ಪ್ರಧಾನಿ ಮೋದಿ - ಡಿಕೆ ಶಿವಕುಮಾರ್ 
ದೇಶ

ಕಾಂಗ್ರೆಸ್ vs ಕಾಂಗ್ರೆಸ್: ಪ್ರಧಾನಿ ಮೋದಿ ಮುಂದೆ ಮೇಕೆದಾಟು ಪ್ರಸ್ತಾಪಿಸಿದ CM ಡಿಕೆಶಿ; ಖಂಡಿಸಿದ ಮಾಣಿಕ್ಯಂ ಟ್ಯಾಗೋರ್!

ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಡಿ.ಕೆ. ಶಿವಕುಮಾರ್ ಈ ರೀತಿಯ ಹೇಳಿಕೆ ನೀಡಿರುವುದು ಸರಿಯಲ್ಲ.

ಚೆನ್ನೈ: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ವಿಷಯದಲ್ಲಿ ಈಗ ಕಾಂಗ್ರೆಸ್ ಪಕ್ಷದೊಳಗೇ ಭಿನ್ನಾಭಿಪ್ರಾಯ ವ್ಯಕ್ತವಾಗಿದ್ದು, ಕರ್ನಾಟಕದ ಈ ಯೋಜನೆಯನ್ನು ತಮಿಳುನಾಡು ತೀವ್ರವಾಗಿ ವಿರೋಧಿಸುತ್ತಿದೆ.

ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಇದಕ್ಕೆ ಕೇಂದ್ರ ಸರ್ಕಾರ ಅಂತಿಮ ಅನುಮತಿ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ ಹೇಳಿಕೆಯನ್ನು, ತಮಿಳುನಾಡು ಕಾಂಗ್ರೆಸ್ ಸಮಿತಿ(TNCC) ಅಧ್ಯಕ್ಷ ಮಾಣಿಕ್ಯಂ ಟ್ಯಾಗೋರ್ ಶನಿವಾರ ತೀವ್ರವಾಗಿ ಖಂಡಿಸಿದ್ದಾರೆ.

ಈ ಅಣೆಕಟ್ಟು ನಿರ್ಮಾಣವು ಕಾನೂನುಬಾಹಿರ ಮಾತ್ರವಲ್ಲದೆ, ರೈತರ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಟ್ಯಾಗೋರ್ ಪ್ರತಿಪಾದಿಸಿದ್ದಾರೆ.

ಈ ಕುರಿತು 'ಎಕ್ಸ್' (X)ನಲ್ಲಿ ಪೋಸ್ಟ್ ಮಾಡಿರುವ ಟ್ಯಾಗೋರ್, ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಡಿ.ಕೆ. ಶಿವಕುಮಾರ್ ಈ ರೀತಿಯ ಹೇಳಿಕೆ ನೀಡಿರುವುದು ಸರಿಯಲ್ಲ. ಈ ನಿಲುವು ಸುಪ್ರೀಂ ಕೋರ್ಟ್‌ನ ನಿರ್ದೇಶನ ಮತ್ತು ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

"ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ, 'ಮೇಕೆದಾಟು ಅಣೆಕಟ್ಟು ನಿರ್ಮಾಣವನ್ನು ಯಾರೂ ತಡೆಯಲು ಸಾಧ್ಯವಿಲ್ಲ' ಎಂದು ಹೇಳಿರುವುದು ಮತ್ತು ಇದಕ್ಕೆ ಕೇಂದ್ರ ಸರ್ಕಾರ ಅಂತಿಮ ಅನುಮೋದನೆ ನೀಡಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಪಾದಿಸಿರುವುದು ತೀವ್ರ ಖಂಡನೀಯ" ಎಂದು ಅವರು ಹೇಳಿದರು.

