ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಎಂಟು ಕಾರ್ಮಿಕರು ಮೃತಪಟ್ಟಿದ್ದು, ಇತರ 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 
ದೇಶ

ಪಂಜಾಬ್‌: ಕಾರು ಡಿಕ್ಕಿಯಾಗಿ 8 ಮಂದಿ ನರೇಗಾ ಕಾರ್ಮಿಕರು ದಾರುಣ ಸಾವು

ಮೃತರೆಲ್ಲರೂ ಅಲಿಶೇರ್ ಗ್ರಾಮದ ನಿವಾಸಿಗಳು. ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿದ್ದು, 12 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರಿಂದ ನಾಲ್ವರನ್ನು ಸಂಗ್ರೂರ್ ಸಿವಿಲ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

ಪಂಜಾಬ್‌ನ ಸಂಗ್ರೂರ್ ಜಿಲ್ಲೆಯಲ್ಲಿ ಅಲಿಶೇರ್ ಗ್ರಾಮದ ಸಮೀಪ ಜಖಲ್‌-ಲೆಹ್ರಾ ರಸ್ತೆಯ ಬದಿಯಲ್ಲಿ ಕೆಲಸ ಮಾಡುತ್ತಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಯ ಎಂಟು ಕಾರ್ಮಿಕರು ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ಅಲಿಶೇರ್ ಗ್ರಾಮದ ನಿವಾಸಿಗಳು. ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿದ್ದು, 12 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರಿಂದ ನಾಲ್ವರನ್ನು ಸಂಗ್ರೂರ್ ಸಿವಿಲ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಂಗ್ರೂರ್ ಜಿಲ್ಲಾಧಿಕಾರಿ ಪೂನಮ್‌ದೀಪ್ ಕೌರ್, ಜಿಲ್ಲಾಡಳಿತ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.

ಗಾಯಾಳುಗಳಿಗೆ ವೈದ್ಯಕೀಯ ನೆರವು ಒದಗಿಸುವುದು ಮತ್ತು ಸಂತ್ರಸ್ತರು ಹಾಗೂ ಅವರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ರೀತಿಯ ಸಹಾಯ ನೀಡಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ತಿಳಿಸಿದರು.

ಅಪಘಾತದ ಕುರಿತು ತನಿಖೆ ನಡೆಯುತ್ತಿದೆ ಎಂದು ಸಂಗ್ರೂರ್ ಪೊಲೀಸ್ ವರಿಷ್ಠಾಧಿಕಾರಿ ಪಾಲ್ವಿಂದರ್ ಚೀಮಾ ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಅವರು, ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

ಈ ದುರ್ಘಟನೆಗೆ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ನಟ ಸೇರಿ ಮೂವರಿಗೆ ಗಾಯ; ಬೆಚ್ಚಿಬಿದ್ದ ಜನತೆ, Video!

ಮತದಾರರ ಪಟ್ಟಿಯಲ್ಲಿ ಕೈ ಬಿಟ್ಟ ಹೆಸರು ಮರುಸೇರ್ಪಡೆಗೊಳಿಸಲು 'ನಮೂನೆ 6' ಬಳಸಬಹುದು: ಹೈಕೋರ್ಟ್‌ಗೆ ಚುನಾವಣಾ ಆಯೋಗದ ಮಾಹಿತಿ

ನಟ ಸುದೀಪ್‌-ಪ್ರಿಯಾ ದಾಂಪತ್ಯಕ್ಕೆ ಬೆಳ್ಳಿ ಹಬ್ಬದ ಸಂಭ್ರಮ; ಆಪ್ತರ ಸಮ್ಮುಖದಲ್ಲಿ ಅದ್ದೂರಿ ಸೆಲೆಬ್ರೇಷನ್! Video ನೋಡಿ

ರಾವಣನ ಹತ್ತು ತಲೆಗಳಲ್ಲಿ ರಾಹುಲ್ ಗಾಂಧಿ, ಅಖಿಲೇಶ್, ಎಲಾನ್ ಮಸ್ಕ್; ವಿವಾದಾತ್ಮಕ ಪೋಸ್ಟರ್‌ ವೈರಲ್

ಮೈಸೂರು: ಅರ್ಕೇಶ್ವರ ದೇವಸ್ಥಾನದ ಮೇಲೆ ಶಿಲುಬೆ, ಮಸೀದಿ ಚಿತ್ರ ವಿವಾದ; ಇದು ಕಲಬೆರಕೆ ಹಿಂದೂಗಳ ಕೆಲಸ, ಪ್ರತಾಪ್ ಸಿಂಹ ಆಕ್ರೋಶ, Video!