ಚೆನ್ನೈ: ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡದ ಸಹ-ಒಡತಿ ಕಾವ್ಯಾ ಮಾರನ್ ವಿವಾಹದ ಅಧಿಕೃತವಾಗಿದೆ. ಸಂಗೀತ ನಿರ್ದೇಶಕ ಅನಿರುದ್ಧ್ ಹಾಗೂ ಸನ್ ಗ್ರೂಪ್ ಮಾಲೀಕರ ಮಗಳು ಕಾವ್ಯಾ ಮಾರನ್ ಅವರ ಮದುವೆಯ ಕುರಿತು ಮಹತ್ವದ ಸುದ್ಧಿಯೊಂದು ಹೊರಬಿದ್ದಿದೆ.
ಇವರ ಮದುವೆ ಸ್ವಾಗತ ಸಮಾರಂಭದ ದಿನಾಂಕ ಅಧಿಕೃತವಾಗಿ ನಿಗದಿಯಾಗಿದೆ. ಈ ಬಗ್ಗೆ ಎಲ್ಲೆಡೆ ವ್ಯಾಪಕವಾದ ಚರ್ಚೆಗಳು ಆರಂಭವಾಗಿವೆ. ನವೆಂಬರ್ 21ರಂದು ಚೆನ್ನೈನಲ್ಲಿ ನಡೆಯಲಿರುವ ಆರತಕ್ಷತೆ ಸಮಾರಂಭದ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಸಿನಿಮಾ ಮತ್ತು ಕ್ರಿಕೆಟ್ ವಲಯದಲ್ಲಿ ಈ ಸುದ್ದಿ ಚರ್ಚೆಗೆ ಕಾರಣವಾಗಿದೆ.
ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್ ಗ್ರೂಪ್ ಮಾಲೀಕ ಕಲಾನಿಧಿ ಮಾರನ್ ಅವರ ಪುತ್ರಿ ಕಾವ್ಯಾ ಮಾರನ್ ವಿವಾಹದ ಕುರಿತು ಹಲವು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಗೆ ಈಗ ಹೊಸ ತಿರುವು ಸಿಕ್ಕಿದೆ.
ನವೆಂಬರ್ 21ರಂದು ಚೆನ್ನೈನಲ್ಲಿ ಅನಿರುದ್ಧ್ ಮತ್ತು ಕಾವ್ಯಾ ಮಾರನ್ ಆರತಕ್ಷತೆ ಸಮಾರಂಭ ನಡೆಯಲಿದೆ. ಅದಕ್ಕೂ ಮುನ್ನವೇ ಗ್ರೀಸ್ ನಲ್ಲಿ ಸಂಪ್ರದಾಯಬದ್ದವಾದ ವಿವಾಹ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುವ ಪ್ರಕ್ರಿಯೆ ಆರಂಭವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಇದರಿಂದಾಗಿ ಈ ಜೋಡಿಯ ವಿವಾಹದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ಆದರೆ, ಆರತಕ್ಷತೆಯ ದಿನಾಂಕದ ಮಾಹಿತಿ ಲಭ್ಯವಾಗಿದ್ದರೂ, ಮದುವೆಯ ನಿಖರ ದಿನಾಂಕ ಮತ್ತು ಸ್ಥಳದ ಕುರಿತು ಜೋಡಿಯ ಕಡೆಯಿಂದ ಅಧಿಕೃತ ಘೋಷಣೆ ಹೊರಬಿದ್ದಿಲ್ಲ ಎಂಬುದನ್ನು ಗಮನಿಸಬೇಕು.
