ಜೈರಾಮ್ ರಮೇಶ್ online desk
ದೇಶ

ಜ್ಞಾನೇಶ್ ಕುಮಾರ್'ರನ್ನು ಉಳಿಸಲು ಯಾರಿಂದಲೂ ಸಾಧ್ಯವಿಲ್ಲ, CEC ಹುದ್ದೆಯಿಂದ ಕೆಳಗಿಳಿಯಲೇಬೇಕು: ಕಾಂಗ್ರೆಸ್

ಮಧ್ಯಪ್ರದೇಶದಲ್ಲಿ ಲಕ್ಷಾಂತರ ನಕಲಿ ಮತದಾರರನ್ನು ಕಾಂಗ್ರೆಸ್ ಪತ್ತೆಹಚ್ಚಿದ 2018ರಲ್ಲಿ ಚುನಾವಣಾ ಆಯೋಗವು ಹುಡುಕಬಹುದಾದ ಮತದಾರರ ಪಟ್ಟಿಗಳನ್ನು ಒದಗಿಸುವುದನ್ನು ನಿಲ್ಲಿಸಿತ್ತು. ಆ ಬಳಿಕ ಎಂಟು ವರ್ಷಗಳ ಕಾಲ ನಮ್ಮ ಬೇಡಿಕೆಯನ್ನು ತಿರಸ್ಕರಿಸಲಾಯಿತು.

ನವದೆಹಲಿ: ಮತದಾರರ ಪಟ್ಟಿಗಳನ್ನು ಓದಬಹುದಾದ ಮತ್ತು ಹುಡುಕಬಹುದಾದ ರೂಪದಲ್ಲಿ ರಾಜಕೀಯ ಪಕ್ಷಗಳಿಗೆ ಒದಗಿಸಲು ಚುನಾವಣಾ ಆಯೋಗ ನಿರ್ಧರಿಸಿರುವ ಬೆನ್ನಲ್ಲೇ ಕಾಂಗ್ರೆಸ್, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದೆ.

ದೇಶಾದ್ಯಂತ ನಡೆಯುತ್ತಿರುವ ‘ಮತ ಕಳ್ಳತನ’ ವಿರೋಧಿ ಪ್ರತಿಭಟನೆಗಳ ಒತ್ತಡದಿಂದಲೇ ಆಯೋಗ ಈ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗವು ಎಲ್ಲಾ ರಾಜಕೀಯ ಪಕ್ಷಗಳಿಗೆ ಹುಡುಕಬಹುದಾದ ಮಾದರಿಯಲ್ಲಿರುವ ಮತದಾರರ ಪಟ್ಟಿಗಳನ್ನು ಒದಗಿಸಬೇಕು ಎಂದು ನಿರಂತರವಾಗಿ ಒತ್ತಾಯಿಸುತ್ತಿವೆ.

ಮಧ್ಯಪ್ರದೇಶದಲ್ಲಿ ಲಕ್ಷಾಂತರ ನಕಲಿ ಮತದಾರರನ್ನು ಕಾಂಗ್ರೆಸ್ ಪತ್ತೆಹಚ್ಚಿದ 2018ರಲ್ಲಿ ಚುನಾವಣಾ ಆಯೋಗವು ಹುಡುಕಬಹುದಾದ ಮತದಾರರ ಪಟ್ಟಿಗಳನ್ನು ಒದಗಿಸುವುದನ್ನು ನಿಲ್ಲಿಸಿತ್ತು. ಆ ಬಳಿಕ ಎಂಟು ವರ್ಷಗಳ ಕಾಲ ನಮ್ಮ ಬೇಡಿಕೆಯನ್ನು ತಿರಸ್ಕರಿಸಲಾಯಿತು. ಮತ ಕಳ್ಳತನಕ್ಕೆ ಅವಕಾಶ ಕಲ್ಪಿಸುವುದಕ್ಕಾಗಿಯೇ ಹೀಗೆ ಮಾಡಲಾಯಿತು ಎಂದು ಆರೋಪಿಸಿದ್ದಾರೆ.

2026ರ ಅಕ್ಟೋಬರ್ 15ರಂದು ಚುನಾವಣಾ ಆಯೋಗವು ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR) ಪ್ರಕ್ರಿಯೆಗಾಗಿ ರಾಜಕೀಯ ಪಕ್ಷಗಳಿಗೆ ಹುಡುಕಬಹುದಾದ ಮಾದರಿಯಲ್ಲಿ ಮತದಾರರ ಪಟ್ಟಿಗಳನ್ನು ಒದಗಿಸುವ ಆದೇಶ ಹೊರಡಿಸಿದೆ. ಎರಡು ವರ್ಷಗಳ ವಿರಾಮದ ಬಳಿಕ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪರಿಷ್ಕರಣೆ ಮತ್ತೆ ಆರಂಭವಾಗಿದೆ.

ಮತ ಕಳ್ಳರ ವಿರುದ್ಧ ಇಡೀ ದೇಶವೇ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ಪ್ರತಿ ಬಾರಿ ಮತ ಕಳ್ಳತನ ಬಯಲಾದಾಗಲೂ ಮೋದಿ ಸರ್ಕಾರ ಹೊಸ ತಂತ್ರವನ್ನು ಅನುಸರಿಸುತ್ತದೆ. ಓದಬಹುದಾದ ಮತದಾರರ ಪಟ್ಟಿಗಳನ್ನು ನೀಡುವುದನ್ನು ನಿಲ್ಲಿಸುವುದು, ನಕಲಿ ಮತದಾರರನ್ನು ಸೇರಿಸುವುದು, SIR ಜಾರಿಗೊಳಿಸುವುದು ಹೀಗೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಈ ಬಾರಿ ಅದು ನಡೆಯುವುದಿಲ್ಲ.

ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯಂತೆ ಕಾರ್ಯನಿರ್ವಹಿಸಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯೋಗದ ಮೇಲಿನ ಜನರ ನಂಬಿಕೆ ಮತ್ತು ವಿಶ್ವಾಸವನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರು ಹುದ್ದೆಯಿಂದ ನಿರ್ಗಮಿಸಲೇಬೇಕು. ಆದರೆ, ಅದೊಂದೇ ಸಾಕಾಗುವುದಿಲ್ಲ. ಚುನಾವಣಾ ಆಯೋಗದ ಸಂಪೂರ್ಣ ವ್ಯವಸ್ಥೆ ಹಾಗೂ ಅದರ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯನ್ನೂ ಸಮಗ್ರವಾಗಿ ಪುನರ್‌ರಚಿಸಬೇಕು. ದೇಶದ 13 ಕೋಟಿಗೂ ಅಧಿಕ ಜನರ ಸಂವಿಧಾನಬದ್ಧ ಮತದಾನದ ಹಕ್ಕನ್ನು ಅಪಾಯಕ್ಕೆ ಸಿಲುಕಿಸಿರುವ SIR ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳನ್ನೂ ಒಳಗೊಂಡಂತೆ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಾರ್ಷಿಕ ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ (SSR) ನಡೆಸುವಂತೆ ಚುನಾವಣಾ ಆಯೋಗ ಆದೇಶಿಸಿದೆ.

ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಂತಿಮ ಮತದಾರರ ಪಟ್ಟಿಯನ್ನು ಜನವರಿ 4ರಂದು ಪ್ರಕಟಿಸಲಾಗುವುದು. ಚುನಾವಣಾ ಕಾನೂನಿನ ಅಡಿಯಲ್ಲಿ SSR ವಾರ್ಷಿಕವಾಗಿ ನಡೆಸಬೇಕಾದ ಪ್ರಕ್ರಿಯೆಯಾಗಿದೆ ಎಂದು ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ವಿಧಾನಸಭಾ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಈ ಪರಿಷ್ಕರಣೆಯನ್ನು ವಿಶೇಷವಾಗಿ ಕೈಗೊಳ್ಳಲಾಗುತ್ತದೆ. ಈ 17 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಈಗಾಗಲೇ ಪೂರ್ಣಗೊಂಡಿದೆ. ಕಾನೂನು ಸಂಬಂಧಿತ ಕಾರಣಗಳಿಂದಾಗಿ ಅಸ್ಸಾಂನಲ್ಲಿ SIR ಬದಲಿಗೆ ವಿಶೇಷ ಪರಿಷ್ಕರಣೆ ನಡೆಸಲಾಗಿದೆ.

ಮೊದಲ ಬಾರಿಗೆ ಕರಡು ಮತ್ತು ಅಂತಿಮ ಮತದಾರರ ಪಟ್ಟಿಗಳನ್ನು ಮುದ್ರಿತ ಹಾಗೂ ಡಿಜಿಟಲ್ ರೂಪಗಳಲ್ಲಿ ‘ಓದಬಹುದಾದ’ ಮಾದರಿಯಲ್ಲಿ ರಾಜಕೀಯ ಪಕ್ಷಗಳಿಗೆ ಒದಗಿಸಲಾಗುತ್ತದೆ. ಚುನಾವಣೆ ನಡೆಯಲಿರುವ ರಾಜ್ಯಗಳ ಅಭ್ಯರ್ಥಿಗಳಿಗೂ ಕರಡು ಮತ್ತು ಅಂತಿಮ ಮತದಾರರ ಪಟ್ಟಿಗಳನ್ನು ನೀಡಲಾಗುತ್ತದೆ. ಚುನಾವಣೆಗೆ ಮುನ್ನ ಮತದಾರರ ನೋಂದಣಿ ಅಧಿಕಾರಿಗಳು (ERO) ಇತರ ವ್ಯಕ್ತಿಗಳಿಗೂ ಈ ಪಟ್ಟಿಗಳನ್ನು ಮಾರಾಟದ ಮೂಲಕ ಲಭ್ಯವಾಗುವಂತೆ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Kolkata Durga Puja stampede ಕೇಸ್: ಪೂಜಾ ಸಮಿತಿ ಕಾರ್ಯದರ್ಶಿ ಸೇರಿ 7 ಮಂದಿ ಬಂಧನ; SIT ತನಿಖೆಗೆ ಆದೇಶ, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ..!

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ: ಸಾವಿನ ಸಂಖ್ಯೆ 19ಕ್ಕೆ ಏರಿಕೆ; ಆಯೋಜಕರು ಸೇರಿ 12 ಮಂದಿ ವಶಕ್ಕೆ, ಮೃತರ ಕುಟುಂಬಕ್ಕೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ..!

CM ಡಿಕೆ.ಶಿವಕುಮಾರ್ ಭರವಸೆಗೂ ಜಗ್ಗದ ಕಬ್ಬು ಬೆಳೆಗಾರರು: ಹೋರಾಟ ಮುಂದುವರಿಸಲು ನಿರ್ಧಾರ..!

ತಲಕಾವೇರಿ ಬ್ರಹ್ಮಕುಂಡಿಕೆಯಲ್ಲಿ ತೀರ್ಥೋದ್ಭವ: ಪವಿತ್ರ ಕ್ಷಣಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು..!

ಗೂಗಲ್ ಮ್ಯಾಪ್ ನಂಬಿ ಕೆಟ್ಟ ಟೆಕ್ಕಿಗಳು: ಚೆನ್ನೈ ಬದಲು ಚಾಮರಾಜನಗರ ಸಮೀಪ ಹಳ್ಳಕ್ಕೆ ಬಿದ್ದ ಕಾರು