ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ ಕೆ ಶಿವಕುಮಾರ್  
ದೇಶ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ತಮ್ಮ ಬಳಿ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ ಎಂದಿರುವ ಡಿಕೆ ಶಿವಕುಮಾರ್, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ತಮಗೆ ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ ಎಂದು ಹೇಳಿದ್ದಾರೆ.

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ ಎಚ್ಚರವಾಗಿರಿ ಎಂದು ಸಿಎಂ ಡಿ ಕೆ ಶಿವಕುಮಾರ್ ಎಚ್ಚರ ನೀಡಿದ್ದಾರೆ ಎಂಬ ಚರ್ಚೆಗಳ ನಡುವೆ ಇಂದು ಗುರುವಾರ ಖುದ್ದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್(Sting Operation) ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ

ಮುಖ್ಯಮಂತ್ರಿ ಆದ ಬಳಿಕ ತಮ್ಮನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು. ಸಚಿವರಿಗೆ ಸ್ಟಿಂಗ್ ಆಪರೇಷನ್ ಬಗ್ಗೆ ಸಚಿವ ಸಂಪುಟ ಸಭೆಯಲ್ಲೇ ಎಚ್ಚರಿಕೆ ನೀಡಿರುವ ವಿಚಾರದ ಕುರಿತು ಇಂದು ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ತಮ್ಮ ಬಳಿ ಈ ಬಗ್ಗೆ ಎಲ್ಲ ಮಾಹಿತಿಯೂ ಇದೆ ಎಂದಿದ್ದಾರೆ. ತಮ್ಮ ಬಳಿ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ ಎಂದಿರುವ ಡಿಕೆ ಶಿವಕುಮಾರ್, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ತಮಗೆ ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ ಎಂದು ಹೇಳಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿದ್ದೇನೆ, ಸುಮ್ಮನೆ ಮಾತನಾಡಲ್ಲ

ಜವಾಬ್ದಾರಿಯುತ ಸ್ಥಾನದಲ್ಲಿ ಕುಳಿತಿರುವುದರಿಂದ ಸುಮ್ಮನೆ ಮಾತನಾಡುವುದಿಲ್ಲ. ಎಲ್ಲ ಸಾಕ್ಷ್ಯಾಧಾರಗಳಿವೆ, ನನ್ನ ಬಳಿಗೂ ಕೆಲವರು ಜಿಎಸ್‌ಟಿ ಇತ್ಯಾದಿ ಬೇರೆ ಬೇರೆ ವಿಚಾರಗಳನ್ನು ಮಾತನಾಡಲು ಬಂದಿದ್ದರು. ನನ್ನಿಂದಲೇ ಈ ಸ್ಟಿಂಗ್ ಆಪರೇಷನ್ ಆರಂಭಿಸಲು ಯತ್ನಿಸಿದ್ದರು ಎಂದು ತಿಳಿಸಿದರು.

ನನಗೆ ಅವರ ಮೇಲೆ ಮುಂಚಿತವಾಗಿಯೇ ಅನುಮಾನ ಬಂದ ಹಿನ್ನೆಲೆಯಲ್ಲಿ, ಪೊಲೀಸರ ಮೂಲಕ ಸಂಪೂರ್ಣ ಮಾಹಿತಿ ಪಡೆದು ಎಲ್ಲಾ ದಾಖಲೆಗಳು ಹಾಗೂ ಫೋಟೋಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದೇನೆ. ಅಗತ್ಯಬಿದ್ದರೆ ಫೋಟೋಗಳನ್ನು ಬಿಡುಗಡೆ ಮಾಡುತ್ತೇನೆ. ಈ ಷಡ್ಯಂತ್ರದ ಹಿಂದೆ ಯಾರ್ಯಾರಿದ್ದಾರೆ, ಯಾರು ಇದಕ್ಕೆ ಹಣಕಾಸು ಒದಗಿಸುತ್ತಿದ್ದಾರೆ ಇದರ ಪಿತಾಮಹ ಯಾರು ಎಂಬುದು ನನಗೆ ಸ್ಪಷ್ಟವಾಗಿ ತಿಳಿದಿದೆ. ಕುಂಬಳಕಾಯಿ ಕಳ್ಳ ಅಂದರೆ ಕೆಲವರು ಹೆಗಲು ಮುಟ್ಟುಕೊಳ್ತಿದ್ದಾರೆ ಎಂದು ಹೇಳಿದರು.

ಈ ಹಿಂದೆ 2000ರ ಆಸುಪಾಸಿನಲ್ಲೂ ನನ್ನ ವಿರುದ್ಧ ಇಂತಹ ಷಡ್ಯಂತ್ರಗಳು ನಡೆದಿದ್ದವು. ಸುಖಾಸುಮ್ಮನೆ ಟ್ರಾಪ್ ಮಾಡಲು ಜನರು ಬರುತ್ತಾರೆ, ಎಚ್ಚರಿಕೆಯಿಂದ ಇರಿ ಎಂದು ನಮ್ಮ ಅಧಿಕಾರಿಗಳಿಗೆ, ಸಚಿವರಿಗೆ ಸೂಚನೆ ನೀಡಿದ್ದೇನೆ.ಇದರಲ್ಲಿ ಕರ್ನಾಟಕದವರೇ ಇದ್ದಾರಾ ಅಥವಾ ಹೊರರಾಜ್ಯದವರಾ ಎಂಬ ವಿವರಗಳನ್ನು ಈಗಲೇ ಬಹಿರಂಗಪಡಿಸುವುದಿಲ್ಲ, ಕಾಲವೇ ಎಲ್ಲದಕ್ಕೂ ತಕ್ಕ ಉತ್ತರ ನೀಡಲಿದೆ ಎಂದು ತಿಳಿಸಿದರು.

ಎಸ್​ಐಆರ್ ಫಾರ್ಮ್-7 ದುರ್ಬಳಕೆ ಆರೋಪ: ವರಿಷ್ಠರಿಗೆ ದಾಖಲೆ ನೀಡುವೆ

ಎಸ್​ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ ಮಾಡಲಾಗಿದೆ. ಫಾರ್ಮ್-7 ಹೇಗೆ ದುರ್ಬಳಕೆಯಾಗಿದೆ ಎಂಬ ದಾಖಲೆಗಳನ್ನು ಹೈಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಎಲ್ಲ ದಾಖಲೆಗಳನ್ನು ತಮ್ಮೊಂದಿಗೆ ದೆಹಲಿಗೆ ತಂದಿದ್ದೇನೆ ಎಂದಿರುವ ಅವರು, ಈ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. ಬಿಜೆಪಿ ನಾಯಕರು ಯಾಕೆ ಪ್ರಕರಣ ದಾಖಲಿಸುತ್ತಿದ್ದೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಈ ಅಕ್ರಮದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಕೆಲವು ನಾಯಕರೇ ಭಾಗಿಯಾಗಿದ್ದಾರೆ. ತಮ್ಮ ಹೆಸರು ಬಯಲಿಗೆ ಬರುತ್ತದೆ ಎಂಬ ಕಾರಣಕ್ಕೆ ತನಿಖೆ ಬೇಡ ಎನ್ನುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಮೇಲೆ ನಡೆದ ಪೊಲೀಸರ ದಾಳಿಯನ್ನು ಅಮಾನವೀಯ ಎಂದು ಟೀಕಿಸಿದರು.

ಜಿಎಸ್​​ಟಿ ಸಭೆಯಲ್ಲಿ ರಾಜ್ಯದ ಮಾಹಿತಿ ನೀಡುವೆ

ಕಳೆದ ಮೂರು ದಿನಗಳಿಂದ ಜಿಎಸ್​ಟಿ ಸಭೆ ನಡೆಯುತ್ತಿದ್ದು, ಇಂದು ಮುಖ್ಯಮಂತ್ರಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ. ರಾಜ್ಯದ ಹಿತದೃಷ್ಟಿಯಿಂದ ಅಗತ್ಯ ಮಾಹಿತಿಯನ್ನು ತಿಳಿಸುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.

ಡಿಕೆಶಿ ಆರೋಪಕ್ಕೆ ವಿಜಯೇಂದ್ರ ತಿರುಗೇಟು

ಇನ್ನು ಸಚಿವರ ಸ್ಟಿಂಗ್ ಆಪರೇಷನ್ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿ, ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಯಾರು ಸ್ಟಿಂಗ್ ಆಪರೇಷನ್ ಮಾಡುತ್ತಿದ್ದಾರೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಹೇಳಿದ್ದಾರೆ. ತಮ್ಮ ಶಾಸಕರ ಮೇಲೆಯೇ ಸ್ಟಿಂಗ್ ಮಾಡುತ್ತಾರೋ, ಡಿಂಗ್ ಡಿಂಗ್ ಆಪರೇಷನ್ ಯಾರು ಮಾಡಿದ್ದಾರೆ ಎಂಬುದೂ ಗೊತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಪಂದ್ಯ ಮುಗಿಸಿ ಮನೆಗೆ ಮರಳುವಾಗ ದುರಂತ: ಭೀಕರ ಕಾರು ಅಪಘಾತ, 4 ಕ್ರಿಕೆಟಿಗರ ದಾರುಣ ಸಾವು!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್