ಸಾಂದರ್ಭಿಕ ಚಿತ್ರ 
ದೇಶ

ಕೊಲ್ಲಾಪುರ: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಕಣಿವೆಗೆ ತಳ್ಳಿ ಕೊಲೆಗೈದ ಬಾಯ್​ಫ್ರೆಂಡ್​!

ಆರಂಭದಲ್ಲಿ ಯುವತಿ ನಾಪತ್ತೆಯಾಗಿರುವುದಾಗಿ ಬಿಂಬಿಸಲಾಗಿತ್ತು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕೊಲ್ಲಾಪುರ: ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ, ಯುವಕನೊಬ್ಬ ತನ್ನನ್ನು ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಜಲಪಾತವೊಂದರ ಸಮೀಪವಿರುವ ಆಳವಾದ ಕಂದಕಕ್ಕೆ ತಳ್ಳಿ ಕೊಲೆಗೈದ ಘಟನೆ ನಡೆದಿದೆ.

ಆರಂಭದಲ್ಲಿ ಯುವತಿ ನಾಪತ್ತೆಯಾಗಿರುವುದಾಗಿ ಬಿಂಬಿಸಲಾಗಿತ್ತು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕೊನೆಗೂ ಪ್ರಕರಣವನ್ನು ಭೇದಿಸಿದ ಪೊಲೀಸರು, ನಾಯ್ಕವಾಡಿ ಜಲಪಾತದ ಸಮೀಪದ ಕಂದಕದಿಂದ ಯುವತಿ ತರನ್ನಮ್ ಅವರ ಮೃತದೇಹವನ್ನು ಹೊರತೆಗೆದಿದ್ದಾರೆ. ಅಲ್ಲದೆ ಕೊನೆ ಮಾಡಿದ ಆರೋಪದ ಮೇಲೆ ಆಕೆಯ ಬಾಯ್ ಫ್ರೆಂಡ್, ಶ್ರೀಪಾದ್ ವದಾರ್(25) ನನ್ನು ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಕ್ಟೋಬರ್ 9 ರಂದು ಭುದರಗಢ ತಾಲೂಕಿನ ಪಾಟ್ಗಾಂವ್ ಗ್ರಾಮದ ಸಮೀಪವಿರುವ ಪ್ರವಾಸಿ ತಾಣವೊಂದಕ್ಕೆ ವದಾರ್, ತರನ್ನಮ್ ಅವರನ್ನು ಕರೆದೊಯ್ದಾಗ ಈ ಘಟನೆ ನಡೆದಿದೆ ಎಂದು ಭುದರಗಢ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೀಪ್ ಜಗತಾಪ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಗಾರ್ಗೋಟಿ ಪಟ್ಟಣದ ನಿವಾಸಿಗಳಾದ ಇವರಿಬ್ಬರೂ ಕಳೆದ ನಾಲ್ಕೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ನಾಲ್ಕು ತಿಂಗಳ ಹಿಂದೆ ತರನ್ನಮ್ ಗೆ ಮದುವೆ ನಿಶ್ಚಯವಾಗಿದ್ದರಿಂದ ಆಕೆ ವದಾರ್‌ನಿಂದ ದೂರವಿರಲು ಯತ್ನಿಸುತ್ತಿದ್ದಳು ಎಂದು ಅವರು ಹೇಳಿದ್ದಾರೆ.

ಆಕೆಯ ನಡವಳಿಕೆಯಿಂದ ಆಕ್ರೋಶಗೊಂಡ ವದಾರ್, ಆಕೆ ಮದುವೆಯಾಗುವ ಮುನ್ನ ಅಂತಿಮವಾಗಿ ಭೇಟಿಯಾಗಲು ಆಕೆಯನ್ನು ಈ ಸ್ಥಳಕ್ಕೆ ಕರೆದೊಯ್ದಿದ್ದನು. ಈ ವೇಳೆ ವದಾರ್ ಆಕೆಗೆ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಾನೆ. ಆದರೆ ಆಕೆ ನಿರಾಕರಿಸಿದಾಗ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಬಳಿಕ ಆಕೆಯನ್ನು ಕಂದಕಕ್ಕೆ ತಳ್ಳಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಂತರ ಮನೆಗೆ ಮರಳಿದ ಆತ, ತರನ್ನಮ್ ನಾಪತ್ತೆಯಾಗಿದ್ದಾಳೆ ಎಂದು ತನ್ನ ಕುಟುಂಬಕ್ಕೆ ಹೇಳಿದ್ದಾನೆ.

ಆರಂಭದಲ್ಲಿ ಇದು ನಾಪತ್ತೆ ಪ್ರಕರಣದಂತೆ ಕಂಡುಬಂದರೂ, ಘಟನೆಯ ಬಗ್ಗೆ ಆರೋಪಿ ನೀಡಿದ ಹೇಳಿಕೆಯಲ್ಲಿನ ವ್ಯತ್ಯಾಸಗಳನ್ನು ಗಮನಿಸಿದ ಪೊಲೀಸರ, ತೀವ್ರ ವಿಚಾರಣೆಯ ನಂತರ ಆತ ಸತ್ಯವನ್ನು ಒಪ್ಪಿಕೊಂಡಿದ್ದಾನೆ. ಸಂತ್ರಸ್ತೆಯನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡನು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!