ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

'ಹೇಡಿ ಮೋದಿ ಸರ್ಕಾರ': ಬ್ರಿಟನ್‌ಗೆ ಪ್ರಯಾಣಿಸದಂತೆ ದೆಹಲಿ ವಿಮಾನ ನಿಲ್ದಾಣದಲ್ಲಿ ನನ್ನನ್ನು ತಡೆಯಲಾಗಿದೆ; CJP ಸೌರವ್ ದಾಸ್ ಆರೋಪ; Video

'ಕಾಕ್ರೋಚ್ ಮೂವ್‌ಮೆಂಟ್' ಕುರಿತು ಬ್ರಿಟನ್‌ನ ಹಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಉಪನ್ಯಾಸ ನೀಡಲು ಸೌರವ್ ದಾಸ್ ತೆರಳಬೇಕಿತ್ತು.

ಸೌರವ್ ದಾಸ್
Sumana Upadhyaya
Updated On : 24 Nov 2026, 8:34 am

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಸಹ ಸಂಚಾಲಕ ಸೌರವ್ ದಾಸ್ ನಿನ್ನೆ ಸೋಮವಾರ ರಾತ್ರಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ತಡೆದು, ಬ್ರಿಟನ್‌ಗೆ ತೆರಳುವ ವಿಮಾನ ಹತ್ತಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ್ದಾರೆ.

'ಕಾಕ್ರೋಚ್ ಮೂವ್‌ಮೆಂಟ್' ಕುರಿತು ಬ್ರಿಟನ್‌ನ ಹಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಉಪನ್ಯಾಸ ನೀಡಲು ಸೌರವ್ ದಾಸ್ ತೆರಳಬೇಕಿತ್ತು.

ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಮಾಡಿರುವ ಸೌರವ್ ದಾಸ್, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ, ಕೇಂಬ್ರಿಡ್ಜ್ ವಿಶ್ವವಿದ್ಯಾಲಯ, ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಎಡಿನ್‌ಬರ್ಗ್ ವಿಶ್ವವಿದ್ಯಾಲಯ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ತಾವು ಮಾತನಾಡಲು ಉತ್ಸುಕತೆಯಿಂದ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು, ಅದಕ್ಕೆ ತಡೆಹಿಡಿಯಲಾಗಿದೆ ಎಂದರು.

Advertisement

Advertisement

ಮಧ್ಯರಾತ್ರಿ 1 ಗಂಟೆಗೆ ಲಂಡನ್‌ಗೆ ಹೊರಡಬೇಕಿದ್ದ ವಿಮಾನ ಹತ್ತಲು ವಲಸೆ ವಿಭಾಗದ ಅಧಿಕಾರಿಗಳು ಅವಕಾಶ ನೀಡಲಿಲ್ಲ. ತಮ್ಮ ಪಾಸ್‌ಪೋರ್ಟ್ ವಿವರಗಳನ್ನು ಮುಂಚಿತವಾಗಿಯೇ ತಿಳಿಸಿದ್ದರೂ, ವಿಮಾನ ಹತ್ತಲು ನಿರಾಕರಿಸಲಾಯಿತು ಎಂದು ಅವರು ಆರೋಪಿಸಿದ್ದಾರೆ.

ತಮ್ಮನ್ನು ತಡೆದಿರುವುದಕ್ಕೆ 'ಬೌದ್ಧಿಕ ಚಿಂತನೆ ವಿರೋಧಿ' ಸರ್ಕಾರವೇ ಕಾರಣ ಎಂದು ಆರೋಪಿಸಿರುವ ದಾಸ್, ಈ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ತಾವು ಮಾತನಾಡುವುದಕ್ಕೆ ಸರ್ಕಾರ ಹೆದರುತ್ತಿದೆ ಎಂದು ದೂರಿದ್ದಾರೆ.

ವಿಮಾನ ನಿಲ್ದಾಣದ ಆವರಣದಿಂದ ಕಿರು ವಿಡಿಯೋವೊಂದನ್ನೂ ಬಿಡುಗಡೆ ಮಾಡಿರುವ ಸೌರವ್ ದಾಸ್, ಅದರಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಿನ್ನೆ ರಾತ್ರಿ ನಡೆದ ಘಟನೆಯ ಬಗ್ಗೆ ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಪೊಲೀಸರಿಂದ ಅಧಿಕೃತ ಸ್ಪಷ್ಟನೆ ಇನ್ನೂ ದೊರೆತಿಲ್ಲ. ಎರಡು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಸೌರವ್ ದಾಸ್ ವಿಮಾನ ನಿಲ್ದಾಣದಲ್ಲಿ ತಡೆಗೊಳಗಾಗಿರುವುದು ಇದು ಎರಡನೇ ಬಾರಿ. ಅಕ್ಟೋಬರ್ 10ರಂದು ಮುಂಬೈನಿಂದ ದೆಹಲಿಗೆ ಬಂದಿಳಿದ ಬಳಿಕ ಸಿಜೆಪಿ ನಾಯಕರಾದ ಅಭಿನೀತ್ ದೀಪ್ಕೆ ಮತ್ತು ಆಶುತೋಷ್ ರಂಕಾ ಅವರೊಂದಿಗೆ ಸೌರವ್ ದಾಸ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಅವರು ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement