗಿಗಳ ಕ್ಷಮೆ ಕೋರಿದ AI ದಿಗ್ಗಜ ಜೆಂಸೆನ್ ಹುವಾಂಗ್; ಅಮೆರಿಕದಲ್ಲಿ ತೀವ್ರ ಸಂಚಲನ

ದೆಹಲಿಯಲ್ಲಿ ವಿಷಗಾಳಿಯ ಪ್ರಕೋಪ: ಅಪಾಯಕಾರಿ ಮಟ್ಟಕ್ಕೆ ತಲುಪಿದ ವಾಯುಮಾಲಿನ್ಯ; 1,331ಕ್ಕೆ ಏರಿದ AQI, ದಟ್ಟ ಹೊಗೆ ಹೊದಿಕೆಯಲ್ಲಿ ರಾಷ್ಟ್ರ ರಾಜಧಾನಿ..!

12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ-ಕೊಲೆ; ಆರೋಪಿ ಪೊಲೀಸ್ ಎನ್ಕೌಂಟರ್ ನಲ್ಲಿ ಹತ!

West Asia war: 'ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ, ಇಲ್ಲದಿದ್ದರೆ ನರಕ ಸೃಷ್ಟಿಸುತ್ತೇವೆ': ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಇರಾನ್ ಖಡಕ್ ಎಚ್ಚರಿಕೆ..!

DC ಹುದ್ದೆಯಲ್ಲಿ ಮುಂದುವರಿಯಲು 75 ಲಕ್ಷ ರೂ. ಲಂಚ?: ಹಾಸನ ಜಿಲ್ಲಾಡಳಿತದಲ್ಲಿ ಸಂಚಲನ ಸೃಷ್ಟಿಸಿದ ವಾಟ್ಸ್‌ಆ್ಯಪ್ ಚಾಟ್, ತನಿಖೆಗೆ HDK ಒತ್ತಾಯ..!