ರಶ್ಪಾಲ್ ಕುಮಾರ್ ಮತ್ತು ಬಾಬಿ ಚಂದ್ 
ದೇಶ

ಕಾಶ್ಮೀರ: ಕರ್ತವ್ಯದ ವೇಳೆ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಶವವಾಗಿ ಪತ್ತೆ

ಕಾಣೆಯಾದ ಸಂದೇಶ ಬಂದ ತಕ್ಷಣ ಅಧಿಕಾರಿಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಹಲವು ಗಂಟೆಗಳ ಶೋಧದ ನಂತರ ಧೇರ್ನಾ ಪೋಸ್ಟ್‌ನಿಂದ ಇಬ್ಬರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಿಶ್ತ್ವಾರ್: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದೂರದ ಡಚ್ಚನ್-ಮಾರ್ವಾ ಪ್ರದೇಶದಲ್ಲಿ ಬುಧವಾರ ಗಸ್ತು ತಿರುಗುತ್ತಿದ್ದಾಗ ನಾಪತ್ತೆಯಾಗಿದ್ದ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳ(ಎಸ್‌ಪಿಒ) ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.

ಕಾಣೆಯಾದ ಸಂದೇಶ ಬಂದ ತಕ್ಷಣ ಅಧಿಕಾರಿಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಹಲವು ಗಂಟೆಗಳ ಶೋಧದ ನಂತರ ಧೇರ್ನಾ ಪೋಸ್ಟ್‌ನಿಂದ ಇಬ್ಬರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ, ಅವರ ಬಳಿಯಿದ್ದ ಸೇವಾ ಶಸ್ತ್ರಾಸ್ತ್ರಗಳು (ಸರ್ವಿಸ್ ವೆಪನ್ಸ್) ನಾಪತ್ತೆಯಾಗಿವೆ. ಇದು ಈ ಘಟನೆಯಲ್ಲಿ ಉಗ್ರರ ಕೈವಾಡವಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಹತ್ಯೆಗೀಡಾದ ಎಸ್‌ಪಿಒಗಳನ್ನು ದಚ್ಚನ್ ಪ್ರದೇಶದ ಕಿಯಾರ್ ಗ್ರಾಮದ ನಿವಾಸಿಗಳಾದ ರಶ್ಪಾಲ್ ಕುಮಾರ್ (40) ಮತ್ತು ಬಾಬಿ ಚಂದ್ (54) ಎಂದು ಗುರುತಿಸಲಾಗಿದೆ.

ಒಬ್ಬ ಅಧಿಕಾರಿ ತಲೆಗೆ ಗುಂಡು ತಗುಲಿದ್ದರೆ, ಇನ್ನೊಬ್ಬ ಅಧಿಕಾರಿಯ ಬೆನ್ನಿಗೆ ಗಾಯವಾಗಿತ್ತು. ಇವರಿಬ್ಬರೂ ಕಿಶ್ತ್ವಾರ್ ಪೊಲೀಸರ ‘ಸ್ಪೆಷಲ್ ಆಪರೇಷನ್ಸ್ ಗ್ರೂಪ್’ (SOG) ಗೆ ಸೇರಿದವರಾಗಿದ್ದು, ಕಿಯಾರ್ ವಲಯದಲ್ಲಿ ನಿಯೋಜನೆಗೊಂಡಿದ್ದರು.

ಅಧಿಕಾರಿಗಳ ಪ್ರಕಾರ, ಚಂದ್ ಮತ್ತು ಕುಮಾರ್ ಅವರಿಗೆ ಮಾರ್ವಾಹ್‌ನ ಧರ್ನಾ ವಲಯದಲ್ಲಿರುವ 17ನೇ ರಾಷ್ಟ್ರೀಯ ರೈಫಲ್ಸ್ (RR) ನ ತಾತ್ಕಾಲಿಕ ಕಾರ್ಯಾಚರಣೆ ನೆಲೆಗೆ (TOB) ಕರ್ತವ್ಯಕ್ಕಾಗಿ ನಿಯೋಜಿಸಲಾಗಿತ್ತು. ಬುಧವಾರ ಅವರು ಕಿಯಾರ್‌ನಲ್ಲಿರುವ ತಮ್ಮ ಶಿಬಿರದಿಂದ ಸೇನಾ ನೆಲೆಗೆ ಪ್ರಯಾಣಿಸುತ್ತಿದ್ದಾಗ ನಾಪತ್ತೆಯಾಗಿದ್ದರು, ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಇಬ್ಬರು ಅಧಿಕಾರಿಗಳು ನಾಪತ್ತೆಯಾದ ಬೆನ್ನಲ್ಲೇ ಸೇನಾ ಪಡೆ ವಿಶೇಷ ಕಾರ್ಯಾಚರಣೆ ಕೈಗೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ-ಮಾಡೆಲ್ ಸಮ್ರೀನ್ ಜತೆ ಸ್ಟಾರ್‌ ಕ್ರಿಕೆಟರ್‌ ಅರ್ಷ್‌ದೀಪ್ ಸಿಂಗ್ ಎಂಗೇಜ್‌ಮೆಂಟ್; ಫೋಟೋ ಹಂಚಿಕೊಂಡ ಗರ್ಲ್​ಫ್ರೆಂಡ್!

ಚೀನಾ Spy ಮೋಹಕ್ಕೆ ಬಿದ್ದರಾ ಟೆಕ್ ದಿಗ್ಗಜ..? Nvidia CEO ಕುರ್ಚಿಗೆ ಕುತ್ತು, Jensen Huang ತಲೆದಂಡಕ್ಕೆ ಮುಹೂರ್ತ ಫಿಕ್ಸ್..?

E-ಖಾತಾ ಅಕ್ರಮ: GBA ಸಹಾಯಕ ಆಯುಕ್ತ ಮಾಗಿ ಸೇರಿ 31 ಜನರ ವಿರುದ್ಧ FIR ದಾಖಲು

ಪ್ರೀತಿ, ನಷ್ಟ, ನೋವು, ತ್ಯಾಗದ ಅಪರೂಪದ ಕಥನ; ಪ್ರತಿಯೊಬ್ಬ ಭಾರತೀಯರ ಓದಲೇಬೇಕಾದ ಪುಸ್ತಕ': ಸೋನಿಯಾ ಗಾಂಧಿ ಆತ್ಮಕಥನಕ್ಕೆ ಕಾಂಗ್ರೆಸ್ ನಾಯಕರ ಮೆಚ್ಚುಗೆ..!

'ಕೈ' ಕಾರ್ಯಕರ್ತರಿಗೆ ಸರ್ಕಾರ ಭರ್ಜರಿ ಗಿಫ್ಟ್; 428 ಮಂದಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ..!