ಪ್ರಧಾನಿ ಮೋದಿ 
ದೇಶ

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ನಿರಂತರವಾಗಿ ಆಶೀರ್ವಾದ ನೀಡುತ್ತಿರುವ ಜನರಿಗೆ ಧನ್ಯವಾದಗಳು. ಅಸ್ಸಾಂನ ನಾಗಾಂವ್ ಲೋಕಸಭಾ ಕ್ಷೇತ್ರ ಹಾಗೂ ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಫಲಿತಾಂಶಗಳು..

ನವದೆಹಲಿ: ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿ-ಎನ್‌ಡಿಎಗೆ ಬೆಂಬಲ ನೀಡಿದ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಜನರು ನಿರಂತರವಾಗಿ ನೀಡುತ್ತಿರುವ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

'ಈ ಗೆಲುವು ಬಿಜೆಪಿ-ಎನ್‌ಡಿಎ ಮೈತ್ರಿಕೂಟದ ಉತ್ತಮ ಆಡಳಿತದ ಅಜೆಂಡಾದೊಂದಿಗೆ ಜನರು ಆಳವಾದ ನಂಟು ಹೊಂದಿದ್ದಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ' ಎಂದು ಅವರು ಹೇಳಿದ್ದಾರೆ.

“ನಿರಂತರವಾಗಿ ಆಶೀರ್ವಾದ ನೀಡುತ್ತಿರುವ ಜನರಿಗೆ ಧನ್ಯವಾದಗಳು. ಅಸ್ಸಾಂನ ನಾಗಾಂವ್ ಲೋಕಸಭಾ ಕ್ಷೇತ್ರ ಹಾಗೂ ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಫಲಿತಾಂಶಗಳು, ಬಿಜೆಪಿ-ಎನ್‌ಡಿಎಯ ಉತ್ತಮ ಆಡಳಿತದ ಅಜೆಂಡಾದೊಂದಿಗೆ ಜನರು ಆಳವಾದ ನಂಟು ಹೊಂದಿದ್ದಾರೆ ಎಂಬುದನ್ನು ಮತ್ತೊಮ್ಮೆ ತೋರಿಸಿವೆ” ಎಂದು ಅವರು ತಿಳಿಸಿದ್ದಾರೆ.

ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿರುವ ಮೋದಿ, ಪಕ್ಷದ ಕಾರ್ಯಕರ್ತರ ಶ್ರಮವನ್ನೂ ಶ್ಲಾಘಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಪಶ್ಚಿಮ ಬಂಗಾಳದ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗಮನಾರ್ಹ ಗೆಲುವು ಸಾಧಿಸಿದೆ. ರಾಜಕೀಯವಾಗಿ ಮಹತ್ವ ಪಡೆದಿರುವ ನಂದಿಗ್ರಾಮ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿಗಳನ್ನು ಭಾರಿ ಅಂತರದಿಂದ ಹಿಂದಿಕ್ಕಿದೆ. ಮುಸ್ಲಿಂ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ರೇಜಿನಗರ ಕ್ಷೇತ್ರದಲ್ಲಿಯೂ ಅಚ್ಚರಿಯ ಗೆಲುವು ದಾಖಲಿಸಿದೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್‌ನ 15 ವರ್ಷಗಳ ಆಡಳಿತ ಅಂತ್ಯಗೊಂಡು ಸುಮಾರು ಐದು ತಿಂಗಳ ಬಳಿಕ ನಡೆದ ಈ ಉಪಚುನಾವಣೆ ಫಲಿತಾಂಶವು ಬಿಜೆಪಿಯ ರಾಜಕೀಯ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ.

ಅಸ್ಸಾಂನ ನಾಗಾಂವ್‌ನಲ್ಲಿ ಬಿಜೆಪಿ ಅಭ್ಯರ್ಥಿಗೆ ಭಾರಿ ಮುನ್ನಡೆ

ಅಸ್ಸಾಂನ ನಾಗಾಂವ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ದೇವಶಿಶ್ ಶರ್ಮಾ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ, ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ವಿರುದ್ಧ 1,76,391 ಮತಗಳ ಅಂತರದ ಮುನ್ನಡೆ ಸಾಧಿಸಿದ್ದು, ಗೆಲುವಿನ ಹೊಸ್ತಿಲಲ್ಲಿದ್ದಾರೆ.

ಪುದುಚೇರಿಯಲ್ಲೂ ಎನ್‌ಡಿಎ ಮಿತ್ರಪಕ್ಷಕ್ಕೆ ಜಯ

ಪುದುಚೇರಿಯ ತಟ್ಟಂಚಾವಡಿ ವಿಧಾನಸಭಾ ಕ್ಷೇತ್ರದ ಅಕ್ಟೋಬರ್ 6ರ ಉಪಚುನಾವಣೆಯಲ್ಲಿ ಆಡಳಿತಾರೂಢ ಎಐಎನ್‌ಆರ್‌ಸಿ (AINRC) ಗೆಲುವು ಸಾಧಿಸಿದೆ. ಎನ್‌ಡಿಎ ಮಿತ್ರಪಕ್ಷದ ಈ ಗೆಲುವಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

“ಜನರ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸಲು ಹಾಗೂ ಅವರ ಉತ್ತಮ ಮತ್ತು ಸಮೃದ್ಧ ಭವಿಷ್ಯದ ಆಶಯಗಳನ್ನು ಈಡೇರಿಸಲು ಈ ಜನಾದೇಶ ನಮಗೆ ಮತ್ತಷ್ಟು ಶಕ್ತಿ ನೀಡಲಿದೆ” ಎಂದು ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: Falahari Maharaj ಯೂ-ಟರ್ನ್, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್: ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'; Video ವೈರಲ್!