ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

Delimitation Bill: ಕ್ಷೇತ್ರ ಮರುವಿಂಗಡಣೆಯಿಂದ SC/ST ಸಮುದಾಯಕ್ಕೆ ಅನ್ಯಾಯ ಎಂದ ಖರ್ಗೆ: ಕೇಂದ್ರದ ಮುಂದೆ 3 ಬೇಡಿಕೆ ಇಟ್ಟ ಇಂಡಿಯಾ ಬ್ಲಾಕ್!

ಕೇಂದ್ರ ಸರ್ಕಾರ ಮಂಡಿಸಲಿರುವ ಕ್ಷೇತ್ರ ಮರುವಿಂಗಡಣೆ ಸಂವಿಧಾನ ತಿದ್ದುಪಡಿ ಮಸೂದೆಯು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳಿಗೆ (ST) ಗಂಭೀರ ಅನ್ಯಾಯ ಮಾಡಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ
Hruthin H P
Updated On : 28 Nov 2026, 3:05 pm

ನವದೆಹಲಿ: ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಂಡಿಸಲು ಸಿದ್ಧತೆ ನಡೆಸಿರುವ ಕ್ಷೇತ್ರ ಪುನರ್ವಿಂಗಡಣೆ (Delimitation) ಮತ್ತು ಮಹಿಳಾ ಮೀಸಲಾತಿ ಸಂಬಂಧಿತ ಸಂವಿಧಾನ ತಿದ್ದುಪಡಿ ಮಸೂದೆಗಳಿಗೆ ವಿರೋಧ ಪಕ್ಷಗಳ ಒಕ್ಕೂಟವಾದ ಇಂಡಿಯಾ ಬ್ಲಾಕ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕೇಂದ್ರದ ಮುಂದೆ 3 ಪ್ರಮುಖ ಬೇಡಿಕೆಗಳನ್ನು ಇಟ್ಟಿದೆ. ನವದೆಹಲಿಯಲ್ಲಿರುವ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಕ್ಷೇತ್ರ ಮರುವಿಂಗಡಣೆ ಸಂವಿಧಾನ ತಿದ್ದುಪಡಿ ಮಸೂದೆಯು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳಿಗೆ (ST) ಗಂಭೀರ ಅನ್ಯಾಯ ಮಾಡಲಿದೆ ಎಂದು ಖರ್ಗೆ ಆರೋಪಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಇಂಡಿಯಾ ಬ್ಲಾಕ್ ಇಟ್ಟಿರುವ 3 ಪ್ರಮುಖ ಬೇಡಿಕೆಗಳೇನು?

Advertisement

Advertisement

Also Read

ಸ್ಟಾಲಿನ್ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ: ಕ್ಷೇತ್ರ ಮರುವಿಂಗಡಣೆ ಮಸೂದೆಗೆ DMK ಬೆಂಬಲ; ಎ. ರಾಜಾ ಘೋಷಣೆ

SC/ST ಸಮುದಾಯಕ್ಕೆ ಅನ್ಯಾಯ

2026ರ ಜನಗಣತಿ ಇನ್ನೂ ನಡೆಯಬೇಕಿದ್ದು, ಇತ್ತೀಚಿನ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ನಡೆದರೆ SC/ST ಜನಸಂಖ್ಯೆ ಹೆಚ್ಚಿರುವ ಕಡೆ ಅವರಿಗೆ ಹೆಚ್ಚಿನ ಸ್ಥಾನಗಳು ಸಿಗುತ್ತವೆ; ಆದರೆ ಸರ್ಕಾರ ಇದನ್ನು ಕಡೆಗಣಿಸಿ ತನಗೆ ಅನುಕೂಲವಾಗುವಂತೆ ತಿದ್ದುಪಡಿ ತರುತ್ತಿದೆ ಎಂದು ಆರೋಪಿಸಿದ ಖರ್ಗೆ, ಸಂವಿಧಾನದ 330ನೇ ವಿಧಿಯ ಪ್ರಕಾರ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಜನಸಂಖ್ಯೆಗೆ ಅನುಗುಣವಾಗಿ ಮೀಸಲು ಕ್ಷೇತ್ರಗಳನ್ನು ಹೆಚ್ಚಿಸುವ ಪ್ರಸ್ತಾಪ ಮಸೂದೆಯಲ್ಲಿಲ್ಲ ಎಂದು ದೂರಿದ್ದಾರೆ.

ಮತ್ತೊಂದೆಡೆ, ಇಂಡಿಯಾ ಬ್ಲಾಕ್‌ನ ಪ್ರಮುಖ ಮಿತ್ರಪಕ್ಷಗಳಾಗಿದ್ದ ತಮಿಳುನಾಡಿನ ಡಿಎಂಕೆ (DMK) ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ (NCP-SP) ಈ ಪರಿಷ್ಕೃತ ಮಸೂದೆಗೆ ಬೆಂಬಲ ಸೂಚಿಸಿವೆ. ಎಲ್ಲಾ ರಾಜ್ಯಗಳಲ್ಲಿ ಏಕರೂಪವಾಗಿ ಶೇ. 50ರಷ್ಟು ಸ್ಥಾನ ಹೆಚ್ಚಳವಾಗುವುದರಿಂದ ತಮಿಳುನಾಡಿನ ಶೇ. 7.18ರಷ್ಟು ಪಾಲಿಗೆ ಧಕ್ಕೆಯಾಗುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ. ಆದರೆ, ಈ ಬೆಂಬಲಕ್ಕೆ ಕಾಂಗ್ರೆಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement