ಜ್ಞಾನೇಶ್ ಕುಮಾರ್ online desk
ದೇಶ

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಹೊಸ ಬೆದರಿಕೆ ಮಾಹಿತಿಗಳ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ನವದೆಹಲಿ: ಎಸ್ಐಆರ್ ವಿವಾದದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ(CEC) ಜ್ಞಾನೇಶ್‌ ಕುಮಾರ್‌ ವಿರುದ್ಧದ ಪ್ರತಿಭಟನೆಯನ್ನು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣ ಮತ್ತಷ್ಟು ತೀವ್ರಗೊಳಿಸಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜ್ಞಾನೇಶ್ ಕುಮಾರ್ ಅವರ Z+ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಹೊಸ ಬೆದರಿಕೆ ಮಾಹಿತಿಗಳ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಜ್ಞಾನೇಶ್ ಕುಮಾರ್ ಅವರು ಈಗಾಗಲೇ Z-ಪ್ಲಸ್ ಭದ್ರತೆ ಹೊಂದಿದ್ದಾರೆ. ಆದಾಗ್ಯೂ, ಇತ್ತೀಚಿನ ಗುಪ್ತಚರ ಮಾಹಿತಿಗಳು ಮತ್ತು ನವದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಗಮನದಲ್ಲಿಟ್ಟುಕೊಂಡು, ಅವರ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ ಮತ್ತು ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚೆಗೆ ದೆಹಲಿ ಮತ್ತು ಆಗ್ರಾದಲ್ಲಿರುವ ಜ್ಞಾನೇಶ್ ಕುಮಾರ್ ಅವರ ನಿವಾಸದ ಮುಂದೆ ಕೆಲವು ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ದೆಹಲಿ, ಆಗ್ರಾದಲ್ಲಿರುವ ಅವರ ನಿವಾಸಗಳು ಮತ್ತು ಚುನಾವಣಾ ಆಯೋಗದ ಪ್ರಧಾನ ಕಚೇರಿಯಲ್ಲಿನ ಭದ್ರತಾ ಸಿಬ್ಬಂದಿಯಲ್ಲೂ ಹೆಚ್ಚುವರಿಯಾಗಿ ಸಿಐಎಸ್‌ಎಫ್, ಸಿಆರ್‌ಪಿಎಫ್, ಆರ್‌ಪಿಎಫ್ ಹಾಗೂ ದೆಹಲಿ ಪೊಲೀಸರನ್ನು ನೇಮಿಸಲಾಗಿದೆ.

ಮತ್ತೊಂದೆಡೆ, ಭದ್ರತಾ ಕಾರಣಗಳಿಂದಾಗಿ ಸಿಇಸಿ ಜ್ಞಾನೇಶ್ ಕುಮಾರ್ ಅವರು ಛತ್ತೀಸ್‌ಗಢ ಭೇಟಿಯನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಎರಡು ದಿನಗಳ ಕಾಲ ಅವರು ಛತ್ತೀಸ್​ಗಢಕ್ಕೆ ಭೇಟಿ ನೀಡಬೇಕಿತ್ತು. ಆದರೆ ಚುನಾವಣಾ ಆಯೋಗ ಅವರ ಭೇಟಿಯನ್ನು ಇದ್ದಕ್ಕಿದ್ದಂತೆ ರದ್ದುಗೊಳಿಸಿ ಮುಂದೂಡಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video