ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ! 
ದೇಶ

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿಲ್ಲ. ಆದರೂ ಸಿಜೆಪಿ ಪ್ರತಿಭಟನೆ ನಡೆಸಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ದೆಹಲಿಯನ್ನು ಭದ್ರ ಕೋಟೆಯನ್ನಾಗಿ ಪರಿವರ್ತಿಸಿದ್ದಾರೆ.

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಶನಿವಾರ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದು, ಈ ಪ್ರತಿಭಟನೆಯನ್ನು ತಡೆಯಲು ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಹಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿಲ್ಲ. ಆದರೂ ಸಿಜೆಪಿ ಪ್ರತಿಭಟನೆ ನಡೆಸಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ದೆಹಲಿಯನ್ನು ಭದ್ರ ಕೋಟೆಯನ್ನಾಗಿ ಪರಿವರ್ತಿಸಿದ್ದಾರೆ.

ದೆಹಲಿಯ ಸುತ್ತಮುತ್ತಲಿನ ಎಲ್ಲಾ ಗಡಿಗಳಲ್ಲಿ ಮತ್ತು ಪ್ರತಿಭಟನಾಕಾರರು ಸೇರುವ ಸಾಧ್ಯತೆ ಇರುವ ಎಲ್ಲಾ ಸ್ಥಳಗಳಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಆಗ್ನೇಯ ದೆಹಲಿಯ ಮೋಹನ್ ಎಸ್ಟೇಟ್‌ನ ಕೈಗಾರಿಕಾ ಕೇಂದ್ರ ಪ್ರದೇಶದಲ್ಲಿ ಬ್ಯಾರಿಕೇಡ್‌ಗಳ ಜೊತೆಗೆ ಪೊಲೀಸರು ಸ್ಪೈಕ್ ಸ್ಟ್ರಿಪ್‌ಗಳನ್ನು ಸಹ ಅಳವಡಿಸಿದ್ದಾರೆ.

ಮೋಹನ್ ಸಹಕಾರಿ ಎಸ್ಟೇಟ್ ಪ್ರದೇಶದ ಸುತ್ತಲಿನ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿಗಳು ತೀವ್ರ ಕಾವಲು ಕಾಯುತ್ತಿರುವ ಸ್ಥಳದ ಒಂದು ದೃಶ್ಯವನ್ನು ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿದ್ದು, ನಿಷೇಧಿತ ಪ್ರದೇಶದಿಂದ ಯಾವುದೇ ವಾಹನ ಚಲಿಸದಂತೆ ತಡೆಯಲು ಸ್ಪೈಕ್ ಸ್ಟ್ರಿಪ್‌ಗಳನ್ನು ಇರಿಸಲಾಗಿದೆ. ಪೊಲೀಸರು ಪ್ರತಿಯೊಂದು ವಾಹನವನ್ನು ಪರಿಶೀಲಿಸುತ್ತಿದ್ದಾರೆ.

ಈ ಮಧ್ಯೆ, ನಾವು ಎಲ್ಲದ್ದಕ್ಕೂ ಸಿದ್ದರಿದ್ದೇವೆ. ನಾವು ಯಾವುದಕ್ಕೂ ಹೆದರಲ್ಲ. ಅವರು ನನ್ನನ್ನು ಬಂಧಿಸಲಿ ಅಥವಾ ವಶಕ್ಕೆ ಪಡೆಯಲಿ. ಅದರಿಂದ ನನಗೇನೂ ವ್ಯತ್ಯಾಸವಾಗುವುದಿಲ್ಲ. ಯುಎಪಿಎ (UAPA) ಅಥವಾ ಎನ್‌ಎಸ್‌ಎ (NSA) ಕಾಯ್ದೆಗಳನ್ನು ಹೇರಲಿ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳಿಗಾಗಿ ಮತ್ತು ಈ ದೇಶದ ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!