ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆಗೆ ಠಾಕ್ರೆ ಸೋದರ ಸಂಬಂಧಿಗಳ ಆಗ್ರಹ! 
ದೇಶ

SIR: ‘ಜ್ಞಾನೇಶ್ ಕುಮಾರ್ ಬಿಜೆಪಿಯ ಅಸ್ತ್ರ, SIR ರದ್ದುಪಡಿಸಿ': ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆಗೆ ಠಾಕ್ರೆ ಸೋದರ ಸಂಬಂಧಿಗಳ ಆಗ್ರಹ!

ಮುಂಬೈನ ಮೆಟ್ರೋ ಸಿನಿಮಾದಿಂದ ಆರಂಭವಾದ ‘ವಿರಾಟ್ ಗರ್ಜನಾ ಮೋರ್ಚಾ’ ಬೃಹತ್ ಮೆರವಣಿಗೆ ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಕೇಂದ್ರ ಕಚೇರಿ ಸಮೀಪದ ಪ್ರದೇಶದಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು.

ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ವಿರೋಧ ವ್ಯಕ್ತಪಡಿಸಿ ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಭಾನುವಾರ ಮುಂಬೈನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಮುಂಬೈನ ಮೆಟ್ರೋ ಸಿನಿಮಾದಿಂದ ಆರಂಭವಾದ ‘ವಿರಾಟ್ ಗರ್ಜನಾ ಮೋರ್ಚಾ’ ಬೃಹತ್ ಮೆರವಣಿಗೆ ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಕೇಂದ್ರ ಕಚೇರಿ ಸಮೀಪದ ಪ್ರದೇಶದಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು.

ಈ ವೇಳೆ ಉದ್ಧವ್ ಠಾಕ್ರೆ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಅವರನ್ನು ‘ಬಿಜೆಪಿಯ ಅಸ್ತ್ರ’ ಎಂದು ಆರೋಪಿಸಿದರು.

“ಜ್ಞಾನೇಶ್ ಕುಮಾರ್ ಬಿಜೆಪಿಯ ಅಸ್ತ್ರ,” ಎಂದು ಮಾಜಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆರೋಪಿಸಿದರು.

ಮತದಾರರ ಪಟ್ಟಿಯಿಂದ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ತೆಗೆದುಹಾಕುವ ಉದ್ದೇಶದಿಂದಲೇ SIR ನಡೆಸಲಾಗುತ್ತಿದೆ ಎನ್ನುವುದಾದರೆ, ದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ಎಷ್ಟು ಬಾಂಗ್ಲಾದೇಶಿಯರನ್ನು ಸರ್ಕಾರ ಇದುವರೆಗೆ ಪತ್ತೆಹಚ್ಚಿದೆ ಎಂದು ಉದ್ಧವ್ ಠಾಕ್ರೆ ಪ್ರಶ್ನಿಸಿದರು.

‘SIR ರದ್ದುಪಡಿಸಿ, ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ನಡೆಸಿ’

MNS ಮುಖ್ಯಸ್ಥ ರಾಜ್ ಠಾಕ್ರೆ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸಬೇಕು ಎಂದು ಕೂಡ ಒತ್ತಾಯಿಸಿದರು.

‘ಮತ ಕಳ್ಳತನ’ ಆರೋಪ

ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರಾದ ಬಾಲಾಸಾಹೇಬ್ ಥೋರಟ್ ಮತ್ತು ವಿಜಯ್ ವಾಡೆತ್ತಿವಾರ್, ಎನ್‌ಸಿಪಿ (ಎಸ್‌ಪಿ) ನಾಯಕರಾದ ಜಯಂತ್ ಪಾಟೀಲ್, ಶಶಿಕಾಂತ್ ಶಿಂಧೆ, ಜಿತೇಂದ್ರ ಅವ್ಹಾಡ್ ಹಾಗೂ ಅನಿಲ್ ದೇಶಮುಖ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿರಂತರವಾಗಿ ‘ಮತ ಕಳ್ಳತನ’ದ ಆರೋಪಗಳನ್ನು ಮಾಡುತ್ತಿದ್ದು, ಅದಕ್ಕೆ ಪೂರಕ ಸಾಕ್ಷ್ಯಗಳನ್ನೂ ಮಂಡಿಸುತ್ತಿದ್ದಾರೆ ಎಂದು ಬಾಳಾ ಸಾಹೇಬ್ ಥೋರಟ್ ಹೇಳಿದರು.

“ಅಧಿಕಾರಕ್ಕಾಗಿ ಬಿಜೆಪಿ ಏನು ಬೇಕಾದರೂ ಮಾಡಬಹುದು,” ಎಂದು ಆರೋಪಿಸಿದ ಥೋರಟ್, ಚುನಾವಣಾ ಆಯೋಗದ ಸದಸ್ಯರ ನೇಮಕಾತಿ ಪ್ರಕ್ರಿಯೆಯಲ್ಲಿ ಮಾಡಲಾದ ಬದಲಾವಣೆಗಳು ಅಕ್ರಮಗಳಿಗೆ ದಾರಿ ಮಾಡಿಕೊಟ್ಟಿವೆ ಎಂದು ದೂರಿದರು. ಜ್ಞಾನೇಶ್ ಕುಮಾರ್ ಅವರನ್ನು ಅವರು “ಭ್ರಷ್ಟ ಆಡಳಿತದ ಸಂಕೇತ” ಎಂದು ಬಣ್ಣಿಸಿದರು.

‘ಪ್ರಜಾಪ್ರಭುತ್ವ, ಸಂವಿಧಾನದ ಗೌರವ ಮರುಸ್ಥಾಪಿಸಬೇಕು’

2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಅವಧಿಯನ್ನು ದೇಶದ ಇತಿಹಾಸದ ‘ಕತ್ತಲೆಯ ಕಾಲ’ ಎಂದು ಥೋರಟ್ ಟೀಕಿಸಿದರು. ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಗೌರವವನ್ನು ಮರುಸ್ಥಾಪಿಸಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.

ಭಾನುವಾರದ ಪ್ರತಿಭಟನೆಯಲ್ಲಿ ಯಾವುದೇ ಪಕ್ಷದ ಧ್ವಜಗಳನ್ನು ಬಳಸಲು ಅವಕಾಶ ನೀಡಲಾಗಿರಲಿಲ್ಲ. ಪ್ರತಿಭಟನಾಕಾರರು ಹಾಗೂ ಬೆಂಬಲಿಗರು ತ್ರಿವರ್ಣ ಧ್ವಜವನ್ನು ಮಾತ್ರ ಹಿಡಿದುಕೊಂಡು ಮೆರವಣಿಗೆಯಲ್ಲಿ ಭಾಗವಹಿಸುವಂತೆ ಸೂಚಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

2006ರ KSTP ಯೋಜನೆ ಪ್ರಕರಣ: CEC ಜ್ಞಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳಂ ಗೃಹ ಸಚಿವ ಆದೇಶ

ಭಾರತ- ವೆಸ್ಟ್ ಇಂಡೀಸ್ ನಡುವಿನ ಪಂದ್ಯದ ವೇಳೆ 'One8' ಬ್ರ್ಯಾಂಡ್‌ ಶೂ ತೋರಿಸಿದ ಅಭಿಮಾನಿ! ಕೊಹ್ಲಿ ರಿಯಾಕ್ಷನ್ ಹೇಗಿತ್ತು ಗೊತ್ತಾ? Video

'ಅಮೇಥಿ ಬಿಟ್ಟು ರಾಯ್‌ಬರೇಲಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿ ತೀವ್ರ ಹೆದರಿದ್ದರು: SP ಇಲ್ಲದಿದ್ದರೇ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ'

‘ಮಹಿಳೆಯ ದೇಹ ಮನರಂಜನೆಗೆ ಬಳಸುವ ಕಂಟೆಂಟ್ ಅಲ್ಲ’: ಜಾನ್ವಿ ಕಪೂರ್ ಬೆನ್ನಿಗೆ ನಿಂತ ನಟಿ ಖುಷ್ಬೂ ಸುಂದರ್

'ನನ್ನ ಲವರ್ ಜೊತೆನೇ ಹೋಗ್ತೀನಿ'; ಕೋರ್ಟ್ ನಲ್ಲಿ ಮಗಳ ಹೇಳಿಕೆಗೆ ಆಕ್ರೋಶ, ಯುವಕನ ತಂದೆಗೆ ಹಿಗ್ಗಾಮುಗ್ಗ ಜಾಡಿಸಿದ ತಾಯಿ!-Video