ಚೆನ್ನೈ: ತಮಿಳುನಾಡು ಶಾಲಾ ಶಿಕ್ಷಣ ಸಚಿವ ಎ. ರಾಜಮೋಹನ್ ಅವರು ವಿವಾದವೊಂದರಲ್ಲಿ ಸಿಲುಕಿಕೊಂಡಿದ್ದಾರೆ. ಅವರು ಇತ್ತೀಚಿಗೆ ನವದೆಹಲಿಯಲ್ಲಿ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾದಾಗ ಅವರು ಹಾಕಿದ್ದ ವಾಚ್ ನೆಟ್ಟಿಗರ ಗಮನ ಸೆಳೆದಿತ್ತು.
ಈ ಭೇಟಿಯ ಚಿತ್ರಗಳು ವೈರಲ್ ಆಗುತ್ತಿದ್ದಂತೆಯೇ ಸಚಿವರು ಸುಮಾರು 45 ಲಕ್ಷ ರೂ. ಮೌಲ್ಯದ ಐಷಾರಾಮಿ 'ರೋಲೆಕ್ಸ್ ಡೇಟೋನಾ' (Rolex Daytona) ವಾಚ್ ಎಂದು ಕೆಲವು ಸಾಮಾಜಿಕ ಜಾಲತಾಣ ಬಳಕೆದಾರರು ಹೇಳುತ್ತಿದ್ದರು.
ಈ ಬಗ್ಗೆ ತಮ್ಮ 'ಎಕ್ಸ್' (X) ಖಾತೆಯಲ್ಲಿ ಪ್ರತಿಕ್ರಿಯಿಸಿರುವ ರಾಜಮೋಹನ್, ಆ ವಾಚ್ ಬೆಲೆ ಕೇವಲ 5,500 ರೂ. ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಇಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಸಚಿವರು, ವಾಚ್ ಬಗ್ಗೆ ಈಗಾಗಲೇ ಪ್ರತಿಕ್ರಿಯೆ ನೀಡಿದ್ದೇನೆ, ಯಾರಾದರೂ ಬೇಕಿದ್ದರೆ ಅದನ್ನು 5,500 ರೂ.ಗೆ ತೆಗೆದುಕೊಳ್ಳಬಹುದು ಎಂದು ಅವರು ಹೇಳಿದರು.