ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ದೀಪ ಬೆಳಗದ ವಿಚಾರ: ಸುಪ್ರೀಂ ಕೋರ್ಟ್‌ಗೆ ವಿಜಯ್ ಸರ್ಕಾರ ಬೇಷರತ್ ಕ್ಷಮೆಯಾಚನೆ

ಮಧುರೈ ಜಿಲ್ಲೆಯ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ವಿವಾದಿತ ದೀಪತೂಣ್ ಬಳಿ ಕಾರ್ತಿಕ ದೀಪ ಬೆಳಗಿಸಲು ಸಾಧ್ಯವಾಗದ ಕಾರಣಕ್ಕಾಗಿ ತಮಿಳುನಾಡು ಸರ್ಕಾರ ಮತ್ತು ಮಧುರೈ ಜಿಲ್ಲಾಧಿಕಾರಿ ಸುಪ್ರೀಂ ಕೋರ್ಟ್‌ಗೆ ಕ್ಷಮೆಯಾಚಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ದೀಪ ಬೆಳಗದ ವೈಫಲ್ಯಕ್ಕೆ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಸರ್ಕಾರದ ಕ್ಷಮೆ
Hruthin H P
Updated On : 25 Nov 2026, 3:06 pm

ನವದೆಹಲಿ: ಮಧುರೈನ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ವಿವಾದಿತ ದೀಪತೂಣ್‌ನಲ್ಲಿ ಕಾರ್ತಿಕ ದೀಪ ಹಚ್ಚಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದರೂ, ನವೆಂಬರ್ 24ರಂದು ಅಲ್ಲಿ ದೀಪ ಬೆಳಗಲಾಗಿಲ್ಲ. ಈ ವೈಫಲ್ಯಕ್ಕೆ ದೇವಸ್ಥಾನದ ಆಡಳಿತ ಮಂಡಳಿಯೇ ಕಾರಣ ಎಂದು ದೂರಿರುವ ತಮಿಳುನಾಡು ಸರ್ಕಾರದ ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಕ್ಷಮೆಯಾಚಿಸಿದ್ದಾರೆ. ಬೆಟ್ಟದ ಮೇಲಿನ ದೀಪತೂಣ್ ಬದಲು ಉಚ್ಚಿ ಪಿಳ್ಳೈಯಾರ್ ದೇವಸ್ಥಾನದ ಬಳಿಯ ಸಾಂಪ್ರದಾಯಿಕ ಸ್ಥಳದಲ್ಲಿ ದೀಪ ಬೆಳಗಿರುವುದು ಇದೀಗ ಭಾರಿ ವಿವಾದ ಮತ್ತು ಪ್ರತಿಭಟನೆಗಳಿಗೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ದೀಪ ಬೆಳಗಲು ವಿಫಲವಾದದ್ದು ಏಕೆ?

ಕಾರ್ತಿಕ ದೀಪೋತ್ಸವದ ಅಂಗವಾಗಿ ನವೆಂಬರ್ 24, 2026 ರಂದು ಒಂದು ಬಾರಿಯ ಕ್ರಮವಾಗಿ ದೀಪತೂಣ್ ಬಳಿ ಸಾಂಪ್ರದಾಯಿಕ ದೀಪ ಬೆಳಗಿಸಲು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠವು ಅನುಮತಿ ನೀಡಿತ್ತು. ದೇವಸ್ಥಾನದ ಆಡಳಿತ ಮಂಡಳಿಯಿಂದ ಅಧಿಕೃತಗೊಂಡ ಸಣ್ಣ ತಂಡ ಮಾತ್ರ ಈ ಕಾರ್ಯ ನಡೆಸಬೇಕೆಂದು ನ್ಯಾಯಾಲಯ ನಿರ್ದೇಶಿಸಿತ್ತು.

