ಸೌರವ್ ದಾಸ್, ಅಭಿಜೀತ್ ಡಿಪ್ಕೆ ಮತ್ತಿತರರು 
ದೇಶ

ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಪ್ರತಿಭಟನೆ: 'ಹೈಕೋರ್ಟ್ ಆದೇಶ ಉಲ್ಲಂಘನೆ', ಅಭಿಜೀತ್ ಡಿಪ್ಕೆ, ಇತರ ಮೂವರ ವಿರುದ್ಧ ದೂರು ದಾಖಲು!

ಶಿವಾಜಿ ಪಾರ್ಕ್ ಬಳಿ ಪ್ರತಿಭಟನೆಯು ಬಾಂಬೆ ಹೈಕೋರ್ಟ್‌ನ ಜನವರಿ 4, 2013ರ ತೀರ್ಪು (ಪಿಐಎಲ್ 116/2009) ಹಾಗೂ ಮಹಾರಾಷ್ಟ್ರ ಸರ್ಕಾರದ ಆದೇಶಗಳ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮುಂಬೈ: ವಾಣಿಜ್ಯ ನಗರಿ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಪೊಲೀಸರ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಲು ಮತ್ತು ಅಪಾರ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಯತ್ನಿಸಿದ ಆರೋಪದ ಮೇಲೆ ಅಭಿಜೀತ್ ಡಿಪ್ಕೆ, ಸೌರವ್ ದಾಸ್, ಅಶುತೋಷ್ ರಂಕಾ ಮತ್ತು ರತ್ನಾ ಸಿಂಗ್ ಅವರ ವಿರುದ್ಧ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಶಿವಾಜಿ ಪಾರ್ಕ್ ಬಳಿ ಪ್ರತಿಭಟನೆಯು ಬಾಂಬೆ ಹೈಕೋರ್ಟ್‌ನ ಜನವರಿ 4, 2013ರ ತೀರ್ಪು (ಪಿಐಎಲ್ 116/2009) ಹಾಗೂ ಮಹಾರಾಷ್ಟ್ರ ಸರ್ಕಾರದ ಆದೇಶಗಳ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಉದ್ದೇಶಿತ ಸಭೆಯನ್ನು "ಶಾಂತಿಯುತ ಪ್ರತಿಭಟನೆ" ಎಂದು ಕರೆಯಲು ಸಾಧ್ಯವಿಲ್ಲ. ಇದು ರಾಜಕೀಯ ಪ್ರದರ್ಶನದ ಹೆಸರಿನಲ್ಲಿ ಕಾನೂನನ್ನು ಧಿಕ್ಕರಿಸುವ ಪ್ರಯತ್ನವಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

ಸಂವಿಧಾನವನ್ನು ರಕ್ಷಿಸುವುದಾಗಿ ಹೇಳಿಕೊಳ್ಳುವವರು, ಸಂವಿಧಾನದಿಂದಲೇ ಅಧಿಕಾರವನ್ನು ಪಡೆಯುವ ಹೈಕೋರ್ಟ್‌ನ ಅಧಿಕಾರವನ್ನೇ ಬಹಿರಂಗವಾಗಿ ಸವಾಲು ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ನ್ಯಾಯಾಂಗ ನಿರ್ದೇಶನಗಳು ಮತ್ತು ಸಾಂವಿಧಾನಿಕ ಕರ್ತವ್ಯಗಳನ್ನು ಕಡೆಗಣಿಸಿ ಯಾರೂ ಸಾಂವಿಧಾನಿಕ ಹಕ್ಕುಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ದೂರುದಾರರು ಅಭಿಪ್ರಾಯಪಟ್ಟಿದ್ದಾರೆ. ಯಾವುದೇ ಸಿದ್ಧಾಂತ, ರಾಜಕೀಯ ಅಭಿಯಾನ ಅಥವಾ ವ್ಯಕ್ತಿಯು ಸಂವಿಧಾನಕ್ಕಿಂತ ದೊಡ್ಡವರಲ್ಲ ಮತ್ತು ಕಾನೂನಿಗಿಂತ ಯಾರೂ ಮಿಗಿಲಾದವರಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

ಬೆಂಗಳೂರಿನಲ್ಲಿ ಮನೆ ಖರೀದಿದಾರರಿಗೆ 927 ಕೋಟಿ ವಂಚನೆ ಆರೋಪ: ಓಜೋನ್ ಅರ್ಬಾನಾ CMD ವಾಸುದೇವನ್ ಬಂಧನ!

Asian Games 2026: 1 ನಿಮಿಷದಲ್ಲಿ 2 ಚಿನ್ನದ ಪದಕ ಗೆದ್ದ ಭಾರತ, 75 ಪದಕಗಳೊಂದಿಗೆ 5ನೇ ಸ್ಥಾನಕ್ಕೆ ಲಗ್ಗೆ!

‘CEC ಜ್ಞಾನೇಶ್ ಕುಮಾರ್ ದೇಶದ್ರೋಹಿ’: ಮುಂಬೈನಲ್ಲಿ ಭುಗಿಲೆದ್ದ Cockroach Janata Party ಪ್ರತಿಭಟನೆ, ರಾಜೀನಾಮೆಗೆ ಬಿಗಿಪಟ್ಟು..!

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ Biggboss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!