ಮದನ್ ರಾಥೋಡ್ 
ದೇಶ

ಅಮೆರಿಕ- ಪಾಕಿಸ್ತಾನ ಯುದ್ದ ನಡೆದರೆ ಭಾರತ ಪಾಕ್ ಪರ ನಿಲ್ಲುತ್ತೆ: ಬಿಜೆಪಿ MP ಮದನ್ ರಾಥೋಡ್; ಮೋದಿಯವರ ರಾಷ್ಟ್ರೀಯವಾದ ಎಲ್ಲಿ- AAP ಕಿಡಿ

ಸಾರ್ವಜನಿಕರು ಪ್ರಶ್ನೆಗಳನ್ನು ಕೇಳಿದರೆ ಅವರು ಪಾಕಿಸ್ತಾನಿಯರು. ಯುವಕರು ಧ್ವನಿ ಎತ್ತಿದರೆ ಅವರು ಭಯೋತ್ಪಾದಕರು! ಆದರೆ, ಬಿಜೆಪಿ ನಾಯಕರೊಬ್ಬರು ಪಾಕಿಸ್ತಾನದ ಪರವಾಗಿ ನಿಲ್ಲುವ ಬಗ್ಗೆ ಮಾತನಾಡಿದಾಗ ಮೋದಿಯವರ ರಾಷ್ಟ್ರೀಯವಾದ ಎಲ್ಲಿದೆ?

ಜೈಪುರ: ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಭಾರತ ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜಸ್ಥಾನ ಬಿಜೆಪಿ ಘಟಕದ ಅಧ್ಯಕ್ಷ ಮದನ್‌ ರಾಥೋಡ್‌ ನಾಲಿಗೆ ಹರಿಬಿಟ್ಟಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಥೋಡ್‌, ಭೌಗೋಳಿಕ ಸಾಮಿಪ್ಯವನ್ನು ಉಲ್ಲೇಖಿಸಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. "ನಾವೆಲ್ಲರೂ ಇದನ್ನು ಅರ್ಥಮಾಡಿಕೊಳ್ಳಬೇಕು. ದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ನಾವು ಪಾಕಿಸ್ತಾನದ ಪರವಾಗಿ ನಿಲ್ಲುತ್ತೇವೆ, ಏಕೆಂದರೆ ಅದು ನಮ್ಮ ನೆರೆಯ ರಾಷ್ಟ್ರ.

ಆದರೆ, ನಮ್ಮದೇ ಆಂತರಿಕ ವಿಷಯಗಳಿಗೆ ಬಂದಾಗ, ನಾವು ನಮ್ಮ ಭಾರತದ ಪರವಾಗಿ ನಿಲ್ಲುತ್ತೇವೆ, ಹೌದಲ್ಲವೇ? ಇದನ್ನೇ ನಾವು ಅರ್ಥಮಾಡಿಕೊಳ್ಳಬೇಕಾಗಿರುವುದು," ಎಂದು ಅವರು ಹೇಳಿದರು. ಭಾಷಣದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿದ ನಂತರ ವಿವಾದ ಭುಗಿಲೆದ್ದಿದೆ. ವಿಪಕ್ಷಗಳು ಬಿಜೆಪಿ ನಾಯಕನನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿವೆ.

ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಆಪ್‌ ಮತ್ತು ಕಾಂಗ್ರೆಸ್‌ ಪಕ್ಷಗಳು, ಆಡಳಿತ ಪಕ್ಷದ ವಿದೇಶಾಂಗ ನೀತಿ ನಿಲುವನ್ನು ಪ್ರಶ್ನಿಸಿವೆ. ಸಂಘರ್ಷದ ಸಮಯದಲ್ಲಿ ಪಾಕಿಸ್ತಾನ ಬೆಂಬಲಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಥೋಡ್ ಅವರ ಮೂಲಕ ದೃಷ್ಟಿಕೋನವನ್ನ ಹಂಚಿಕೊಂಡಿದ್ದಾರೆಯೇ? ಭಾರತೀಯ ನಾಗರಿಕರು ಮತ್ತು ಮಿಲಿಟರಿ ಸಿಬ್ಬಂದಿ ವಿರುದ್ಧ ಪದೇ ಪದೇ ಗಡಿಯಾಚೆಗಿನ ಭಯೋತ್ಪಾದನೆ ಕೃತ್ಯ ನಡೆಸುತ್ತಿರುವ ದೇಶದ ಬಗ್ಗೆ ಬಿಜೆಪಿ ತನ್ನ ಒಲವು ಪ್ರದರ್ಶಿಸುತ್ತಿದೆ ಎಂದು ಖಂಡಿಸಿದ್ದಾರೆ.

ಕಾಂಗ್ರೆಸ್ ವಕ್ತಾರೆ ಶಾಮಾ ಮೊಹಮ್ಮದ್ ಅವರು ರಾಥೋರ್ ಅವರನ್ನು "ದೇಶವಿರೋಧಿ" ಎಂದು ಕರೆದಿದ್ದಾರೆ. ನಮ್ಮ ಸೈನಿಕರನ್ನು ಮತ್ತು ನಮ್ಮ ಜನರನ್ನು ಕೊಲ್ಲುವ ಭಯೋತ್ಪಾದಕ ರಾಷ್ಟ್ರ ಪಾಕಿಸ್ತಾನದ ಮೇಲಿನ ಬಿಜೆಪಿಯ ಪ್ರೀತಿ ಮತ್ತೊಮ್ಮೆ ಬಯಲಾಗಿದೆ. ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ತಾನು ಪಾಕಿಸ್ತಾನದ ಪರವಾಗಿ ನಿಲ್ಲುವುದಾಗಿ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋರ್ ಹೇಳಿದ್ದಾರೆ. ಈ ದೇಶದ್ರೋಹಿಯ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದನ್ನು ನಮಗೆ ತಿಳಿಸಿ," ಎಂದು ಅವರು 'ಎಕ್ಸ್' (X) ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (AAP) ಕೂಡ ರಾಥೋರ್ ಅವರ ಹೇಳಿಕೆಯ ವಿಡಿಯೋ ತುಣುಕನ್ನು ಹಂಚಿಕೊಂಡು, ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದೆ. ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ನಾವು ಪಾಕಿಸ್ತಾನದ ಪರವಾಗಿ ನಿಲ್ಲುತ್ತೇವೆ. ಸಾರ್ವಜನಿಕರು ಪ್ರಶ್ನೆಗಳನ್ನು ಕೇಳಿದರೆ ಅವರು ಪಾಕಿಸ್ತಾನಿಯರು.

ಯುವಕರು ಧ್ವನಿ ಎತ್ತಿದರೆ ಅವರು ಭಯೋತ್ಪಾದಕರು! ಆದರೆ, ಬಿಜೆಪಿ ನಾಯಕರೊಬ್ಬರು ಪಾಕಿಸ್ತಾನದ ಪರವಾಗಿ ನಿಲ್ಲುವ ಬಗ್ಗೆ ಮಾತನಾಡಿದಾಗ, ಮೋದಿಯವರ ರಾಷ್ಟ್ರೀಯವಾದ ಎಲ್ಲಿದೆ? ಪಾಕಿಸ್ತಾನದ ಪರವಾಗಿ ನಿಲ್ಲುವ ಬಗ್ಗೆ ಮಾತನಾಡುವ ಬಿಜೆಪಿ ದೇಶದ್ರೋಹಿಯಲ್ಲವೇ, ಮೋದಿಯವರೇ?" ಎಂದು ಅದು ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್