ಸುಪ್ರೀಂ ಕೋರ್ಟ್ ಮತ್ತು ಕಪಿಲ್ ಸಿಬಲ್ 
ದೇಶ

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾನುವಾರ ನಡೆದ ವಿಶೇಷ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಪೀಠವು, “ಈ ಸಂಸ್ಥೆಯ ಮೇಲಿನ ಕಪಿಲ್ ಸಿಬಲ್ ಅವರ ವಿಶ್ವಾಸವನ್ನು ಮರುಸ್ಥಾಪಿಸಲು ನಾವು ಇಲ್ಲಿದ್ದೇವೆ. ಅವರ ವಿಶ್ವಾಸ ನಮ್ಮ ಬತ್ತಳಿಕೆಯಲ್ಲಿರುವ ಅತ್ಯಂತ ಪ್ರಬಲ ಅಸ್ತ್ರ..

ನವದೆಹಲಿ: ಸುಪ್ರೀಂ ಕೋರ್ಟ್‌ಗೆ ಅಲೆದು ಅಲೆದು ಸುಸ್ತಾಗಿ ಹೋಗಿದೆ ಎಂಬ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರ ಹೇಳಿಕೆ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು ಇದೇ ವಿಚಾರವಾಗಿ ಇದೀಗ ಸುಪ್ರೀಂ ಕೋರ್ಟ್ ಕೂಡ ಭಾನುವಾರ ಪ್ರತಿಕ್ರಿಯಿಸಿದೆ.

ನ್ಯಾಯಾಂಗ ವ್ಯವಸ್ಥೆಯ ಮೇಲಿನ ಸಿಬಲ್ ಅವರ ವಿಶ್ವಾಸವನ್ನು ಮರಳಿ ಗಳಿಸಲು ಬದ್ಧವಾಗಿರುವುದಾಗಿ ದೇಶದ ಸರ್ವೋಚ್ಛ ನ್ಯಾಯಾಲಯ ಹೇಳಿದೆ.

ಭಾನುವಾರ ನಡೆದ ವಿಶೇಷ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಪೀಠವು, “ಈ ಸಂಸ್ಥೆಯ ಮೇಲಿನ ಕಪಿಲ್ ಸಿಬಲ್ ಅವರ ವಿಶ್ವಾಸವನ್ನು ಮರುಸ್ಥಾಪಿಸಲು ನಾವು ಇಲ್ಲಿದ್ದೇವೆ. ಅವರ ವಿಶ್ವಾಸ ನಮ್ಮ ಬತ್ತಳಿಕೆಯಲ್ಲಿರುವ ಅತ್ಯಂತ ಪ್ರಬಲ ಅಸ್ತ್ರಗಳಲ್ಲಿ ಒಂದಾಗಿದೆ” ಎಂದು ಹೇಳಿದೆ.

ಮೂಲಗಳ ಪ್ರಕಾರ ಅಕ್ಟೋಬರ್ 10ರಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ನಾಗರಿಕ ನ್ಯಾಯ ಮತ್ತು ಶಾಂತಿ (CJP) ಸಂಘಟನೆಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿಯಾದ್ಯಂತ ವಿಧಿಸಲಾಗಿದ್ದ ನಿರ್ಬಂಧಗಳು ಹಾಗೂ ಪೊಲೀಸರ ಕ್ರಮಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಪ್ರತಿಭಟನೆಯ ಸಂದರ್ಭದಲ್ಲಿ ಹಲವರನ್ನು ವಶಕ್ಕೆ ಪಡೆದಿರುವ ದೆಹಲಿ ಪೊಲೀಸರ ಕ್ರಮವನ್ನೂ ಅರ್ಜಿದಾರರು ಪ್ರಶ್ನಿಸಿದ್ದರು.

ಕಪಿಲ್ ಸಿಬಲ್ ಹೇಳಿದ್ದೇನು?

ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಕಪಿಲ್ ಸಿಬಲ್, ಚುನಾವಣಾ ಪಟ್ಟಿಯಲ್ಲಿನ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಪದೇಪದೆ ಸುಪ್ರೀಂ ಕೋರ್ಟ್‌ನ ಮೊರೆ ಹೋಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

“ಸುಪ್ರೀಂ ಕೋರ್ಟ್‌ಗೆ ಹೋಗಿ ನಮಗೆ ಸುಸ್ತಾಗಿದೆ. ಅಲ್ಲಿಗೆ ಹೋಗುವುದರಲ್ಲಿ ಯಾವುದೇ ಅರ್ಥವಿಲ್ಲ ಎಂಬ ಭಾವನೆ ನನ್ನ ಮನಸ್ಸಿನಲ್ಲಿ ಮೂಡುತ್ತಿದೆ” ಎಂದು ಅವರು ಹೇಳಿದ್ದರು. ಅಂತೆಯೇ ಇದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜ್ಯಸಭಾ ಸದಸ್ಯ ಸಿಬಲ್ ಸ್ಪಷ್ಟಪಡಿಸಿದ್ದರು.

ಚುನಾವಣಾ ಪಟ್ಟಿಯಲ್ಲಿನ ಅಕ್ರಮಗಳ ಆರೋಪಗಳ ಕುರಿತು ನ್ಯಾಯಾಲಯದ ಮೊರೆ ಹೋಗುತ್ತಿದ್ದರೂ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ ಎಂಬ ತಮ್ಮ ಅಸಮಾಧಾನವನ್ನು ಅವರು ಈ ಮೂಲಕ ವ್ಯಕ್ತಪಡಿಸಿದ್ದರು.

ಶಾಂತಿಯುತ ಪ್ರತಿಭಟನೆಗೆ ನಿರ್ಬಂಧ ಏಕೆ?

ಇದೇ ವೇಳೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ಅನ್ನು ಸಾರ್ವಜನಿಕ ಪ್ರತಿಭಟನೆಗಳ ಸಂದರ್ಭದಲ್ಲಿ ಬಳಸಿರುವುದನ್ನೂ ಸಿಬಲ್ ಪ್ರಶ್ನಿಸಿದ್ದರು. ಒಬ್ಬ ವ್ಯಕ್ತಿ ಅಥವಾ ಸಮುದಾಯ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದರಿಂದ ಸಮಾಜಕ್ಕೆ ಅಪಾಯ ಉಂಟಾಗುವುದಿಲ್ಲ ಎಂದು ವಾದಿಸಿದ್ದ ಅವರು, ಪ್ರತಿಭಟನೆ ನಡೆಸುವವರ ವಿರುದ್ಧ ಇಂತಹ ಕಾನೂನು ಕ್ರಮಗಳನ್ನು ಕೈಗೊಳ್ಳುವ ಅಗತ್ಯವೇನು ಎಂದು ಪ್ರಶ್ನಿಸಿದ್ದರು.

“ಒಬ್ಬ ಯುವಕ ರೈಲನ್ನು ಹತ್ತಿದರೆ ಆತನನ್ನು ಬಂಧಿಸುತ್ತೀರಾ? ಯಾವ ಆಧಾರದ ಮೇಲೆ ಬಂಧಿಸುತ್ತೀರಿ? ಇದೆಂಥ ಕಾನೂನು?” ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದ್ದರು. ಅಲ್ಲದೆ ಕೂಡಲೇ ಬಂಧಿತರನ್ನು ಎಲ್ಲಿಗೆ ಕರೆದೊಯ್ಯಲಾಗಿದೆ ಎಂದು ತಿಳಿಸಿ ಎಂದು ಗರಂ ಆಗಿದ್ದರು. ಬಂಧಿತ ವ್ಯಕ್ತಿಗಳ ಸ್ಥಳದ ಬಗ್ಗೆ ಮಾಹಿತಿ ನೀಡದಿರುವುದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂಬುದು ಅವರ ವಾದವಾಗಿತ್ತು.

ಸಿಜೆಐ ಬಗ್ಗೆ ಅಸಮಾಧಾನವಲ್ಲ, ಜನರ ಹಕ್ಕುಗಳಿಗಾಗಿ ಹೋರಾಟ

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಗ್ಗೆ ಅಸಮಾಧಾನವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಸಿಬಲ್, ಇದು ವೈಯಕ್ತಿಕ ತೃಪ್ತಿ ಅಥವಾ ಅತೃಪ್ತಿಯ ವಿಚಾರವಲ್ಲ ಎಂದು ಸ್ಪಷ್ಟಪಡಿಸಿದ್ದರು. “ನಾವು ವಕೀಲರು. ನಾವು ಸಂತೋಷವಾಗಿದ್ದೇವೆಯೇ ಅಥವಾ ಅಸಂತೋಷವಾಗಿದ್ದೇವೆಯೇ ಎಂಬುದು ಇಲ್ಲಿ ಪ್ರಶ್ನೆಯಲ್ಲ. ಜನರಿಗಾಗಿ ನಾವು ಹೋರಾಡಬೇಕು” ಎಂದು ಅವರು ಹೇಳಿದ್ದರು.

ಇದೀಗ ಸಿಬಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ನ್ಯಾಯಾಂಗ ವ್ಯವಸ್ಥೆಯ ಮೇಲಿನ ಅವರ ವಿಶ್ವಾಸವನ್ನು ಮರುಸ್ಥಾಪಿಸುವ ಬದ್ಧತೆಯನ್ನು ವ್ಯಕ್ತಪಡಿಸಿದೆ. ಈ ಬೆಳವಣಿಗೆಯು ನ್ಯಾಯಾಂಗದ ಮೇಲಿನ ವಿಶ್ವಾಸ, ನಾಗರಿಕರ ಹಕ್ಕುಗಳು ಹಾಗೂ ಶಾಂತಿಯುತ ಪ್ರತಿಭಟನೆಗಳ ಮೇಲಿನ ನಿರ್ಬಂಧಗಳ ಕುರಿತ ಚರ್ಚೆಗೆ ಮತ್ತಷ್ಟು ಮಹತ್ವ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!