ಸನ್ ಗ್ರೂಪ್ ಅಧ್ಯಕ್ಷ ಕಲಾನಿಧಿ ಮಾರನ್ ಮತ್ತು ಪತ್ನಿ ಕಾವೇರಿ ಮಾರನ್ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ ಎಂಬ ವರದಿಗಳು ಪ್ರಕಟವಾಗಿವೆ. ಈ ಆಹ್ವಾನದ ವಿಚಾರ ಸಾರ್ವಜನಿಕವಾಗಿ ಚರ್ಚೆಗೆ ಬಂದ ಬಳಿಕ ಅನಿರುದ್ಧ್ ಮತ್ತು ಕಾವ್ಯಾ ಮಾರನ್ ಮದುವೆಯ ಸುದ್ದಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.
ರಾಜಕೀಯ, ಸಿನಿಮಾ ಮತ್ತು ಉದ್ಯಮ ಕ್ಷೇತ್ರದ ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯೂ ವ್ಯಕ್ತವಾಗಿದೆ. ಆದರೆ, ಕಾರ್ಯಕ್ರಮಕ್ಕೆ ಹಾಜರಾಗುವ ಅತಿಥಿಗಳ ಸಂಪೂರ್ಣ ಪಟ್ಟಿ ಇನ್ನೂ ಬಹಿರಂಗವಾಗಿಲ್ಲ.
ಅನಿರುದ್ಧ್ ಮತ್ತು ಕಾವ್ಯಾ ಮಾರನ್ ಹೆಸರುಗಳನ್ನು ಜೋಡಿಸಿ ಈ ಹಿಂದೆ ಹಲವು ಬಾರಿ ಮದುವೆಯ ವದಂತಿಗಳು ಹರಿದಾಡಿದ್ದವು. ಈ ಸುದ್ದಿಗಳ ಕುರಿತು ಅನಿರುದ್ಧ್ ಹಿಂದೆ ಪ್ರತಿಕ್ರಿಯಿಸಿ, ತಮ್ಮ ಮದುವೆಯ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳನ್ನು ತಳ್ಳಿಹಾಕಿದ್ದರು ಎಂಬ ವರದಿಗಳಿವೆ. ಹೀಗಾಗಿ ಈ ಜೋಡಿಯ ನಡುವಿನ ಸಂಬಂಧದ ಬಗ್ಗೆ ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳು ಮೂಡಿದ್ದವು.
ಇದೀಗ ಆರತಕ್ಷತೆ ಕಾರ್ಯಕ್ರಮದ ಆಹ್ವಾನದ ಸುದ್ದಿ ಹೊರಬಂದಿರುವುದರಿಂದ ಮತ್ತೊಮ್ಮೆ ಚರ್ಚೆ ಆರಂಭವಾಗಿದೆ. ಆದರೂ, ಮದುವೆಯ ದಿನಾಂಕ, ಸ್ಥಳ ಮತ್ತು ಇತರ ವಿವರಗಳನ್ನು ಅಧಿಕೃತವಾಗಿ ಖಚಿತಪಡಿಸಿಕೊಳ್ಳಲು ಜೋಡಿ ಅಥವಾ ಕುಟುಂಬದ ಪ್ರಕಟಣೆಗೆ ಕಾಯಬೇಕಿದೆ.
ಆದರೆ, ಈ ದಿನಾಂಕ ಅಥವಾ ಸ್ಥಳದ ಬಗ್ಗೆ ಅಧಿಕೃತ ಮಾಹಿತಿ ಇರುವ ಯಾರೂ ಇದನ್ನು ಖಚಿತಪಡಿಸಿಲ್ಲ. ಅನಿರುದ್ಧ್ ಆಗಲಿ ಅಥವಾ ಕಾವ್ಯಾ ಆಗಲಿ ಈ ಬಗ್ಗೆ ಏನನ್ನೂ ಹೇಳಿಲ್ಲ. ಮಾರನ್ ಕುಟುಂಬವಂತೂ ಈ ಸಮಾರಂಭದ ಕುರಿತು ಎಲ್ಲಿಯೂ ಅಧಿಕೃತವಾಗಿ ಏನನ್ನೂ ತಿಳಿಸಿಲ್ಲ