Advertisement

Advertisement

ಆದ್ರೆ, ನವೆಂಬರ್ 24 ರಂದು ಸಂಜೆ ದೀಪತೂಣ್ ಬಳಿ ದೀಪ ಬೆಳಗಲಿಲ್ಲ; ಬದಲಿಗೆ, ಸಂಪ್ರದಾಯದಂತೆ ಉಚ್ಚಿಪಿಳ್ಳೈಯಾರ್ ದೇವಸ್ಥಾನದ ಬಳಿಯ ದೀಪ ಮಂಟಪದಲ್ಲಿ ಮಾತ್ರ ಮಹಾದೀಪವನ್ನು ಬೆಳಗಿಸಲಾಯಿತು. ದೀಪತೂಣ್ ಬಳಿ ದೀಪ ಬೆಳಗುವುದು ತಲೆಮಾರುಗಳಿಂದ ನಡೆದುಕೊಂಡು ಬಂದಿರುವ ಆಗಮ ಮತ್ತು ದೇವಸ್ಥಾನದ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿ, ದೇವಸ್ಥಾನದ ಟ್ರಸ್ಟಿಗಳ ಮಂಡಳಿಯು ತಂಡಕ್ಕೆ ಅನುಮತಿ ನೀಡಲು ನಿರಾಕರಿಸಿತು ಎನ್ನಲಾಗಿದೆ.

Also Read

ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಮುಂದುವರೆದು, ಮಧುರೈ ಜಿಲ್ಲಾಧಿಕಾರಿ ನಿಶಾಂತ್ ಕೃಷ್ಣ ಅವರು ಸುಪ್ರೀಂ ಕೋರ್ಟ್‌ಗೆ ಸ್ಥಿತಿಗತಿ ವರದಿ ಸಲ್ಲಿಸಿ ಬೇಷರತ್ ಕ್ಷಮೆಯಾಚಿಸಿದ್ದಾರೆ. ಜಿಲ್ಲಾಡಳಿತವು ಭದ್ರತೆ ಮತ್ತು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದರೂ, ದೇವಸ್ಥಾನದ ಆಡಳಿತ ಮಂಡಳಿಯ ನಿರ್ಣಯದಿಂದಾಗಿ ದೀಪ ಬೆಳಗಲು ಸಾಧ್ಯವಾಗಲಿಲ್ಲ ಹಾಗೂ ಇದರಲ್ಲಿ ಉದ್ದೇಶಪೂರ್ವಕ ನ್ಯಾಯಾಂಗ ನಿಂದನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಏತನ್ಮಧ್ಯೆ, ನ್ಯಾಯಾಲಯದ ಆದೇಶವನ್ನು ಪಾಲಿಸದ ಸರ್ಕಾರದ ವಿರುದ್ಧ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆದರೆ, ಅರ್ಜಿದಾರರು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅದನ್ನು ವಿಚಾರಣೆಗೆ ಪರಿಗಣಿಸುವುದಾಗಿ ತಿಳಿಸಿದೆ.

ಏನಿದು ವಿವಾದ?

ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ದೀಪತೂಣ್ ಕಂಬವು ಹಜರತ್ ಸುಲ್ತಾನ್ ಸಿಕಂದರ್ ಬಾದುಷಾ ಔಲಿಯಾ ದರ್ಗಾದ ಸಮೀಪದಲ್ಲಿದೆ. ಈ ಕಂಬದ ಮೇಲೆ ದೀಪ ಬೆಳಗಲು ಹಿಂದೂ ಸಂಘಟನೆಗಳು ಒತ್ತಾಯಿಸುತ್ತಿದ್ದರೆ, ಅದು ಬ್ರಿಟಿಷರ ಕಾಲದ ಸರ್ವೇ ಕಲ್ಲಾಗಿದ್ದು ಅಲ್ಲಿ ದೀಪ ಬೆಳಗುವ ಸಂಪ್ರದಾಯವಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ವಾದಿಸುತ್ತಿದೆ. ಈ ಘಟನೆಯ ನಂತರ ತಮಿಳುನಾಡಿನಾದ್ಯಂತ ಹಲವೆಡೆ ಪ್ರತಿಭಟನೆಗಳು ನಡೆದಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement