ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರಿದ್ದ ಕಾರಣ ನಿಯಂತ್ರಣ ತಪ್ಪಿ ನದಿಯ ಮಧ್ಯದಲ್ಲೇ ಮುಳುಗಿತು ಎಂದು ಸ್ಥಳೀಯರು ತಿಳಿಸಿದ್ದಾರೆ. 
ದೇಶ

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

ಮೂಲಗಳ ಪ್ರಕಾರ, ದುರಂತಕ್ಕೀಡಾದ ದೋಣಿಯಲ್ಲಿದ್ದವರಲ್ಲಿ ಹೆಚ್ಚಿನವರು ಮಕ್ಕಳು. ನದಿಯ ಆಚೆಗಿನ ಗ್ರಾಮದಲ್ಲಿ ನಡೆಯುತ್ತಿದ್ದ ಔತಣಕೂಟದಲ್ಲಿ ಪಾಲ್ಗೊಳ್ಳಲು ರಾಮ್‌ಪುರ ಶ್ಯಾಮಚಂದ್ ಗ್ರಾಮದ ನಿವಾಸಿಗಳು ತೆರಳುತ್ತಿದ್ದಾಗ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ಸಂಭವಿಸಿದೆ.

ಬಿಹಾರದ ವೈಶಾಲಿ ಜಿಲ್ಲೆಯ ರಘೋಪುರ ಸಮೀಪ ನಿನ್ನೆ ಮಂಗಳವಾರ ತಡರಾತ್ರಿ ಸುಮಾರು 30 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಗಂಗಾ ನದಿಯಲ್ಲಿ ಮುಳುಗಿದ ಪರಿಣಾಮ ಮಕ್ಕಳೂ ಸೇರಿದಂತೆ ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ.

ಮೂಲಗಳ ಪ್ರಕಾರ, ದುರಂತಕ್ಕೀಡಾದ ದೋಣಿಯಲ್ಲಿದ್ದವರಲ್ಲಿ ಹೆಚ್ಚಿನವರು ಮಕ್ಕಳು. ನದಿಯ ಆಚೆಗಿನ ಗ್ರಾಮದಲ್ಲಿ ನಡೆಯುತ್ತಿದ್ದ ಔತಣಕೂಟದಲ್ಲಿ ಪಾಲ್ಗೊಳ್ಳಲು ರಾಮ್‌ಪುರ ಶ್ಯಾಮಚಂದ್ ಗ್ರಾಮದ ನಿವಾಸಿಗಳು ತೆರಳುತ್ತಿದ್ದಾಗ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ಸಂಭವಿಸಿದೆ. ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರಿದ್ದ ಕಾರಣ ನಿಯಂತ್ರಣ ತಪ್ಪಿ ನದಿಯ ಮಧ್ಯಭಾಗದಲ್ಲಿ ಮುಳುಗಿದೆ ಎಂದು ಸ್ಥಳೀಯರು ಹೇಳುತ್ತಾರೆ.

ವೈಶಾಲಿ ಜಿಲ್ಲಾಧಿಕಾರಿ ವರ್ಷಾ ಸಿಂಗ್ ಅವರು ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿ, “ರಘೋಪುರದಲ್ಲಿ ಗಂಗಾ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ 13 ಮಂದಿ ಮೃತಪಟ್ಟಿದ್ದು, ಆರು ಮಂದಿಯನ್ನು ರಕ್ಷಿಸಲಾಗಿದೆ” ಎಂದು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದೂ ಅವರು ಹೇಳಿದ್ದಾರೆ.

