ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

Delimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ: 2051ರವರೆಗೆ ಕ್ಷೇತ್ರ ಪುನರ್‌ವಿಂಗಡಣೆ ಸ್ಥಗಿತ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ!

ದಕ್ಷಿಣ ಭಾರತದ ರಾಜ್ಯಗಳ ಆತಂಕವನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟವು ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ಪರಿಷ್ಕೃತ ಸಂವಿಧಾನ ತಿದ್ದುಪಡಿ ಮಸೂದೆಗೆ ಇಂದು ಅನುಮೋದನೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಪ್ರಧಾನಿ ನರೇಂದ್ರ ಮೋದಿ ಸಂಪುಟ — Online Desk
Hruthin H P
Updated On : 27 Nov 2026, 3:23 pm

ನವದೆಹಲಿ: ದಕ್ಷಿಣ ಭಾರತದ ರಾಜ್ಯಗಳ ತೀವ್ರ ವಿರೋಧ ಮತ್ತು ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯ ಪ್ರಮುಖ ಬದಲಾವಣೆಗಳಿಗೆ ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಇದರ ಪ್ರಕಾರ, ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಏಕರೂಪವಾಗಿ ಶೇ. 50ರಷ್ಟು ಹೆಚ್ಚಿಸಲಾಗುವುದು ಮತ್ತು ರಾಜ್ಯವಾರು ಸ್ಥಾನಗಳ ಹಂಚಿಕೆಯ ಅನುಪಾತವನ್ನು ಮುಂದಿನ 25 ವರ್ಷಗಳ ಕಾಲ ಅಂದರೆ 2051ರವರೆಗೆ ಸ್ಥಗಿತಗೊಳಿಸಲಾಗುವುದು. ಆ ಕುರಿತ ವರದಿ ಇಲ್ಲಿದೆ:

ಸಂಪುಟ ಅನುಮೋದಿಸಿದ ಪ್ರಮುಖ ತಿದ್ದುಪಡಿಗಳು:

ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಕೈಗೊಂಡಿರುವ ಈ ಮಹತ್ವದ ನಿರ್ಧಾರದ ಪ್ರಮುಖ ಅಂಶಗಳು:

Advertisement

Advertisement

Also Read

Delimitation Bill: ಸಂಸತ್ತಿನಲ್ಲಿ ಶುರುವಾಯ್ತು ಮತಗಳ ಗಣಿತ! ಕಳೆದ ಬಾರಿ ಬಿದ್ದುಹೋಗಿದ್ದ ಮಸೂದೆ ಈ ಬಾರಿ ಪಾಸ್ ಆಗುತ್ತಾ? ಇಲ್ಲಿದೆ ಸದನದ ಇಂಚಿಂಚು ಲೆಕ್ಕಾಚಾರ

ಏತನ್ಮಧ್ಯೆ, ನವೆಂಬರ್ 30ರಂದು ಲೋಕಸಭೆ ಮತ್ತು ಡಿಸೆಂಬರ್ 2ರಂದು ರಾಜ್ಯಸಭೆಯ ವಿಶೇಷ ಕಲಾಪ ನಡೆಯಲಿದ್ದು, ಈ ತಿದ್ದುಪಡಿ ಮಸೂದೆ ಹಾಗೂ ಶೇ. 33ರಷ್ಟು ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ಮಸೂದೆಯನ್ನು ಸರ್ಕಾರ ಮಂಡಿಸಲಿದೆ. ಅತ್ತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ (ನವೆಂಬರ್ 28) ವಿಪಕ್ಷ ನಾಯಕರ ಸಭೆ ಕರೆದು ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement