ಹಳಿ ತಪ್ಪಿದ ರೈಲು ಹಳಿ  
ದೇಶ

ಗುವಾಹಟಿ: ದಿಗಾರು ರೈಲು ನಿಲ್ದಾಣ ಬಳಿ ಇಂಜಿನ್ ಸೇರಿ ಹಳಿ ತಪ್ಪಿದ 6 ಬೋಗಿಗಳು; Video

ಈಶಾನ್ಯ ಗಡಿ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ (CPRO) ಕಪಿಂಜಲ್ ಕಿಶೋರ್ ಶರ್ಮಾ, ದೂರವಾಣಿ ಮೂಲಕ ಎಎನ್‌ಐಗೆ ಮಾಹಿತಿ ನೀಡಿದ್ದು, ಸದ್ಯದವರೆಗೆ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಅಸ್ಸಾಂನ ಕಾಮರೂಪ್ (ಮೆಟ್ರೋ) ಜಿಲ್ಲೆಯ ದಿಗಾರು ರೈಲು ನಿಲ್ದಾಣದಲ್ಲಿ ಇಂದು ಬುಧವಾರ ಬೆಳಗ್ಗೆ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್ ರೈಲಿನ ಇಂಜಿನ್ ಮತ್ತು 6 ಬೋಗಿಗಳು ಹಳಿ ತಪ್ಪಿವೆ. ಘಟನೆಯ ಬೆನ್ನಲ್ಲೇ ಈಶಾನ್ಯ ಗಡಿ ರೈಲ್ವೆ (NFR) ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ.

ಇಂದು ಬೆಳಗ್ಗೆ ಸುಮಾರು 6.54ಕ್ಕೆ ರೈಲು ಸಂಖ್ಯೆ 13125 ಹಳಿ ತಪ್ಪಿದೆ. ಮತ್ತೊಂದು ರೈಲಿಗೆ ಆದ್ಯತೆ ನೀಡುವ ಸಲುವಾಗಿ ದಿಗಾರು ನಿಲ್ದಾಣದಲ್ಲಿ ರೈಲನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಈಶಾನ್ಯ ಗಡಿ ರೈಲ್ವೆ ತಿಳಿಸಿದೆ.

ರೈಲ್ವೆ ಇಲಾಖೆ ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಲೋಕೋ ಪೈಲಟ್‌ಗೆ ರೈಲಿನ ವೇಗವನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ಇಂಜಿನ್ ಮತ್ತು ಐದು ಬೋಗಿಗಳು ಹಳಿ ತಪ್ಪಿವೆ. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾರಿಗೂ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಪ್ರಯಾಣಿಕರು ತಮ್ಮ ನಿಗದಿತ ಸ್ಥಳಗಳನ್ನು ತಲುಪಲು ಪರ್ಯಾಯ ರೈಲಿನ ವ್ಯವಸ್ಥೆ ಮಾಡಲಾಗಿದೆ. ಘಟನೆಯ ಬೆನ್ನಲ್ಲೇ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತಕ್ಷಣವೇ ಆರಂಭಿಸಲಾಗಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.

ಈಶಾನ್ಯ ಗಡಿ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ (CPRO) ಕಪಿಂಜಲ್ ಕಿಶೋರ್ ಶರ್ಮಾ ಅವರು ಎಎನ್‌ಐ ಸುದ್ದಿಸಂಸ್ಥೆಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದು, ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದಿದ್ದಾರೆ.

ಎಎನ್‌ಐ ವರದಿ ಮಾಡಿರುವ ಹೇಳಿಕೆಯಲ್ಲಿ, ಈಶಾನ್ಯ ಗಡಿ ರೈಲ್ವೆಯ ಪ್ರಧಾನ ವ್ಯವಸ್ಥಾಪಕರು ಸೇರಿದಂತೆ ಇತರ ಅಧಿಕಾರಿಗಳೂ ಘಟನಾ ಸ್ಥಳಕ್ಕೆ ತೆರಳಿದ್ದಾರೆ ಎಂದು ಶರ್ಮಾ ತಿಳಿಸಿದ್ದಾರೆ.

