ಸಂಗ್ರಹ ಚಿತ್ರ 
ದೇಶ

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

ಕೇಂದ್ರ ಗೃಹ ಸಚಿವಾಲಯ (MHA) ರಚಿಸಿದ್ದ ಉನ್ನತ ಮಟ್ಟದ ಸಮಿತಿಯ ಶಿಫಾರಸಿನ ಮೇರೆಗೆ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಈ ಮಹತ್ವದ ಆದೇಶ ಹೊರಡಿಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಪ್ರತಿಭಟನಾ ಸ್ಥಳವಾದ ಜಂತರ್ ಮಂತರ್ ಅನ್ನು ಅಧಿಕೃತ ಧರಣಿ ವೇದಿಕೆಗಳ ಪಟ್ಟಿಯಿಂದ ದೆಹಲಿ ಪೊಲೀಸರು ಕೈಬಿಟ್ಟಿದ್ದಾರೆ.

ಇನ್ಮುಂದೆ ಕೇಂದ್ರ ದೆಹಲಿಯ ಈ ಆಯಕಟ್ಟಿನ ಜಾಗದಲ್ಲಿ ಯಾವುದೇ ರೀತಿಯ ಸಾರ್ವಜನಿಕ ಪ್ರತಿಭಟನೆ, ಸತ್ಯಾಗ್ರಹ ಅಥವಾ ಧರಣಿಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಗೃಹ ಸಚಿವಾಲಯ (MHA) ರಚಿಸಿದ್ದ ಉನ್ನತ ಮಟ್ಟದ ಸಮಿತಿಯ ಶಿಫಾರಸಿನ ಮೇರೆಗೆ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಈ ಮಹತ್ವದ ಆದೇಶ ಹೊರಡಿಸಿದ್ದಾರೆ.

ನಾಗರಿಕರು ತಮ್ಮ ಪ್ರತಿಭಟನೆ ಮತ್ತು ಪ್ರದರ್ಶನಗಳನ್ನು ಆಯೋಜಿಸುವ ಹಕ್ಕನ್ನು ಚಲಾಯಿಸಲು ಪರ್ಯಾಯ ಸ್ಥಳಗಳನ್ನು ಪರಿಶೀಲಿಸುವ ಉದ್ದೇಶದಿಂದ ಕೇಂದ್ರ ಗೃಹ ಸಚಿವಾಲಯ ಸಮಿತಿಯೊಂದನ್ನು ರಚಿಸಿತ್ತು,

ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ರಾಷ್ಟ್ರೀಯ ರಾಜಧಾನಿಯಲ್ಲಿ ಪ್ರತಿಭಟನೆ ಮತ್ತು ಧರಣಿ ನಡೆಸಲು ರಾಮಲೀಲಾ ಮೈದಾನ, ಬುರಾರಿ ಮೈದಾನ ಹಾಗೂ ಸಿಬಿಡಿ ಮೈದಾನ ಎಂಬ ಮೂರು ಸ್ಥಳಗಳನ್ನು ನಿಗದಿಪಡಿಸಲಾಗಿದೆ.

ದೆಹಲಿಯ ಹೆಚ್ಚಿನ ಭದ್ರತೆಯಿರುವ ಕೇಂದ್ರ ಭಾಗದಲ್ಲಿರುವ ಜಂತರ್ ಮಂತರ್ ಇದುವರೆಗೆ ಪ್ರತಿಭಟನೆಗಳಿಗೆ ಅಧಿಕೃತವಾಗಿ ನಿಗದಿಪಡಿಸಲಾದ ಪ್ರಮುಖ ಸ್ಥಳವಾಗಿತ್ತು.

ಹೊಸದಾಗಿ ಗುರುತಿಸಿರುವ ಮೂರು ಸ್ಥಳಗಳಲ್ಲಿ ಪ್ರತಿಭಟನೆ ಮತ್ತು ಧರಣಿಗಳನ್ನು ಆಯೋಜಿಸುವ ಕುರಿತು ವಿವರವಾದ ಪರಿಷ್ಕೃತ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ)ಯನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ದೆಹಲಿ ಪೊಲೀಸರ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ತೀವ್ರ ರಾಜಕೀಯ ಪ್ರಕ್ಷುಬ್ಧತೆಯೇ ಇದಕ್ಕೆ ಮುಖ್ಯ ಕಾರಣ ಎನ್ನಲಾಗಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಭಾರಿ ಪ್ರತಿಭಟನೆಗಳು ನಡೆಯುತ್ತಿವೆ.

ಕಾಕ್ರೋಚ್ ಜನತಾ ಪಾರ್ಟಿ (CJP), ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳಾದ SFI, ISA ಮತ್ತು ವಿವಿಧ ವಿರೋಧ ಪಕ್ಷಗಳು ಜಂತರ್ ಮಂತರ್ ಸುತ್ತಮುತ್ತ ನಿರಂತರ ಧರಣಿ ಹಮ್ಮಿಕೊಂಡಿದ್ದವು. ಈ ವೇಳೆ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸುರಕ್ಷತೆ ಹಾಗೂ ಸಾರ್ವಜನಿಕ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದೆಹಲಿ ಪೊಲೀಸರ ಈ ಹಠಾತ್ ಆದೇಶಕ್ಕೆ ರಾಜಕೀಯ ವಲಯ ಹಾಗೂ ನಾಗರಿಕ ಹಕ್ಕುಗಳ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ಹಕ್ಕನ್ನು ಕಿತ್ತುಕೊಂಡಿರುವುದನ್ನು ಪ್ರಶ್ನಿಸಿ ಈಗಾಗಲೇ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video