ತಿರ್ಹುತ್ ವಲಯದ ಉಪ ಪೊಲೀಸ್ ಮಹಾನಿರ್ದೇಶಕ ಚಂದನ್ ಕುಮಾರ್ ಕುಶ್ವಾಹ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಮುಳುಗು ತಜ್ಞರು, ಸ್ಥಳೀಯ ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ವೈಶಾಲಿ ಜಿಲ್ಲಾಧಿಕಾರಿ ವರ್ಷಾ ಸಿಂಗ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಶುಭಂಕರ್ ಮಿಶ್ರಾ ಅವರ ಮೇಲ್ವಿಚಾರಣೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಘಟನೆ ನಡೆದ ರಘೋಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡ ವಿಡಿಯೊದಲ್ಲಿ, ಈವರೆಗೆ 14 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಹೇಳಿದ್ದಾರೆ. ದೋಣಿಯಲ್ಲಿ 30 ಪ್ರಯಾಣಿಕರಿದ್ದರು, ಆರು ಮಂದಿಯನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ ಹಾಗೂ ಮೂವರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಈ ದುರಂತವನ್ನು “ತೀವ್ರ ನೋವುಂಟುಮಾಡುವ ಘಟನೆ” ಎಂದು ಬಣ್ಣಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವಹಾನಿ ತೀವ್ರ ನೋವುಂಟುಮಾಡಿದೆ. ಈ ಕಷ್ಟದ ಸಮಯದಲ್ಲಿ ಮೃತರ ಕುಟುಂಬಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಪ್ರಧಾನಿ, ಸಂತ್ರಸ್ತರಿಗೆ ಸ್ಥಳೀಯ ಆಡಳಿತ ನೆರವು ನೀಡುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಾಣ ಕಳೆದುಕೊಂಡ ಪ್ರತಿಯೊಬ್ಬರ ಕುಟುಂಬದ ಮುಂದಿನ ವಾರಸುದಾರರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ರೂ. ನೀಡಲಾಗುವುದು ಎಂದು ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಮೃತರ ಕುಟುಂಬದವರಿಗೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ವೈಶಾಲಿಯ ರಘೋಪುರದಲ್ಲಿ ದೋಣಿ ಅಪಘಾತದಿಂದ ಅಮಾಯಕರು ಪ್ರಾಣ ಕಳೆದುಕೊಂಡಿರುವ ಸುದ್ದಿ ಹೃದಯವಿದ್ರಾವಕವಾಗಿದೆ. ಈ ಕಷ್ಟದ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಅಗಲಿದ ಆತ್ಮಗಳಿಗೆ ಭಗವಂತ ಶಾಂತಿ ನೀಡಲಿ ಹಾಗೂ ಈ ಅಪಾರ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಗಳಿಗೆ ಕರುಣಿಸಲಿ ಎಂದು ಚೌಧರಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಲು ತೇಜಸ್ವಿ ಯಾದವ್ ಮನವಿ

ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಮತ್ತೊಂದು ಪೋಸ್ಟ್‌ನಲ್ಲಿ, ನದಿಯಲ್ಲಿ ಮುಳುಗಿದವರಲ್ಲಿ ಹೆಚ್ಚಿನವರು ಮಕ್ಕಳು ಎಂದು ಹೇಳಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ತ್ವರಿತಗೊಳಿಸುವಂತೆ ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿಯೊಂದಿಗೆ ಮಾತನಾಡಿದ್ದು, ಘಟನಾ ಸ್ಥಳಕ್ಕೆ ಸಾಧ್ಯವಾದಷ್ಟು ಹೆಚ್ಚಿನ ರಕ್ಷಣಾ ತಂಡಗಳನ್ನು ಕಳುಹಿಸುವಂತೆ ಒತ್ತಾಯಿಸಿದ್ದೇನೆ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು, ಸೆಪ್ಟೆಂಬರ್ 8ರಂದು ವೈಶಾಲಿ ಜಿಲ್ಲೆಯ ತೇರಾಸಿಯಾ ದಿಯಾರಾ ಸಮೀಪ ಗಂಗಾ ನದಿಯಲ್ಲಿ 11 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ ಒಬ್ಬರು ಮೃತಪಟ್ಟಿದ್ದರು ಹಾಗೂ ಮತ್ತೊಬ್ಬರು ನಾಪತ್ತೆಯಾಗಿದ್ದರು. ಈ ಘಟನೆಯಲ್ಲಿ ಒಂಬತ್ತು ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು. ಅವರಲ್ಲಿ ಕೆಲವರು ಈಜಿ ದಡ ಸೇರಿದ್ದರು. ಮೃತಪಟ್ಟ ವ್ಯಕ್ತಿಯನ್ನು ಚಂದನ್ ಕುಮಾರ್ ಎಂದು ಗುರುತಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!