ವಿದ್ಯಾರ್ಥಿಗಳೊಂದಿಗೆ ಪೊಲೀಸರ ಸಂಘರ್ಷ 
ದೇಶ

ದೆಹಲಿ ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಪ್ರತಿಭಟನೆ ಮುಂದುವರಿಕೆ, ಹಲವರು ವಶಕ್ಕೆ!

ಪೊಲೀಸ್ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳವಾಗಿದೆ ಎಂದು ಮೂವರು ಮಹಿಳಾ ಪತ್ರಕರ್ತೆಯರು ದೆಹಲಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ನವದೆಹಲಿ: ಮಹಿಳೆಯೊಬ್ಬರೊಂದಿಗೆ ಪೊಲೀಸ್ ಸಿಬ್ಬಂದಿಯೊಬ್ಬರು ಅನುಚಿತವಾಗಿ ವರ್ತಿಸಿದರೆನ್ನಲಾದ ಘಟನೆಯ ವಿರುದ್ಧ ಸಂಸತ್ ಭವನದ ರಸ್ತೆಯಲ್ಲಿರುವ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಹಲವರನ್ನು ದೆಹಲಿ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್ 3 ರಂದು ಜಂತರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳವಾಗಿದೆ ಎಂದು ಮೂವರು ಮಹಿಳಾ ಪತ್ರಕರ್ತೆಯರು ದೆಹಲಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ನಿಷ್ಪಕ್ಷಪಾತ ತನಿಖೆಗಾಗಿ ಈ ದೂರುಗಳನ್ನು ಅಪರಾಧ ವಿಭಾಗಕ್ಕೆ (ಕ್ರೈಮ್ ಬ್ರಾಂಚ್) ವರ್ಗಾಯಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ನಮ್ಮೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. 48 ಗಂಟೆಗಳ ನಂತರ ನಮ್ಮ ದೂರಿನ ಪ್ರಸ್ತುತದ ಸ್ಥಿತಿಗತಿಯನ್ನು ತಿಳಿಯಲು ನಾವು ಇಲ್ಲಿಗೆ ಬಂದಿದ್ದೇವೆ ಎಂದು ಪ್ರತಿಭಟನಾಕಾರರೊಬ್ಬರು ಎಎನ್‌ಐ (ANI) ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ದೆಹಲಿ ಪೊಲೀಸ್ ಸಿಬ್ಬಂದಿಯ ವಿರುದ್ಧ ಆರೋಪ ಮಾಡಿರುವ ಮಹಿಳಾ ಪತ್ರಕರ್ತೆಯರಿಗೆ ಸಿಜೆಪಿ (CJP) ಬೆಂಬಲ ಸೂಚಿಸಿದೆ. ಸಿಜೆಪಿ ವಕ್ತಾರ ಸೌರವ್ ದಾಸ್ ಮತ್ತು ಇತರ ಪ್ರತಿಭಟನಾಕಾರರು ಈ ಪ್ರಕರಣದಲ್ಲಿ ಎಫ್‌ಐಆರ್ (FIR) ದಾಖಲಿಸುವಂತೆ ಒತ್ತಾಯಿಸಿದ್ದಾರೆ.

"ದೆಹಲಿ ಪೊಲೀಸರು ಲೈಂಗಿಕ ಕಿರುಕುಳ ಆರೋಪಿಯಾಗಿರುವ ವಿವೇಕ್ ಭಗತ್ ಅವರನ್ನು ರಕ್ಷಿಸುತ್ತಿದ್ದಾರೆ ಮತ್ತು ಎಫ್‌ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ. ಲಿಖಿತ ದೂರು ಮತ್ತು ವೀಡಿಯೊಗಳ ಕುರಿತು 'ವಿಚಾರಣೆ' ನಡೆಸಲು ಅವರು ನಮ್ಮ ಬಳಿ ಸ್ವಲ್ಪ ಸಮಯ ಕೋರಿದ್ದಾರೆ. ನಾವು ಇದನ್ನು ಸಹಿಸುವುದಿಲ್ಲ ಎಂದು ದಾಸ್ 'ಎಕ್ಸ್' ನಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಳ್ಳಾರಿಯಲ್ಲಿ ತೀವ್ರಗೊಂಡ SIR ಸಂಘರ್ಷ: ಬೂತ್ ಮಟ್ಟದ ಬಿಜೆಪಿ ಏಜೆಂಟ್ ವಿರುದ್ಧ Search warrant!

ಏಷ್ಯನ್ ಗೇಮ್ಸ್‌ 2026: ಭಾರತ ಚಿನ್ನದ ಪದಕ ಗೆದ್ದ ಬಳಿಕ ಜಪಾನ್‌ ಕ್ರೀಡಾಂಗಣವನ್ನು ಸ್ವಚ್ಛಗೊಳಿಸಿದ ಭಾರತೀಯ ಅಭಿಮಾನಿಗಳು! Video

'It Was Scripted': ದೇಶದಲ್ಲಿ ಈಗ ಶಾಂತಿಯ ಅನುಭವವಾಗುತ್ತಿಲ್ಲ, ಹೇಳಿಕೆಗೆ ಸ್ಪಷ್ಟನೆ ಕೊಟ್ಟ ಸಂಜಯ್ ದತ್!

ಕಳ್ಳತನಕ್ಕೆ ‘ಶಾಪದ ಶಿಕ್ಷೆ’: ಬಳ್ಳಾರಿಯಲ್ಲಿ ಅಪರೂಪದ ಶಾಸನ ಪತ್ತೆ..!

SIR Row: ನೋಟಿಸ್ ನೀಡದೆ, ವಿಚಾರಣೆಯಿಲ್ಲದೆ ಮತದಾರರ ಹೆಸರು ತೆಗೆದುಹಾಕುವಂತಿಲ್ಲ- ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್!