ಸ್ಥಳೀಯ ನಿವಾಸಿಯೊಬ್ಬರು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ, ಬೆಳಗಿನ ವಾಯುವಿಹಾರಕ್ಕೆ ತೆರಳಿದ್ದಾಗ ರೈಲು ಅಪಘಾತದ ಬಗ್ಗೆ ತಿಳಿದುಕೊಂಡು ಸ್ಥಳಕ್ಕೆ ಧಾವಿಸಿದ್ದಾಗಿ ಹೇಳಿದ್ದಾರೆ. ದಿಗಾರು ರೈಲು ನಿಲ್ದಾಣದಿಂದ ಸುಮಾರು 500 ಮೀಟರ್ ದೂರದಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ತಲುಪಿದಾಗ ಆರು ಬೋಗಿಗಳು ಹಳಿ ತಪ್ಪಿರುವುದನ್ನು ಕಂಡಿದ್ದಾಗಿ ಅವರು ತಿಳಿಸಿದ್ದಾರೆ. ಘಟನಾ ಸ್ಥಳದ ಸಮೀಪದಲ್ಲೇ ಹಲವು ಮನೆಗಳೂ ಇವೆ ಎಂದಿದ್ದಾರೆ.

ಸಮೀಪದಲ್ಲೇ ಹಲವು ಮನೆಗಳಿದ್ದವು. ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ಸ್ಥಳೀಯ ನಿವಾಸಿ ಹೇಳಿದ್ದಾರೆ.

ಬ್ರೇಕ್ ವೈಫಲ್ಯದಿಂದಾಗಿ ಅಪಘಾತ ಸಂಭವಿಸಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ ಎಂದೂ ಅವರು ತಿಳಿಸಿದ್ದಾರೆ. ಆದರೆ, ರೈಲ್ವೆ ಇಲಾಖೆ ಇದನ್ನು ಇನ್ನೂ ದೃಢಪಡಿಸಿಲ್ಲ. ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Babri ಧ್ವಂಸದ ದಿನ ಬಿಕ್ಕಿ ಬಿಕ್ಕಿ ಅತ್ತಿದ್ದೆ: ಇಂದಿರಾ ಹತ್ಯೆ ನಂತರ ಪ್ರತಿಕ್ಷಣವೂ ಭಯದಲ್ಲೇ ಬದುಕಿದ್ದೆವು: ‘Belonging’ ಆತ್ಮಚರಿತ್ರೆಯಲ್ಲಿ ಹಳೇ ನೆನಪುಗಳ ಕೆದಕಿದ ಸೋನಿಯಾ ಗಾಂಧಿ..!

ಅಮೆರಿಕ ರಾಜಕೀಯದಲ್ಲಿ ಹೈಡ್ರಾಮಾ: ರಕ್ಷಣಾ ಕಾರ್ಯದರ್ಶಿ ಹೆಗ್ಸೆತ್ ವಿರುದ್ಧದ ವಾಗ್ದಂಡನೆ ನಿರ್ಣಯಕ್ಕೆ ಸೋಲು, Trump ಬೆಂಬಲಕ್ಕೆ ನಿಂತ ರಿಪಬ್ಲಿಕನ್ನರು..!

ಮಗುವನ್ನು ನದಿಗೆ ಬಿಡಲು ಒಪ್ಪದ ಸೋನಿಯಾ: ಮೆಹ್ರೌಲಿ ತೋಟದಲ್ಲಿ ನಡೆದಿತ್ತು ಆ ಪುಟ್ಟ ಕಂದನ ಅಂತ್ಯಕ್ರಿಯೆ, 57 ವರ್ಷಗಳ ಬಳಿಕ ಮನದ ನೋವು ಬಿಚ್ಚಿಟ್ಟ ಕಾಂಗ್ರೆಸ್ ನಾಯಕಿ..!

ಆರ್ಥಿಕ ನಿರ್ಬಂಧಗಳು ಪರಿಣಾಮಕಾರಿಯಾಗಿವೆ, ಇರಾನ್ ವಿರುದ್ಧ ಯುದ್ಧ ಕಾರ್ಯಾಚರಣೆ ಅಗತ್ಯವಿಲ್ಲ: US ವಿದೇಶಾಂಗ ಸಚಿವ ರೂಬಿಯೊ

ಅಜ್ಜನ ಆಸ್ತಿಯಲ್ಲಿ ಮೊಮ್ಮಗನಿಗೆ ಜನ್ಮಸಿದ್ಧ ಹಕ್ಕು ಇದೆಯೇ?: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು