ಅಪಘಾತಕ್ಕೀಡಾಗಿರುವ ವಾಹನಗಳು. 
ದೇಶ

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ, ಒಂದೇ ಕುಟುಂಬದ 9 ಮಂದಿ ದುರ್ಮರಣ..!

ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ 15 ಮಂದಿ ವಾಹನದಲ್ಲಿದ್ದರು. ರಾಜಸ್ಥಾನದ ಖಾಟು ಶ್ಯಾಮ್‌ಜಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕೋಟಾ: ರಾಜಸ್ಥಾನದ ಕೋಟಾ-ಉದಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ಶಂಭುಪುರ ಗ್ರಾಮದ ಸಮೀಪ ರಾತ್ರಿ ಸುಮಾರು 2 ಗಂಟೆಗೆ ವೇಗವಾಗಿ ಬಂದ ಕ್ರೂಸರ್ ವಾಹನ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ 15 ಮಂದಿ ವಾಹನದಲ್ಲಿದ್ದರು. ರಾಜಸ್ಥಾನದ ಖಾಟು ಶ್ಯಾಮ್‌ಜಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಚಾಲಕ ನಿದ್ರೆಗೆ ಜಾರಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಅಪಘಾತದಲ್ಲಿ ಉಷಾ ಬಾಯಿ, ಸುಶೀಲಾ, ಕೈಲಾಶ್, ಸಾನ್ವಿ, ಸಜ್ಜನ್, ಅನಿತಾ, ಬಾಬುಲಾಲ್, ಜಾಹ್ನವಿ ಮತ್ತು ಮಾಧವಿ ಮೃತಪಟ್ಟಿದ್ದಾರೆ.

ಗಾಯಗೊಂಡ ಆರು ಮಂದಿಯನ್ನು ಆಂಬ್ಯುಲೆನ್ಸ್ ಮೂಲಕ ನ್ಯೂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ನಗರ ಪೊಲೀಸ್ ವರಿಷ್ಠಾಧಿಕಾರಿ ತೇಜಸ್ವಿನಿ ಗೌತಮ್ ಸ್ಥಳಕ್ಕೆ ಧಾವಿಸಿದರು. ಪೊಲೀಸರು ಹಾಗೂ ರಕ್ಷಣಾ ತಂಡಗಳು ವಾಹನದೊಳಗೆ ಸಿಲುಕಿದ್ದವರನ್ನು ಹೊರತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸುವ ಕಾರ್ಯಾಚರಣೆ ನಡೆಸಿದವು.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ವೈದ್ಯಕೀಯ ತಂಡವನ್ನೂ ನಿಯೋಜಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಏತನ್ಮಧ್ಯೆ ಹೆಚ್ಚುವರಿ ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಮತ್ತು ಆಡಳಿತದ ಅಧಿಕಾರಿಗಳು ಅಪಘಾತ ಸ್ಥಳ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಒಂಬತ್ತು ಮಂದಿ ಮೃತಪಟ್ಟಿರುವುದನ್ನು ದೃಢಪಡಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ರಾಜೇಶ್ ಜೋಶಿ, ಈ ಘಟನೆ ಅತ್ಯಂತ ದುಃಖಕರ ಮತ್ತು ನೋವಿನ ಸಂಗತಿ ಎಂದು ತಿಳಿಸಿದ್ದಾರೆ.

ಖಾಟು ಶ್ಯಾಮ್ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾರಾಷ್ಟ್ರಕ್ಕೆ ವಾಪಸ್ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಒಂದೇ ಕುಟುಂಬದವರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಿ ಅವರು ಚೇತರಿಸಿಕೊಳ್ಳುವಂತೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಈ ನಡುವೆ ಅಪಘಾತದಲ್ಲಿ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Bharat Jodo Yojana ಲಾಭ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಸೀಮಿತ; BJP-JDSಗೆ ನಿರ್ಬಂಧ: ಅಶೋಕ್ ಆರೋಪ

ಅಮೆರಿಕದಲ್ಲಿದ್ದೇನೆ ಎಂದು ಬಿಂಬಿಸಲು ಯತ್ನಿಸಿದ್ದ ರವಿ ಹಂಜ್; ನೋಟಿಸ್ ಜಾರಿ, ರಾಯಭಾರ ಕಚೇರಿಗೂ ಮಾಹಿತಿ: ಖರ್ಗೆ

BJP OBC ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ನೇಮಕ

ಸುಪ್ರೀಂ ಕೋರ್ಟ್ ಜಡ್ಜ್ ಎಂದು ಭಾವಿಸಿ ಓವೈಸಿಗೆ 'ಗಾರ್ಡ್ ಆಫ್ ಆನರ್': UP ಪೊಲೀಸರ ವಿರುದ್ಧ ತನಿಖೆಗೆ ಆದೇಶ! Video

CM ಅಧಿಕೃತ ನಿವಾಸ 'ಗಂಗಾ' ನವೀಕರಣಕ್ಕೆ ₹100 ಕೋಟಿ ಖರ್ಚು!: ವಿಜಯೇಂದ್ರ ಆರೋಪಕ್ಕೆ ಡಿಕೆಶಿ ಹೇಳಿದ್ದೇನು?