ರಾಹುಲ್ ಗಾಂಧಿ  
ದೇಶ

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು! Video

ಚುನಾವಣಾ ಆಯೋಗದ ಕಚೇರಿಗೆ ತೆರಳುವ ಪ್ರಯತ್ನದ ವೇಳೆ ಪೊಲೀಸರೊಂದಿಗೆ ಮುಖಾಮುಖಿಯಾಗಿದ್ದ ಅವರು, ಆಕಾಶವಾಣಿ ಭವನದ ಆವರಣದಿಂದಲೇ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನೆರವಿನೊಂದಿಗೆ 'ಮತ ಕಳ್ಳತನ' ನಡೆಸಿ ದೇಶವನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ.

'ದೇಶದ್ರೋಹ' ಎಸಗಿದ್ದಕ್ಕಾಗಿ ಅವರೆಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಗಾಂಧಿ ಸ್ಪಷ್ಟಪಡಿಸಿದ್ದಾರೆ.

'ಬಿಜೆಪಿ ಏನು ಹೇಳುತ್ತದೆ ಎಂಬುದರಲ್ಲಿ ನನಗೆ ಆಸಕ್ತಿಯಿಲ್ಲ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾನು ಇಲ್ಲಿ ನಿಂತಿದ್ದೇನೆ. ನನ್ನೊಂದಿಗೆ 300 ಲೋಕಸಭೆ ಮತ್ತು ರಾಜ್ಯಸಭೆ ಸಂಸದರು ಬಂದಿದ್ದರು ಮತ್ತು ಅವರೂ ಕೂಡ ಪ್ರಜಾಪ್ರಭುತ್ವವನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ' ಎಂದು ಹೇಳಿದರು.

ಚುನಾವಣಾ ಆಯೋಗದ ಕಚೇರಿಗೆ ತೆರಳುವ ಪ್ರಯತ್ನದ ವೇಳೆ ಪೊಲೀಸರೊಂದಿಗೆ ಮುಖಾಮುಖಿಯಾಗಿದ್ದ ಅವರು, ಆಕಾಶವಾಣಿ ಭವನದ ಆವರಣದಿಂದಲೇ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.

'ನರೇಂದ್ರ ಮೋದಿ, ಅಮಿತ್ ಶಾ, ಮೋಹನ್ ಭಾಗವತ್ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ವಾನೇಶ್ ಕುಮಾರ್ ಅವರು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಅಂತ್ಯಗೊಳಿಸಿದ್ದಾರೆ. ಇಡೀ ದೇಶ ಇದನ್ನು ನಂಬುತ್ತದೆ. ದೇಶದ ಯುವಜನತೆಯೂ ಇದನ್ನು ನಂಬುತ್ತದೆ. ನನ್ನನ್ನು ತಡೆಯುತ್ತಿದ್ದ ಪೊಲೀಸರೂ ಇದನ್ನೇ ಹೇಳುತ್ತಿದ್ದಾರೆ. ವಾಸ್ತವ ಎಲ್ಲರಿಗೂ ತಿಳಿದಿದೆ' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ಹೇಳಿದರು.

ಪ್ರಧಾನಿ ಮೋದಿ, ಶಾ ಮತ್ತು ಭಾಗವತ್ ಅವರು 'ಮತ ಕಳ್ಳತನ"ದ ಮೂಲಕ ದೇಶವನ್ನು ವಶಪಡಿಸಿಕೊಂಡಿದ್ದಾರೆ. ಜ್ಞಾನೇಶ್ ಕುಮಾರ್ ಅವರು ಇದಕ್ಕೆ ನೆರವಾದರು ಎಂದು ದೂರಿದರು.

'ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪ್ರಧಾನಿ ಮೋದಿ, ಗೃಹ ಸಚಿವ ಶಾ, ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್ ಅಥವಾ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ - ಹೀಗೆ ಯಾರನ್ನೂ ಬಿಡುವುದಿಲ್ಲ. ನಮ್ಮ ದೇಶಕ್ಕೆ ಎಸಗಿರುವ ಕೃತ್ಯವು ದೇಶದ್ರೋಹವಾಗಿದೆ. ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ' ಎಂದು ಹೇಳಿದರು.

ಇದಕ್ಕೂ ಮುನ್ನ, 'ಎಕ್ಸ್'ನಲ್ಲಿನ ಪೋಸ್ಟ್ ಒಂದರಲ್ಲಿ, ವಿರೋಧ ಪಕ್ಷದ 300ಕ್ಕೂ ಹೆಚ್ಚು ಸಂಸದರು ಚುನಾವಣಾ ಆಯುಕ್ತರನ್ನು ಭೇಟಿಯಾಗಲು ಸಂಸತ್ತಿನಿಂದ ಮೆರವಣಿಗೆ ನಡೆಸಿದರು. ನಾವು ಕೋಟ್ಯಂತರ ಭಾರತೀಯರನ್ನು ಪ್ರತಿನಿಧಿಸುತ್ತೇವೆ. ಚುನಾವಣಾ ಆಯುಕ್ತರು ನಮ್ಮನ್ನು ಏಕೆ ಭೇಟಿಯಾಗುತ್ತಿಲ್ಲ? ಪೊಲೀಸರು ನಮ್ಮನ್ನು ತಡೆದು ಏಕೆ ಬೆದರಿಸುತ್ತಿದ್ದಾರೆ? ಎಂದು ಗಾಂಧಿ ಪ್ರಶ್ನಿಸಿದ್ದರು.

ಮಂಗಳವಾರ ಸಂಸತ್ ಭವನದ ರಸ್ತೆಯಿಂದ ಚುನಾವಣಾ ಆಯೋಗದ ಪ್ರಧಾನ ಕಚೇರಿಯವರೆಗೆ ನಡೆದ 'ಇಂಡಿಯಾ' (INDIA) ಮೈತ್ರಿಕೂಟದ ಮೆರವಣಿಗೆಯಲ್ಲಿ ತೀವ್ರ ನಾಟಕೀಯ ಬೆಳವಣಿಗೆಗಳು ಕಂಡುಬಂದವು; ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇತರ ಕೆಲವರೊಂದಿಗೆ ಚುನಾವಣಾ ಆಯೋಗದ ಕಚೇರಿಯನ್ನು ತಲುಪುವ ಪ್ರಯತ್ನದಲ್ಲಿ ಆಕಾಶವಾಣಿ ಭವನದ ಆವರಣದೊಳಗೆ ಪ್ರವೇಶಿಸಿದರು.

ಪೊಲೀಸರು ಮೆರವಣಿಗೆಯನ್ನು ತಡೆದ ನಂತರ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿలేಶ್ ಯಾದವ್ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದರಾದ ಅಭಿಷೇಕ್ ಬ್ಯಾನರ್ಜಿ ಮತ್ತು ಡೆರೆಕ್ ಓ'ಬ್ರಿಯನ್ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರನ್ನು ವಶಕ್ಕೆ ಪಡೆಯಲಾಯಿತು.

ಮುಖ್ಯ ಚುನಾವಣಾ ಆಯುಕ್ತರ (CEC) ರಾಜೀನಾಮೆಗೆ ಆಗ್ರಹಿಸಿ ಮೆರವಣಿಗೆ ನಡೆಸುತ್ತಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹಾಗೂ ಇತರ ಸಂಸದರನ್ನು, ಭದ್ರತಾ ಸಿಬ್ಬಂದಿ ಸಂಸತ್ ರಸ್ತೆಯಲ್ಲಿರುವ ಆಕಾಶವಾಣಿ ಭವನ ಮತ್ತು ನೀತಿ ಆಯೋಗದ ಕಚೇರಿಯ ಮುಂದೆ ತಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?