ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ 
ದೇಶ

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಪತ್ರದಲ್ಲಿ ಭಾರತೀಯ ಚುನಾವಣಾ ಆಯೋಗವನ್ನು(ECI) ಸಮರ್ಥಿಸಿಕೊಂಡಿರುವ ನಿವೃತ್ತ ನ್ಯಾಯಾಧೀಶರು, ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ'(SIR) ಕಾನೂನುಬದ್ಧ ಎಂದು ಹೇಳಿದ್ದಾರೆ.

ನವದೆಹಲಿ: ಎಸ್ಐಆರ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಮಧ್ಯೆ 42 ನಿವೃತ್ತ ನ್ಯಾಯಾಧೀಶರು ಜ್ಞಾನೇಶ್ ಕುಮಾರ್ ಅವರನ್ನು ಬೆಂಬಲಿಸಿ ಗುರುವಾರ ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಭಾರತೀಯ ಚುನಾವಣಾ ಆಯೋಗವನ್ನು(ECI) ಸಮರ್ಥಿಸಿಕೊಂಡಿರುವ ನಿವೃತ್ತ ನ್ಯಾಯಾಧೀಶರು, ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ'(SIR) ಕಾನೂನುಬದ್ಧ ಎಂದು ಹೇಳಿದ್ದಾರೆ.

"ದೇಶದ ಜನತೆಗೆ" ಬರೆದ ಬಹಿರಂಗ ಪತ್ರದಲ್ಲಿ, ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರು ಮತ್ತು ವಿವಿಧ ಹೈಕೋರ್ಟ್‌ಗಳ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ಮತ್ತು ನ್ಯಾಯಾಧೀಶರು ಸಹಿ ಮಾಡಿದ್ದು, ತಾವು ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುತ್ತಿಲ್ಲ. ಆದರೆ "ಮೌನ ಇನ್ನು ಮುಂದೆ ತಟಸ್ಥ ಆಯ್ಕೆಯಲ್ಲ" ಹೀಗಾಗಿ ಮಾತನಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಸಹಿ ಮಾಡಿದವರಲ್ಲಿ ಜಮ್ಮು ಮತ್ತು ಕಾಶ್ಮೀರ, ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಸಿ. ಪಟೇಲ್, ಕರ್ನಾಟಕ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಸುಭ್ರೋ ಕಮಲ್ ಮುಖರ್ಜಿ ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಹೇಮಂತ್ ಗುಪ್ತಾ ಹಾಗೂ ಪಂಕಜ್ ಮಿತ್ತಲ್ ಸೇರಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯ ಕುರಿತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಬ್ಲಾಕ್ ನಾಯಕರು ನಡೆಸುತ್ತಿರುವ ನಿರಂತರ ಹೋರಾಟದ ಮಧ್ಯೆ ಈ ಪತ್ರ ಬರೆಯಲಾಗಿದೆ.

ಸಾಂವಿಧಾನಿಕ ಸಂಸ್ಥೆಗಳು "ನಿರಂತರವಾಗಿ ದಾಳಿಯನ್ನು" ಎದುರಿಸುತ್ತಿವೆ. ಉನ್ನತ ನ್ಯಾಯಾಂಗ ಮತ್ತು ಶಾಸನಬದ್ಧ ಸಂಸ್ಥೆಗಳು ಸಹ ದಾಳಿಗೆ ಒಳಗಾಗಿವೆ. ಅದರಲ್ಲಿ ಪ್ರಮುಖವಾಗಿ ಚುನಾವಣ ಆಯೋಗ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!