ಈ ಹೇಳಿಕೆಯು ಒಕ್ಕೂಟ ವ್ಯವಸ್ಥೆಯ (ಫೆಡರಲಿಸಂ) ತತ್ವಕ್ಕೆ ವಿರುದ್ಧವಾಗಿದೆ ಮತ್ತು ತಮಿಳುನಾಡಿನ ರೈತರ ಜೀವನೋಪಾಯವನ್ನು ನಾಶಪಡಿಸುವ ಗುರಿಯನ್ನು ಹೊಂದಿದೆ ಎಂದು ಅವರು ಆರೋಪಿಸಿದರು.

ಇದಲ್ಲದೆ, ತಮಿಳುನಾಡಿನಂತಹ ನದಿ ಪಾತ್ರದ ಕೆಳಭಾಗದ ರಾಜ್ಯಗಳೊಂದಿಗೆ ಸಂಪೂರ್ಣ ಸಮಾಲೋಚನೆ ನಡೆಸದೆ ಮತ್ತು ಅವುಗಳ ಒಪ್ಪಿಗೆ ಪಡೆಯದೆ ಮೇಕೆದಾಟು ಅಣೆಕಟ್ಟಿಗೆ ಅನುಮೋದನೆ ನೀಡದಂತೆ ಕೇಂದ್ರ ಸರ್ಕಾರಕ್ಕೆ ಟ್ಯಾಗೋರ್ ಒತ್ತಾಯಿಸಿದರು.

ತಮಿಳುನಾಡು ಸರ್ಕಾರವು ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ಅನುಮತಿಸುವುದಿಲ್ಲ ಸ್ಪಷ್ಟಪಡಿಸಿದ ಅವರು, "ಕಾವೇರಿ ನದಿ ನೀರು ಹಂಚಿಕೆ ವ್ಯವಸ್ಥೆಯಲ್ಲಿ ತಮಿಳುನಾಡು ಕೆಳಹಂತದ ರಾಜ್ಯವಾಗಿರುವುದರಿಂದ, ನಮ್ಮ ಹಕ್ಕುಗಳ ಮೇಲೆ ಪರಿಣಾಮ ಬೀರುವ ಯಾವುದೇ ಯೋಜನೆಯನ್ನು ಕರ್ನಾಟಕವು ಏಕಪಕ್ಷೀಯವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಕೆಳಹಂತದ ರಾಜ್ಯಗಳ ಸಂಪೂರ್ಣ ಒಪ್ಪಿಗೆಯಿಲ್ಲದೆ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಕೇಂದ್ರ ಸರ್ಕಾರವು ಯಾವುದೇ ಅನುಮತಿಯನ್ನು ನೀಡಬಾರದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಔಟ್‌ಲುಕ್ ಸಮಸ್ಯೆ ಬಗೆಹರಿಸಿದ Microsoft, ಜಾಗತಿಕ ವ್ಯತ್ಯಯಕ್ಕೆ ಕೊನೆ; ಗ್ರಾಹಕರಲ್ಲಿ ಕ್ಷಮೆಯಾಚನೆ

'ನಮಗೆ ಪಾಠ ಮಾಡುವ ಮೊದಲು ನಿಮ್ಮ ಪೂರ್ವಗ್ರಹ ಸರಿಪಡಿಸಿಕೊಳ್ಳಿ, ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ': ಅಮೆರಿಕಕ್ಕೆ ಭಾರತ ಖಡಕ್ ತಿರುಗೇಟು!

ಗೋಧ್ರಾ ಹತ್ಯಾಕಾಂಡ ತನಿಖೆ ಬಗ್ಗೆ ಸೋನಿಯಾ ಸಂದೇಹ: ಸಿಬಿಐ ಮಾಜಿ ಅಧಿಕಾರಿ ಹೇಳಿದ್ದೇನು? Video

ತಾಯಿಯ ಅಂತ್ಯಕ್ರಿಯೆಗಾಗಿ ಉಡುಪಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ; ಬಿಗಿ ಪೊಲೀಸ್ ಭದ್ರತೆ

ತಾಯಿಗೆ ಚಾಕುವಿನಿಂದ ಇರಿದು ಶಾಲಾ ವಾಟ್ಸಾಪ್ ಗ್ರೂಪ್‌ಗೆ ಮೆಸೇಜ್; ಬಳಿಕ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ!