ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಅಮರ್‌ಪಾಲ್ ಮೌರ್ಯ ಮತ್ತು ಯುಜ್ವೇಂದ್ರ ಚಾಹಲ್  X
ದೇಶ

ಕ್ರಿಕೆಟ್ ಮೈದಾನದಿಂದ ರಾಜಕೀಯ ಅಖಾಡಕ್ಕೆ ಚತುರ್ ಚಾಹಲ್: ಬಿಜೆಪಿ ಒಬಿಸಿ ಮೋರ್ಚಾದಲ್ಲಿ ಸ್ಪಿನ್ ಮಾಂತ್ರಿಕ ಯುಜುವೇಂದ್ರ ಚಾಹಲ್‌ಗೆ ಹೊಸ ಜವಾಬ್ದಾರಿ

ಭಾರತೀಯ ಕ್ರಿಕೆಟ್ ತಂಡದ ಖ್ಯಾತ ಲೆಗ್-ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದರೊಂದಿಗೆ, ಅವರನ್ನು ಪಕ್ಷದ ರಾಷ್ಟ್ರೀಯ ಒಬಿಸಿ ಮೋರ್ಚಾದ ಕಾರ್ಯಕಾರಿ ಸಮಿತಿಗೆ ವಿಶೇಷ ಆಹ್ವಾನಿತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ನವದೆಹಲಿ: ಭಾರತ ತಂಡದ ಖ್ಯಾತ ಸ್ಪಿನ್ ಬೌಲರ್ ಯುಜ್ವೇಂದ್ರ ಚಾಹಲ್ ಅವರು ಕ್ರಿಕೆಟ್ ಮೈದಾನದ ಬಳಿಕ ಈಗ ರಾಜಕೀಯ ಅಖಾಡಕ್ಕೂ ಅಧಿಕೃತವಾಗಿ ಪ್ರವೇಶಿಸಿದ್ದಾರೆ. ಹೌದು, ಕ್ರೀಡಾಂಗಣದಲ್ಲಿ ತಮ್ಮ ಬುದ್ಧಿವಂತಿಕೆಯ ಬೌಲಿಂಗ್ ತಂತ್ರಗಳಿಂದಾಗಿ ಚತುರ್ ಚಾಹಲ್ ಎಂದೇ ಖ್ಯಾತರಾಗಿರುವ ಯುಜುವೇಂದ್ರ ಚಾಹಲ್, ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗುವ ಮೂಲಕ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಒಬಿಸಿ ಮೋರ್ಚಾದಲ್ಲಿ ಹೊಸ ಪಾತ್ರ

ಕ್ರಿಕೆಟ್ ಮೈದಾನದಲ್ಲಿ ಬ್ಯಾಟರ್‌ಗಳನ್ನು ಕಂಗೆಡಿಸುತ್ತಿದ್ದ ಯುಜುವೇಂದ್ರ ಚಾಹಲ್ ಅವರು ಬಿಜೆಪಿಯ ಒಬಿಸಿ ಮೋರ್ಚಾವನ್ನು ಸೇರಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ನಿರ್ದೇಶನದ ಮೇರೆಗೆ ಪ್ರಕಟಿಸಲಾದ ಒಬಿಸಿ ಮೋರ್ಚಾದ ಪರಿಷ್ಕೃತ ರಾಷ್ಟ್ರೀಯ ಕಾರ್ಯಕಾರಿಣಿ ಪಟ್ಟಿಯಲ್ಲಿ ಚಾಹಲ್ ಅವರನ್ನು ದೆಹಲಿ ವಿಭಾಗದ ಪ್ರತಿನಿಧಿಯಾಗಿ ವಿಶೇಷ ಆಹ್ವಾನಿತರನ್ನಾಗಿ ನೇಮಿಸಲಾಗಿದೆ. ಏತನ್ಮಧ್ಯೆ, ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಅಮರ್‌ಪಾಲ್ ಮೌರ್ಯ ಅವರನ್ನು ಭೇಟಿಯಾದ ಬಳಿಕ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಚಾಹಲ್, ತಮಗೆ ಈ ಸ್ಥಾನಮಾನ ಮತ್ತು ಗೌರವ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಅಮರ್‌ಪಾಲ್ ಮೌರ್ಯ ಅವರಿಗೆ ಚಾಹಲ್ ಸಾಮಾಜಿಕ ಜಾಲತಾಣದಲ್ಲಿ ಧನ್ಯವಾದ ಅರ್ಪಿಸಿದ್ದಾರೆ.

ಮುಂದುವರೆದು, ಚಾಹಲ್ ಅವರೊಂದಿಗೆ ಒಡಿಶಾದ ಪ್ರೊಫೆಸರ್ ಅದ್ವೈತ್ ಚರಣ್ ಗಣನಾಯಕ್ ಮತ್ತು ಉತ್ತರ ಪ್ರದೇಶದ ವಕೀಲೆ ಸೀಮಾ ಸಮೃದ್ಧಿ ಕುಶ್ವಾಹ ಅವರನ್ನೂ ವಿಶೇಷ ಆಹ್ವಾನಿತರಾಗಿ ನೇಮಿಸಲಾಗಿದೆ. ಇದೇ ವೇಳೆ ಉಡುಪಿಯ ಪ್ರಮೋದ್ ಮಧ್ವರಾಜ್ ಅವರಿಗೆ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿಯನ್ನು ನೀಡಲಾಗಿದೆ. ಅದರಲ್ಲೂ, ಮುಂಬರುವ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಒಬಿಸಿ ಮೋರ್ಚಾಕ್ಕೆ 37 ಕಾರ್ಯಕಾರಿ ಸದಸ್ಯರು, 7 ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಕ್ರಿಕೆಟ್ ಭವಿಷ್ಯವೇನು?

ಈ ರಾಜಕೀಯ ಜವಾಬ್ದಾರಿಯು ಮುಂದಿನ ದಿನಗಳಲ್ಲಿ ಅವರ ಕ್ರಿಕೆಟ್ ಪಂದ್ಯಗಳ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 19ನೇ ವಯಸ್ಸಿನಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಕಾಲಿಟ್ಟ ಚಾಹಲ್ 2016ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದರು. 2024ರ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಅವರು ಟಿ20 ಕ್ರಿಕೆಟ್‌ನಲ್ಲಿ 400 ವಿಕೆಟ್ ಪಡೆದ ಮೊದಲ ಭಾರತೀಯ ಎನಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರೂ, ಏಕದಿನ ಮತ್ತು ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಆಡುವ ಆಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ, ಒಂದೇ ಕುಟುಂಬದ 9 ಮಂದಿ ದುರ್ಮರಣ..!

ಹಿರಿಯೂರು ಉಪಚುನಾವಣೆಗೆ ರಣಕಹಳೆ: ದಿನಾಂಕ ಘೋಷಣೆಗೂ ಮುನ್ನವೇ ರಂಗೇರಿದ ಅಖಾಡ ರಂಗು; ಅನುಕಂಪದ ಅಲೆ v/s ಮೈತ್ರಿ ಬಲ, ಯಾರ ಪಾಲಾಗಲಿದೆ ಕ್ಷೇತ್ರ..?

ಹಿರಿಯೂರು ಬೈಎಲೆಕ್ಷನ್: ಮೈತ್ರಿ ಪಕ್ಷಗಳಿಗೆ ಮೊದಲ ಪರೀಕ್ಷೆ; ಅಭ್ಯರ್ಥಿ ಆಯ್ಕೆ ಅಮಿತ್ ಶಾ ಕೈಯಲ್ಲಿ, ಯಾರಿಗೆ ಒಲಿಯಲಿದೆ ಟಿಕೆಟ್?

ಅಣ್ಣನ ಮನವಿಗೂ ಜಗ್ಗದ ಆಶಾ ಕಾರ್ಯಕರ್ತೆಯರು: 6ನೇ ದಿನಕ್ಕೆ ಕಾಲಿಟ್ಟ ಧರಣಿ, ಮಾತುಕತೆ ವಿಫಲ ಬೆನ್ನಲ್ಲೇ ಸೋಮವಾರದಿಂದ ಹೋರಾಟ ತೀವ್ರ!

ನನಗೆ ಹಿರಿಯೂರು ಕೂಡ ಕನಕಪುರವಿದ್ದಂತೆ: ಗೆಲುವಿಗೆ ಮಾಸ್ಟರ್ ಪ್ಲ್ಯಾನ್; ₹2,000 ಕೋಟಿಗೂ ಅಧಿಕ ಅನುದಾನದ ದಾಳ ಉರುಳಿಸಿದ ಡಿಕೆಶಿ..!