ರಾಹುಲ್ ಗಾಂಧಿ 
ದೇಶ

ಒಂದೇ ವೇದಿಕೆಯಲ್ಲಿ ಟ್ರಂಪ್–ಕ್ಸಿ–ಪುಟಿನ್: ಭಾರತ ಎಲ್ಲಿ ಎಂದು ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಗುಡುಗು, 'Compromised PM' ಎಂದು ಟೀಕೆ

ಕಾಂಗ್ರೆಸ್ ಅಧಿಕಾರದಲ್ಲಿದ್ದಿದ್ದರೆ ಭಾರತದ ಪ್ರಧಾನಿಯೂ ಈ ಮೇಜಿನ ಬಳಿ ಕುಳಿತಿರುತ್ತಿದ್ದರು. ರಾಜಿ ಮಾಡಿಕೊಂಡಿರುವ ಪ್ರಧಾನಿಯೊಬ್ಬರು ಎಂದಿಗೂ ಈ ಮೇಜಿನ ಬಳಿ ಕುಳಿತುಕೊಳ್ಳಲು ಸಾಧ್ಯವಿಲ್ಲ.

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ಮಹತ್ವದ ತ್ರಿಪಕ್ಷೀಯ ಸಭೆಯಲ್ಲಿ ಭಾರತಕ್ಕೆ ಸ್ಥಾನವಿಲ್ಲದಿರುವುದನ್ನು ಮುಂದಿಟ್ಟುಕೊಂಡು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿಯವರು, ಮೂವರು ನಾಯಕರು ಸಭೆಯಲ್ಲಿ ಭಾಗವಹಿಸಿರುವ ಚಿತ್ರವನ್ನು ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ "ರಾಜಿಯಾದ ಪ್ರಧಾನಿ" (Compromised PM) ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದಿದ್ದರೆ ಭಾರತದ ಪ್ರಧಾನಿಯೂ ಈ ಮೇಜಿನ ಬಳಿ ಕುಳಿತಿರುತ್ತಿದ್ದರು. ರಾಜಿ ಮಾಡಿಕೊಂಡಿರುವ ಪ್ರಧಾನಿಯೊಬ್ಬರು ಎಂದಿಗೂ ಈ ಮೇಜಿನ ಬಳಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಚೀನಾದ ಶೆನ್‌ಜೆನ್‌ನಲ್ಲಿ ನಡೆದ ಅಪೆಕ್ (APEC) ಶೃಂಗಸಭೆಯ ನೇಪಥ್ಯದಲ್ಲಿ ವಿಶ್ವದ ಮೂವರು ಪ್ರಬಲ ನಾಯಕರಾದ ಟ್ರಂಪ್, ಕ್ಸಿ ಮತ್ತು ಪುಟಿನ್ ಮಹತ್ವದ ಸಭೆ ನಡೆಸಿದ್ದಾರೆ.

ಈ ಸಭೆಯಲ್ಲಿ ವಿಶ್ವಸಂಸ್ಥೆಯ ಸುಧಾರಣೆ, ಜಾಗತಿಕ ತೈಲ ಪೂರೈಕೆ ಹೆಚ್ಚಳ ಮತ್ತು ಪರಮಾಣು ಅಪಾಯ ಕಡಿತದಂತಹ ಪ್ರಮುಖ ವಿಷಯಗಳ ಕುರಿತು ಒಪ್ಪಂದಕ್ಕೆ ಬರಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕದನದಲ್ಲಿ ಕರ್ನಾಟಕಕ್ಕೆ ಬಿಗ್ ರಿಲೀಫ್! 11 ಟಿಎಂಸಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಎರಡೂ ಅರ್ಜಿ ಸುಪ್ರೀಂನಲ್ಲಿ ವಜಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಒಂದೆಡೆ ತನಿಖೆ ಬೇಕೆನ್ನುತ್ತೀರಿ, ಈಗ FIR ರದ್ದು ಕೋರುತ್ತಿದ್ದೀರಿ: SIT ತನಿಖೆ ರದ್ದು ಕೋರಿದ್ದ ಗಿರೀಶ್ ಮಟ್ಟಣ್ಣನವರ್‌ ಅರ್ಜಿ ಹೈಕೋರ್ಟ್‌ನಲ್ಲಿ ವಜಾ

'ಅಕ್ವಾನ್ ಚಂಡಮಾರುತ': ಒಡಿಶಾದ ಗೋಪಾಲಪುರ ಸಮೀಪ ಪ್ರವೇಶ ಪ್ರಕ್ರಿಯೆ ಆರಂಭ; 3 ಲಕ್ಷಕ್ಕೂ ಅಧಿಕ ಜನರ ಸ್ಥಳಾಂತರ

35 ವರ್ಷದ ಬಳಿಕ ' ಭಯೋತ್ಪಾದಕರಿಂದ ಕಾಶ್ಮೀರ ಮುಕ್ತ': ಲತೀಫ್ ಭಟ್ ಹತ್ಯೆ ನಂತರ ಅಮಿತ್ ಶಾ ಘೋಷಣೆ

21,900 ಕೋಟಿ ರೂ.ಅಭಿವೃದ್ಧಿ ಯೋಜನೆಗಳಿಗೆ ಸಂಪುಟ ಸಮ್ಮತಿ; ಬೆಂಗಳೂರಿನ 88 ರಸ್ತೆಗಳಿಗೆ ವೈಟ್ ಟಾಪಿಂಗ್ ಭಾಗ್ಯ, ಸಾಲಗಾರರಿಗೆ ಬಿಗ್ ರಿಲೀಫ್..!