ಭಗವಾನ್ ದೀಪ್ಕೆ - ಅನಿತಾ ದೀಪ್ಕೆ  
ದೇಶ

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೀಪ್ಕೆ ಅವರಿಗೆ ಅಜ್ಜಿ ಸಾವಿನ ಸುದ್ದಿ ತಿಳಿಸಲು ಅವರ ಪೋಷಕರು ಪ್ರಯತ್ನಿಸುತ್ತಿದ್ದಾರೆ. ಆದರೆ ದೀಪ್ಕೆ ಎಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ ಮತ್ತು ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರ ತಂದೆ ಭಗವಾನ್ ದೀಪ್ಕೆ ಅವರು ಹೇಳಿದ್ದಾರೆ.

ಹಿಂಗೋಲಿ(ಮಹಾರಾಷ್ಟ್ರ): ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಮುಂಬೈನಿಂದ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶನಿವಾರ ವಿಮಾನದಲ್ಲಿಯೇ ವಶಕ್ಕೆ ಪಡೆದಿದ್ದಾರೆ.

ಅಭಿಜೀತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಅವರ ಅಜ್ಜಿ ಸಾವಿತ್ರಿಬಾಯಿ ದೀಪ್ಕೆ(85) ಅವರು ಇಂದು ಬೆಳಗ್ಗೆ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ತಮ್ಮ ಸ್ವಗ್ರಾಮವಾದ ಸಂತುಕ್ ಪಿಂಪ್ರಿಯಲ್ಲಿ ನಿಧನರಾಗಿದ್ದಾರೆ.

ದೀಪ್ಕೆ ಅವರಿಗೆ ಅಜ್ಜಿ ಸಾವಿನ ಸುದ್ದಿ ತಿಳಿಸಲು ಅವರ ಪೋಷಕರು ಪ್ರಯತ್ನಿಸುತ್ತಿದ್ದಾರೆ. ಆದರೆ ದೀಪ್ಕೆ ಎಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ ಮತ್ತು ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರ ತಂದೆ ಭಗವಾನ್ ದೀಪ್ಕೆ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವವನ್ನು ಗೌರವಿಸುತ್ತಿಲ್ಲ ಎಂದು ಆರೋಪಿಸಿದರು ಅವರು, ತಮ್ಮ ಮಗನ ಬಂಧನ ಮತ್ತು ದೊಡ್ಡ ಪೊಲೀಸ್ ಪಡೆ ನಿಯೋಜನೆಯನ್ನು ಪ್ರಶ್ನಿಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳು 'ಚಂಬಲ್ ಡಕಾಯಿತರೇ'? ಎಂದು ಕಿಡಿ ಕಾರಿದ್ದಾರೆ.

''ದೆಹಲಿಯಲ್ಲಿ ಇಷ್ಟೊಂದು ಪೊಲೀಸ್ ಪಡೆ ಏಕೆ ನಿಯೋಜಿಸಲಾಗಿದೆ ಎಂದು ನನಗೆ ಅರ್ಥವಾಗುತ್ತಿಲ್ಲ? ಇದು ವಿದ್ಯಾರ್ಥಿಗಳ ಆಂದೋಲನ. ಚಂಬಲ್‌ನ ಡಕಾಯಿತರು ದೆಹಲಿಯಲ್ಲಿ ಒಟ್ಟುಗೂಡಿದ್ದಾರೆಯೇ? "ಡಕಾಯಿತರು ಸಂಸತ್ತಿನಲ್ಲಿ ಕುಳಿತಿದ್ದಾರೆ," ಎಂದು ಅಭಿಜೀತ್ ಅವರ ತಂದೆ ಭಗವಾನ್ ದೀಪ್ಕೆ ಹೇಳಿದ್ದಾರೆ.

ಅಜ್ಜಿ ನಿಧನದ ಸುದ್ದಿ ತಿಳಿಸಿದ ಪೊಲೀಸರು

ಇನ್ನು ದೆಹಲಿ ಪೊಲೀಸರು ಅವರ ಅಜ್ಜಿಯ ನಿಧನದ ಬಗ್ಗೆ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಂಧನದಲ್ಲಿರುವಾಗ ಪ್ರತಿಭಟನೆಯನ್ನು ಮುಂದುವರಿಸಬೇಕೆ ಅಥವಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮನೆಗೆ ಮರಳಬೇಕೆ ಎಂಬುದು ಈಗ ಅವರ ನಿರ್ಧಾರ ಎಂದು ಹೇಳಿದ್ದಾರೆ.

ಅಂದಹಾಗೆ ಅಭಿಜಿತ್ ದೀಪ್ಕೆ ಅವರ ಅಜ್ಜಿಯ ಅಂತ್ಯಕ್ರಿಯೆಯನ್ನು ನಾಳೆ ಅಂದರೆ ಭಾನುವಾರ, ಅಕ್ಟೋಬರ್ 11ರಂದು ಬೆಳಿಗ್ಗೆ 10 ಗಂಟೆಗೆ ನೆರವೇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್