ರೈಲು ಹತ್ತುವ ಧಾವಂತದಲ್ಲಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ 
ದೇಶ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video

RPF ಕಾನ್‌ಸ್ಟೆಬಲ್ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿದ ಪರಿಣಾಮ ನಾಗ್ಪುರ ರೈಲು ನಿಲ್ದಾಣದಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ನಾಗ್ಪುರ: ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಪ್ರಯಾಣಿಕನೋರ್ವ ಅಯತಪ್ಪಿ ಅಪಾಯಕ್ಕೆ ಸಿಲುಕಿದ್ದು, ಈ ವೇಳೆ ಸಮಯ ಪ್ರಜ್ಞೆ ಮೆರೆದ ಆರ್ ಪಿಎಫ್ ಸಿಬ್ಬಂದಿ ಸಾಹಸ ಮೆರೆದು ರಕ್ಷಣೆ ಮಾಡಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ನಾಗ್ಪುರ ರೈಲು ನಿಲ್ದಾಣದಲ್ಲಿ ಅಕ್ಟೋಬರ್ 1ರಂದು ಮಧ್ಯರಾತ್ರಿ ಈ ಘಟನೆ ನಡೆದಿದೆ. ಈ ವೇಳೆ RPF ಕಾನ್‌ಸ್ಟೆಬಲ್ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿದ ಪರಿಣಾಮ ನಾಗ್ಪುರ ರೈಲು ನಿಲ್ದಾಣದಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ನಾಗ್ಪುರ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ನಂ. 4ರಿಂದ ಹೌರಾ ಎಸಿ ದುರಂತ್ ಎಕ್ಸ್‌ಪ್ರೆಸ್ ಹೊರಡುತ್ತಿದ್ದ ಸಂದರ್ಭದಲ್ಲಿ ಪ್ರಯಾಣಿಕನೊಬ್ಬ ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ್ದಾನೆ.

ಈ ವೇಳೆ ಪರಿಸ್ಥಿತಿಯನ್ನು ಗಮನಿಸಿದ RPF ಕಾನ್‌ಸ್ಟೆಬಲ್ ತಕ್ಷಣ ಪ್ರಯಾಣಿಕನತ್ತ ಧಾವಿಸಿ ಆತನನ್ನು ರಕ್ಷಿಸಿದ್ದಾರೆ. RPF ಸಿಬ್ಬಂದಿಯ ಸಮಯೋಚಿತ ಮಧ್ಯಪ್ರವೇಶದಿಂದ ಸಂಭವಿಸಬಹುದಾಗಿದ್ದ ಗಂಭೀರ ಅಪಘಾತ ತಪ್ಪಿದೆ.

ಚಲಿಸುತ್ತಿರುವ ರೈಲಿಗೆ ಹತ್ತಲು ಅಥವಾ ಇಳಿಯಲು ಪ್ರಯತ್ನಿಸುವುದು ಅತ್ಯಂತ ಅಪಾಯಕಾರಿ. ರೈಲು ಹೊರಡುವ ಮುನ್ನವೇ ಪ್ರಯಾಣಿಕರು ತಮ್ಮ ಬೋಗಿಯನ್ನು ತಲುಪಿ, ರೈಲು ಚಲಿಸಲು ಆರಂಭಿಸಿದ ಬಳಿಕ ಹತ್ತಲು ಅಥವಾ ಇಳಿಯಲು ಪ್ರಯತ್ನಿಸಬಾರದು ಎಂದು ರೈಲ್ವೆ ಅಧಿಕಾರಿಗಳು ಎಚ್ಚರಿಸುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!